ETV Bharat / state

'ಪ್ರೀತಿ ತೋರಿಸಿದರೆ ಅಚ್ಚುಕಟ್ಟಾಗಿ ಕೆಲಸ ಮಾಡುವೆ, ದೂರು ಹೇಳಿದರೆ ರಾಜಕೀಯ ಬಿಟ್ಟು ಮನೆಯಲ್ಲಿ ಕೂರುವೆ' - Preetham Gowda

ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಪರ ಮತಯಾಚಿಸುವ ವೇಳೆ ಮಾಧ್ಯಮದವರೊಂದಿಗೆ ಪ್ರೀತಂ ಗೌಡ ಮಾತನಾಡಿದರು.

ಎನ್​ಡಿಎ ಅಭ್ಯರ್ಥಿಗೆ ಹೊಳೆನರಸೀ‍ಪುರಕ್ಕಿಂತ ಹಾಸನದಲ್ಲಿ ಒಂದು ಮತ ಜಾಸ್ತಿ ಕೊಡಿಸುವುದು ನನ್ನ ಗುರಿ: ಪ್ರೀತಂ ಗೌಡ

author img

By ETV Bharat Karnataka Team

Published : Apr 10, 2024, 4:21 PM IST

Updated : Apr 10, 2024, 6:17 PM IST

ಪ್ರೀತಂ ಗೌಡ

ಹಾಸನ: ನನಗೆ ಪ್ರೀತಿ ತೋರಿಸಿದರೆ ಅಚ್ಚುಕಟ್ಟಾಗಿ ಕೆಲಸ ಮಾಡುತ್ತೇನೆ. ಏನಾದರೂ ನನ್ನ ಮೇಲೆ ದೂರು ಹೇಳಿದರೆ ರಾಜಕೀಯವನ್ನೇ ಬಿಟ್ಟು ಮನೆಯಲ್ಲಿ ಕೂರುತ್ತೇನೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿದರು.

ಬಿಜೆಪಿಯ ಕಾರ್ಯಕರ್ತನಾಗಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗಬೇಕು ಎಂದು ಪ್ರಚಾರ ಆರಂಭಿಸಿದ್ದೇನೆ. ರಾಜ್ಯದಲ್ಲಿ 28ಕ್ಕೆ 28 ಸ್ಥಾನ ಗೆಲ್ಲುವ ಮೂಲಕ ಇಡೀ ದೇಶದಲ್ಲಿ 400ಕ್ಕೂ ಹೆಚ್ಚು ಸೀಟ್‌ಗಳನ್ನು ಗೆಲ್ಲಬೇಕು. ಹಿರಿಯರು ನಮಗೆ ಒಂದು ಜವಾಬ್ದಾರಿ ಕೊಟ್ಟಿದ್ದಾರೆ. ನಮ್ಮ ಬೂತ್ ನಂಬರ್ 89 ರಿಂದ ಪ್ರಚಾರ ಆರಂಭಿಸಿದ್ದೇವೆ. ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ದೊಡ್ಡದು. ನಾಳೆ ಸಿಮೆಂಟ್ ಮಂಜು, ಜಿಲ್ಲಾ ಬಿಜೆಪಿ ಅಧ್ಯಕ್ಷರು ಆಲೂರಿನಲ್ಲಿ ಪ್ರಚಾರ ಮಾಡಲು ಸೂಚನೆ ಕೊಟ್ಟಿದ್ದೇನೆ. ನಾನು ಈ ಚುನಾವಣೆಯನ್ನು ಚಾಲೆಂಜ್​ ಆಗಿ ತೆಗೆದುಕೊಂಡಿದ್ದೇನೆ. ಎನ್‌ಡಿಎ ಕೂಟ ಗೆಲ್ಲಿಸುವುದೇ ನಮ್ಮ ಗುರಿ ಎಂದು ಹೇಳಿದರು.

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಕ್ಕಿಂತ ಹಾಸನದಲ್ಲಿ ಒಂದು ಮತ ಹೆಚ್ಚು ಕೊಡಿಸುವುದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇನೆ. ಹೊಳೆನರಸೀಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಿಂತ ಎನ್‌ಡಿಎ ಅಭ್ಯರ್ಥಿಗೆ ಒಂದು ಮತ ಜಾಸ್ತಿ ಕೊಡಿಸುವುದು ನನ್ನ ಗುರಿ. ಯಾರೇ ಆದರೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನಲ್ಲೇ ವೋಟ್​ ಕೇಳಬೇಕು. ಕರ್ನಾಟಕದಿಂದ ಕಾಶ್ಮೀರದವರೆಗೂ ಮೋದಿ ಅವರ ಹೆಸರಿನಲ್ಲಿ ಮತ ಕೇಳಬೇಕು ಎಂದರು.

ನನಗೆ ಎರಡು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿ ಕೊಟ್ಟಿದ್ದಾರೆ. ಅತಿ ಚಿಕ್ಕ ವಯಸ್ಸಿನಲ್ಲಿಯೇ ನನ್ನನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಿದ್ದಾರೆ. ಒಬ್ಬ ಸರ್ಕಾರಿ ನೌಕರನ ಮಗನನ್ನು ರಾಜ್ಯಮಟ್ಟದಲ್ಲಿ ಬೆಳೆಸಿದ್ದೇ ಬಿಜೆಪಿ. ಬೂತ್ ಗೆದ್ದರೆ ದೇಶ ಗೆಲ್ಲಬಹುದು ಎಂಬು ಕಲ್ಪನೆ ನಮ್ಮದು. ನಾನು ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಹೈಕಮಾಂಡ್​ ತೀರ್ಮಾನ ಆದ ಮೇಲೆ ಕೆಲಸ ಮಾಡಬೇಕು. ಯಾರು ಯಾರನ್ನು ಸಂಪರ್ಕ ಮಾಡುವುದು ಇರುವುದಿಲ್ಲ. ನಮ್ಮ ರಾಜ್ಯಾಧ್ಯಕ್ಷರು ಏನು ಸೂಚನೆ ಕೊಡ್ತಾರೋ ಆ ಕೆಲಸ ಮಾಡ್ತೀನಿ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ನನ್ನನ್ನು ಸಿಎಂ ಸ್ಥಾನದಿಂದ ಇಳಿಸಲು ಸಿದ್ದೌಷಧ ಅರೆದವರು ಯಾರೆಂದು ಸಿದ್ದರಾಮಯ್ಯರನ್ನೇ ಕೇಳಲಿ: ಹೆಚ್​ಡಿಕೆ - H D Kumaraswamy

Last Updated : Apr 10, 2024, 6:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.