ETV Bharat / state

ನೈತಿಕತೆಯ ಸಿದ್ಧಾಂತ ಹೇಳುವ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ: ವಿ.ಸುನೀಲ್ ಕುಮಾರ್ - MUDA Scam

author img

By ETV Bharat Karnataka Team

Published : Aug 18, 2024, 4:55 PM IST

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಮುಡಾ ಹಗರಣದ ಕುರಿತು ಮಾತನಾಡಿ, ತನಿಖೆ ಪೂರ್ಣಗೊಳ್ಳುವವರೆಗೆ ಸಿದ್ದರಾಮಯ್ಯ ಅಧಿಕಾರದಲ್ಲಿ ಇರಬಾರದು ಎಂದರು.

sunil kumar
ವಿ.ಸುನೀಲ್ ಕುಮಾರ್ (ETV Bharat)
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಹೇಳಿಕೆ (ETV Bharat)

ಉಡುಪಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​​ಗೆ ಅವಕಾಶ ಕೊಟ್ಟಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಅಧಿಕಾರದಲ್ಲಿ ಇರಬಾರದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ವಿ.ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರಿಗೆ ಮೂರು ಮಂದಿ ಸಾಮಾಜಿಕ ಕಾರ್ಯಕರ್ತರು ದೂರು ಕೊಟ್ಟಿದ್ದಾರೆಯೇ ಹೊರತು, ಬಿಜೆಪಿ ನೀಡಿಲ್ಲ. ರಾಜ್ಯಪಾಲರು ವಿವರಣೆ ಕೇಳಿದ್ದರೂ ಯಾವುದೇ ವಿವರಣೆಯನ್ನು ಆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನೀಡಲಿಲ್ಲ. ಕರ್ನಾಟಕದ ರಾಜಕೀಯಕ್ಕೆ ಇತಿಹಾಸ ಮತ್ತು ಪರಂಪರೆಯಿದೆ. ಆದುದರಿಂದ ಮುಖ್ಯಮಂತ್ರಿಗಳು ಒಂದು ಕ್ಷಣವೂ ಕೂಡ ಆ ಸ್ಥಾನದಲ್ಲಿ ಇರಕೂಡದು ಎಂದರು.

ಸಿದ್ದರಾಮಯ್ಯನವರ ವಿರುದ್ಧದ ಆರೋಪ ಸಾಬೀತಾಗದೆ ನಿರಪರಾಧಿಯಾದರೆ ಹೈಕಮಾಂಡ್ ಅನುಮತಿ ತೆಗೆದುಕೊಂಡು ಮುಂದೆ ಅವರೇ ಮುಖ್ಯಮಂತ್ರಿಯಾಗಲಿ. ಆದರೆ ತನಿಖೆಯ ಸಂದರ್ಭದಲ್ಲಿ ಆ ಸ್ಥಾನದಲ್ಲಿ ಇರುವುದು ಸರಿಯಲ್ಲ. ರಾಜ್ಯಪಾಲರು ಕಾನೂನು ತಜ್ಞರ ಅಭಿಪ್ರಾಯ ಕೇಳಿಯೇ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಿದರು.

ಬಿಜೆಪಿ ಶಾಸಕರು ಬೆಂಗಳೂರಿನಲ್ಲಿ, ಪಕ್ಷದ ಕಾರ್ಯಕರ್ತರು ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಆಡಳಿತ ಪಕ್ಷದಲ್ಲಿರುವವರು ಜನಾಂದೋಲನ ಚಳವಳಿ ಮಾಡುವುದು ಶೋಭೆ ತರುವುದಿಲ್ಲ. ಲಾಲು ಪ್ರಸಾದ್ ಯಾದವ್, ಜಯಲಲಿತಾ, ಯಡಿಯೂರಪ್ಪ ರಾಜೀನಾಮೆ ಕೊಟ್ಟು ತನಿಖೆ ಎದುರಿಸಿದ್ದರು. ಕರ್ನಾಟಕ ಬಹಳ ದೊಡ್ಡ ಪ್ರಮಾಣದ ಪ್ರತಿಭಟನೆ ಎದುರಿಸುವಂತೆ ಮಾಡಬೇಡಿ ಎಂದು ಸುನೀಲ್ ಕುಮಾರ್ ಆಗ್ರಹಿಸಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ (ETV Bharat)

'ಸುನೀಲ್ ಕುಮಾರ್​ಗೆ ಸಿಎಂ ಅವರನ್ನು ಪ್ರಶ್ನಿಸುವ ನೈತಿಕತೆ ಇಲ್ಲ'-ಸೊರಕೆ: ಮಾಜಿ ಸಚಿವ ಹಾಗು ಹಿರಿಯ ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಸೊರಕೆ ವಾಗ್ದಾಳಿ ನಡೆಸಿ, ಮೂರು ಜನ ಮನವಿ ಕೊಟ್ಟರು, ರಾಜ್ಯಪಾಲರು ಆದೇಶ ಮಾಡಿದರು ಅಂತೀರಿ. ಬಿಜೆಪಿ ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದ್ದೇಕೆ? ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿಯವರ ಕೇಸ್​ಗಳು ಏಕೆ ಪೆಂಡಿಂಗ್ ಇವೆ? ಇಡೀ ಕರ್ನಾಟಕದ ಜನತೆ ಸಿದ್ದರಾಮಯ್ಯ ಹಿಂದಿದ್ದಾರೆ. ದೇಶದಲ್ಲಿ ಎಲ್ಲೂ ಆಗದ ಪ್ರತಿಭಟನೆ ಕರ್ನಾಟಕದಲ್ಲಿ ನಡೆಯುತ್ತದೆ. ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿ ಮಾಡಲಾಗಿದೆ. ಕಾಂಗ್ರೆಸ್‌ನಿಂದ 136 ಜನ ಗೆದ್ದಿದ್ದು, ಇವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ರಿಂದ 240ಕ್ಕೆ ಇಳಿದಿದೆ. ಜನರಿಂದ ಆಯ್ಕೆಯಾದ ಸರ್ಕಾರವನ್ನು ವಿಶ್ವ ಗುರು ಶಿಥಿಲ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಹಿಂದುಳಿದ, ಶೋಷಿತ, ಅಲ್ಪಸಂಖ್ಯಾತರ ನಾಯಕ. ಬಿಜೆಪಿಯ ಯಾವುದೇ ತಂತ್ರಗಾರಿಕೆ ನಡೆಯಲ್ಲ ಎಂದು ಹೇಳಿದರು.

ಇದನ್ನೂ ಓದಿ: ಆಗಸ್ಟ್‌ 22ರಂದು ತುರ್ತು ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ - Congress Legislative Party Meeting

ETV Bharat Logo

Copyright © 2024 Ushodaya Enterprises Pvt. Ltd., All Rights Reserved.