ETV Bharat / state

ಚನ್ನಪಟ್ಟಣ ಉಪಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ: ಬಿ.ವೈ.‌ ವಿಜಯೇಂದ್ರ

ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಗಲು- ರಾತ್ರಿ ನಿಖಿಲ್ ಕುಮಾರಸ್ವಾಮಿ ಅವರ ಗೆಲುವಿಗೆ ಶ್ರಮಿಸುವ ಭರವಸೆ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬಿ.ವೈ.‌ ವಿಜಯೇಂದ್ರ
ಬಿ.ವೈ.‌ ವಿಜಯೇಂದ್ರ (ETV Bharat)
author img

By ETV Bharat Karnataka Team

Published : 3 hours ago

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಸೇರಿ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ 3 ಕ್ಷೇತ್ರಗಳಿಗೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ. ವೈ. ವಿಜಯೇಂದ್ರ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಕುರಿತು ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದ ಚುನಾವಣೆಯನ್ನು ನಾವು ಸವಾಲಾಗಿ ಸ್ವೀಕಾರ ಮಾಡಿದ್ದೇವೆ. ಶಿಗ್ಗಾಂವಿ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಗೆದ್ದಿರುವಂಥ ವಾತಾವರಣ ನಿರ್ಮಾಣವಾಗಿದೆ. ಸಂಡೂರಿನಲ್ಲೂ ಬಿಜೆಪಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದ್ದೇವೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ- ಜೆಡಿಎಸ್ ಪಕ್ಷಗಳ ಕಾರ್ಯಕರ್ತರಲ್ಲಿ ರಣೋತ್ಸಾಹ ಇದೆ. ಚನ್ನಪಟ್ಟಣದಲ್ಲಿ ಎನ್‍ಡಿಎ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿ.ವೈ.‌ ವಿಜಯೇಂದ್ರ (ETV Bharat)

ಚುನಾವಣೆಯಲ್ಲಿ ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಗಲು- ರಾತ್ರಿ ಶ್ರಮವನ್ನು ಹಾಕಿ, ನಿಖಿಲ್ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲುವಂತೆ ಕಾರ್ಯತಂತ್ರ ರೂಪಿಸಲು ಸಭೆ ನಡೆಸಿದ್ದೇವೆ. ಎಲ್ಲರೂ ಹೆಚ್ಚಿನ ಉತ್ಸಾಹದಲ್ಲಿದ್ದಾರೆ. ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಗಲು- ರಾತ್ರಿ ನಿಖಿಲ್ ಕುಮಾರಸ್ವಾಮಿ ಅವರ ಗೆಲುವಿಗೆ ಶ್ರಮಿಸುವ ಭರವಸೆ ಕೊಟ್ಟಿದ್ದೇವೆ ಎಂದರು.

ಚನ್ನಪಟ್ಟಣ ಕ್ಷೇತ್ರ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಚನ್ನಪಟ್ಟಣ ಉಪಚುನಾವಣೆ ಕಳೆದೆರಡು ತಿಂಗಳುಗಳಿಂದ ರಾಜ್ಯದ ಗಮನ ಸೆಳೆದಿದೆ. ನಿನ್ನೆ ನಾಮಪತ್ರ ಸಲ್ಲಿಸಿದ್ದೇನೆ. ರೈತ ನಾಯಕ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಜೆಡಿಎಸ್ ನಾಯಕ ಮತ್ತು ನನ್ನ ತಂದೆ ಹೆಚ್. ಡಿ. ಕುಮಾರಸ್ವಾಮಿ, ಪಕ್ಷದ ವರಿಷ್ಠರಾದ ಹೆಚ್. ಡಿ. ದೇವೇಗೌಡರು ಕುಳಿತು ಚರ್ಚಿಸಿ ನನ್ನ ಸ್ಪರ್ಧೆ ಬಗ್ಗೆ ತೀರ್ಮಾನಿಸಿದ್ದಾರೆ ಎಂದರು.

ಬದಲಾದ ರಾಜಕಾರಣದ ಸನ್ನಿವೇಶದಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ನನ್ನನ್ನು ಘೋಷಿಸಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಕೆಗೆ ಸಹಸ್ರಾರು ಸಂಖ್ಯೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಬಂದು ಆಶೀರ್ವಾದ ಮಾಡಿದ್ದಾರೆ. 3 ಕಡೆ ಎನ್‍ಡಿಎ ಅಭ್ಯರ್ಥಿಗಳ ಗೆಲುವಿಗೆ ಸ್ಪಷ್ಟ ಸಂದೇಶವನ್ನು ವಿಜಯೇಂದ್ರ ಅವರು ಕೊಟ್ಟಿದ್ದಾರೆ ಎಂದು ತಿಳಿಸಿದರು.

ಈ ಸಭೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥನಾರಾಯಣ್, ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ: ಕುಮಾರಸ್ವಾಮಿ ಆರೋಪ ಬಿಟ್ಟು ಚುನಾವಣೆ ಮಾಡಲಿ : ಮಾಜಿ ಸಂಸದ ಡಿ ಕೆ ಸುರೇಶ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.