ETV Bharat / state

ರಾಜ್ಯದ ಮೂರು ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವುದು ನಿರಾಸೆ ತಂದಿದೆ : ಬಿ ವೈ ವಿಜಯೇಂದ್ರ - ASSEMBLY ELECTION 2024

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ರಾಜ್ಯದ ಮೂರು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವ ಕುರಿತು ಮಾತನಾಡಿದ್ದಾರೆ.

b-y-vijayendra
ಬಿ ವೈ ವಿಜಯೇಂದ್ರ (ETV Bharat)
author img

By ETV Bharat Karnataka Team

Published : Nov 23, 2024, 3:21 PM IST

ಬೆಂಗಳೂರು : ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದೆ. ಚನ್ನಪಟ್ಟಣದಲ್ಲಿ ಮಿತ್ರಪಕ್ಷ ಜೆಡಿಎಸ್ ಹಾಗೂ ಸಂಡೂರು ಹಾಗೂ ಶಿಗ್ಗಾಂವಿಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿತ್ತು. ಆದರೆ, ನಿರಾಸೆ ಆಗಿರುವುದು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶದ ನಂತರ ಇಂದು ನಗರದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಸೋಲಿಗೆ ಕಾರಣಗಳ ಬಗ್ಗೆ ಎರಡೂ ಪಕ್ಷದ ಮುಖಂಡರು ಕುಳಿತು ಚರ್ಚೆ ಮಾಡುತ್ತೇವೆ. ಸೋಲಿಗೆ ಕಾರಣ ಹುಡುಕುತ್ತೇವೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಮಾತನಾಡಿದರು (ETV Bharat)

ಸಂಡೂರಿನಲ್ಲಿ ಮೊದಲ ಬಾರಿಗೆ ಬಿಜೆಪಿ ಸುಮಾರು 80 ಸಾವಿರ ಮತ ಪಡೆದಿದೆ. ಎಂಟತ್ತು ಸಾವಿರ ಅಂತರದಲ್ಲಿ ಗೆಲ್ಲುವ ವಿಶ್ವಾಸವಿತ್ತು. ಸಂಡೂರು ಫಲಿತಾಂಶ ಹಿನ್ನಡೆ ಅಂತ ನಾನು ಭಾವಿಸುವುದಿಲ್ಲ. ಹಿನ್ನೆಡೆಗೆ ಕಾರಣ ಹುಡುಕಿ ಸರಿಪಡಿಸಿಕೊಳ್ಳುತ್ತೇವೆ. ಆದರೆ, ಶಿಗ್ಗಾಂವಿ ಕ್ಷೇತ್ರ ಮಾತ್ರ ನಮಗೆ ಆಘಾತ ತಂದಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೆಲಸ ಮಾಡಿದ್ದರು. ಅಭಿವೃದ್ಧಿ ಕೆಲಸಗಳನ್ನೂ ಮಾಡಿದ್ದರು. ಸೋಲಿನ ಬಗ್ಗೆ ಕಾರಣ ಹುಡುಕುತ್ತೇವೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್​ಡಿಎ ನಮ್ಮ ನಿರೀಕ್ಷೆಗೂ ಮೀರಿ 200ರ ಗಡಿ ದಾಟಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳು ದಾಖಲೆ ಮಾಡಿದೆ. ಮಹಾರಾಷ್ಟ್ರ ಜನತೆ ಮತ್ತೊಮ್ಮೆ ಮೋದಿ ನಾಯಕತ್ವದ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ : ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ, ಎನ್​ಡಿಎಗೆ ಮುಖಭಂಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.