ETV Bharat / state

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಲ್ಲ, ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು: ಬಿ.ವೈ.ವಿಜಯೇಂದ್ರ - B Y VIJAYENDRA

ಸಿದ್ದರಾಮಯ್ಯ ರಾಜಕೀಯ ಚಾಣಕ್ಯ. ಆದ್ದರಿಂದಲೇ ತಮ್ಮ ಅವಧಿ ಮುಗಿಯುತ್ತಿದ್ದಂತೆ ಕುತಂತ್ರಗಳ ಮೂಲಕ ಡಿಕೆಶಿ ವಿರುದ್ಧ ದಾಳ ಉರುಳಿಸುತ್ತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

bjp-state-president-b-y-vijayendra
ಸುತ್ತೂರು ಮಠದ ಸ್ವಾಮೀಜಿ ಜೊತೆ ಬಿ ವೈ ವಿಜಯೇಂದ್ರ (ETV Bharat)
author img

By ETV Bharat Karnataka Team

Published : Jan 17, 2025, 12:50 PM IST

ಮೈಸೂರು : ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಪೂರ್ಣಾವಧಿ ಸಿಎಂ ಆಗಲ್ಲ. ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು. ಆದರೂ ಯಾವುದೇ ಕಾರಣಕ್ಕೂ ಡಿ.ಕೆ ಶಿವಕುಮಾರ್‌ ಸಿಎಂ ಆಗಬಾರದು ಎಂದು ಸಿದ್ದರಾಮಯ್ಯ ತಮ್ಮ ರಾಜಕೀಯ ದಾಳ ಉರುಳಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮದರೊಂದಿಗೆ ಮಾತನಾಡಿ, ಡಿ.ಕೆ.ಶಿವಕುಮಾರ್‌ ಸಿಎಂ ಆಗಬಾರದು ಎಂದು ತಮ್ಮ ಆಪ್ತರ ಮೂಲಕ ಡಿನ್ನರ್‌ ಮೀಟಿಂಗ್‌ ಮಾಡಿ ಡಿ.ಕೆ.ಶಿವಕುಮಾರ್‌ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಚಾಣಕ್ಯ. ಆದ್ದರಿಂದಲೇ ತಮ್ಮ ಅವಧಿ ಮುಗಿಯುತ್ತಿದ್ದಂತೆ ಕುತಂತ್ರಗಳ ಮೂಲಕ ಡಿಕೆಶಿ ವಿರುದ್ಧ ದಾಳ ಉರುಳಿಸುತ್ತಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ನನ್ನದು ಸಿಂಹಪಾಲು ಎಂದು ಡಿ. ಕೆ ಶಿವಕುಮಾರ್‌ ಸಿಎಂ ಆಗಲು ಕನಸು ಕಾಣುತ್ತಿದ್ದಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸುತ್ತೂರು ಮಠಕ್ಕೆ ಭೇಟಿ ನೀಡಿದರು (ETV Bharat)

ಜಾತಿ ಗಣತಿ ವರದಿ ಅವೈಜ್ಞಾನಿಕ : ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನ ಪಗಡೆಯಾಟ ಅಂದುಕೊಂಡು, ರಾಜಕೀಯ ದಾಳವನ್ನಾಗಿ ಮಾಡಿಕೊಂಡಿದ್ದಾರೆ. ತಮ್ಮ ಕುರ್ಚಿ ಅಲುಗಾಡುವಾಗ ಸಿದ್ದರಾಮಯ್ಯನವರಿಗೆ ಜಾತಿಗಣತಿ ವರದಿ ನೆನಪಿಗೆ ಬರುತ್ತದೆ. ಈಗಿರುವ ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿದ್ದು, ಇದನ್ನ ಲಿಂಗಾಯಿತ ಹಾಗೂ ಒಕ್ಕಲಿಗ ಸಮುದಾಯ ವಿರೋಧಿಸುತ್ತಿದೆ. ಬೇರೆ ಜಾತಿಯವರಿಗೆ ನ್ಯಾಯ ಕೊಡಲು ನಮ್ಮ ಬೆಂಬಲ ಇದೆ. ಆದರೆ ಜಾತಿಗಣತಿ ಹೆಸರಲ್ಲಿ ರಾಜಕೀಯ ಮಾಡಬಾರದು. ಈಗಾಗಲೇ ಜಾತಿ ಗಣತಿ ವರದಿ ಸೋರಿಕೆಯಾಗಿದೆ, ಸರಿಯಾಗಿಲ್ಲ ಎಂದು ಹೇಳಿದರು.

ರಾಜದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ನಿನ್ನೆ ಬೀದರ್‌ ಘಟನೆ ಸೇರಿದಂತೆ ರಾಜ್ಯದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಗಮನಹರಿಸುತ್ತಿಲ್ಲ. ಸತೀಶ್‌ ಆತ್ಮಹತ್ಯೆ, ಬಾಲಕಿಯ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ಸೇರಿದಂತೆ ಹಲವು ಘಟನೆಗಳು ಜರುಗಿದ್ದರೂ ರಾಜ್ಯ ಸರ್ಕಾರ ಯಾವುದನ್ನೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಯಾವುದೇ ಒಬ್ಬ ಕಾಂಗ್ರೆಸ್ಸಿಗರನ್ನು ಬಂಧಿಸಿಲ್ಲ. ಆರೋಪಿಗಳಿಗೆ ರಕ್ಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ದೂರಿದರು.

ಯತ್ನಾಳ್ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅವರಿಗೆ ಒಳ್ಳೆಯದಾಗಲಿ. ಆದರೆ ರಾಜ್ಯದಲ್ಲಿ ಹಳ್ಳಿ ಹಳ್ಳಿ ಸುತ್ತಿ ಪಕ್ಷ ಕಟ್ಟಿದ ಯಡಿಯೂರಪ್ಪನವರ ವಿರುದ್ಧ ಮಾತನಾಡಿದರೆ ನೋವಾಗಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ : ಹಸು ಮಾಲೀಕನಿಗೆ 1 ಲಕ್ಷ ರೂ ಪರಿಹಾರ ಕೊಟ್ಟ ಆರ್.ಅಶೋಕ್‌: ಗೋ ಪೂಜೆ ನೆರವೇರಿಸಿದ ಬಿ.ವೈ. ವಿಜಯೇಂದ್ರ - COW UDDER SLASH CASE

ಇದನ್ನೂ ಓದಿ: ಸತೀಶ್ ಜಾರಕಿಹೊಳಿಗೆ ನೋಟಿಸ್ ವದಂತಿ: ಸಚಿವರಿಗೆ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದ ಸುರ್ಜೇವಾಲ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.