ETV Bharat / state

ನೈತಿಕ ಮಾರ್ಗದಲ್ಲಿ ಎಂದೂ ಅಧಿಕಾರ ಹಿಡಿಯದ ಕಾಂಗ್ರೆಸ್ಸಿಗರು: ಬಿ ವೈ ವಿಜಯೇಂದ್ರ - B Y VIJAYENDRA

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಕಾಂಗ್ರೆಸ್​ ಸರ್ಕಾರದ ಕುರಿತು ಮಾತನಾಡಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧದ ಕಾಂಗ್ರೆಸ್​ ಪಕ್ಷದ ಆರೋಪ ಆಧಾರ ರಹಿತ ಎಂದಿದ್ದಾರೆ.

B Y Vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ (ETV Bharat)
author img

By ETV Bharat Karnataka Team

Published : Nov 16, 2024, 3:51 PM IST

ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಶೇ 40ರಷ್ಟು ಕಮಿಷನ್ ಎಂಬ ಸುಳ್ಳು ಅಪಪ್ರಚಾರ ನಡೆಸಿದ್ದ ಕಾಂಗ್ರೆಸ್ ಪಕ್ಷದ ಆರೋಪ ಆಧಾರರಹಿತ ಹಾಗೂ ಹಸೀ ಸುಳ್ಳು ಎಂಬುದು ಇದೀಗ ಲೋಕಾಯುಕ್ತ ತನಿಖೆಯಲ್ಲೇ ಬಹಿರಂಗವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಭ್ರಷ್ಟತೆಯ ಕೂಪದಲ್ಲಿ ಮುಳುಗಿರುವ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಸರ್ಕಾರ ತಾನು ಹೇಳುವುದೆಲ್ಲ ಸುಳ್ಳು, ಕಟ್ಟುಕಥೆ ಕಟ್ಟುವಲ್ಲಿ ತಾನು ನಿಸ್ಸೀಮ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ನೈತಿಕ ಮಾರ್ಗದಲ್ಲಿ ಎಂದೂ ಅಧಿಕಾರ ಹಿಡಿಯದ ಕಾಂಗ್ರೆಸ್ಸಿಗರು ದುರ್ಮಾರ್ಗ, ಅನೀತಿ, ಅಪಪ್ರಚಾರ ಹಾಗೂ ಸಮಾಜ ಒಡೆಯುವ ಕೆಲಸಗಳಿಂದಲೇ ಅಧಿಕಾರ ಕಬಳಿಸಿದ್ದಾರೆ ಎಂಬುದಕ್ಕೆ ಪ್ರಸ್ತುತ ಬಹಿರಂಗವಾಗಿರುವ ಲೋಕಾಯುಕ್ತ ವರದಿ ಸಾಕ್ಷಿ ಹೇಳುತ್ತಿದೆ ಎಂದು ಟೀಕಿಸಿದ್ದಾರೆ.

ಕರ್ನಾಟಕದ ಜನತೆಯ ಕ್ಷಮೆ ಕೋರಲಿ : ಕರ್ನಾಟಕದ ಜನತೆ ವಂಚಿಸಿ, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಅಧಿಕಾರದಿಂದ ಕೆಳಗಿಳಿದು ಕರ್ನಾಟಕದ ಜನತೆಯ ಕ್ಷಮೆ ಕೋರಲಿ ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವಾಗಲೇ ಲೋಕಾಯುಕ್ತ ತನಿಖಾ ವರದಿ ಬಹಿರಂಗವಾಗಿರುವ ಹಿನ್ನೆಲೆ ಈ ಕುರಿತು ಕಾಂಗ್ರೆಸ್ಸಿಗರು ಇನ್ನೇನು ಸಮಜಾಯಿಸಿ ನೀಡುವುದಕ್ಕಾಗಲಿ, ವಿತಂಡವಾದ ಮಾಡುವುದಕ್ಕಾಗಲಿ ಅವಕಾಶವೇ ಇಲ್ಲ. ಸದ್ಯ ಬಾಕಿ ಬಿಲ್ ಪಾವತಿಯಾಗದೇ ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ಗುತ್ತಿಗೆದಾರರು ರಾಜ್ಯದಲ್ಲಿರುವುದು ಶೇ40ರಷ್ಟು ಅಲ್ಲ ಶೇ 80ರಷ್ಟು, ಕಾಂಗ್ರೆಸ್ ಸರ್ಕಾರ ಅಸಲಿ ಸತ್ಯವನ್ನು ಈಗ ಬಹಿರಂಗಪಡಿಸುತ್ತಿದೆ. ಒಂದರ ಮೇಲೊಂದು ಹಗರಣಗಳ ತನಿಖೆಯ ಕಾನೂನಿನ ಉರುಳು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಸುತ್ತಿಕೊಳ್ಳುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಶಾಸಕರು ಮಾರಾಟವಾಗುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳೇ ಅಧಿಕೃತ ಹೇಳಿಕೆ ನೀಡಿ ಕರ್ನಾಟಕದ ಗೌರವವನ್ನು ಹರಾಜು ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಿಮಗೆ ಮುಖಭಂಗವೇ ಕಟ್ಟಿಟ್ಟ ಬುತ್ತಿ : ಜನಪರ ಹಾಗೂ ಅಭಿವೃದ್ಧಿಪರ ಆಡಳಿತ ನೀಡುತ್ತಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿದವರಿಗೆ ಜನರೇ ತಕ್ಕ ಶಾಸ್ತಿ ಮಾಡಲಿದ್ದಾರೆ. ಆದರೆ, ಇದೀಗ ತಮ್ಮ ಕರಾಳತೆಯ ಭ್ರಷ್ಟ ಮುಖವನ್ನು ಮುಚ್ಚಿಕೊಳ್ಳಲು ಕೋವಿಡ್ ಸಂದರ್ಭದಲ್ಲಿ ಅವ್ಯವಹಾರ ನಡೆದಿದೆ ಎಂಬ ಮಧ್ಯಂತರ ವರದಿಯನ್ನು ತರಾತುರಿಯಲ್ಲಿ ತರಿಸಿಕೊಂಡು ಎಸ್​ಐಟಿ ರಚಿಸಲು ಹೊರಟಿದ್ದೀರಿ. ಈ ತನಿಖೆಯಿಂದಲೂ ನಿಮಗೆ ಮುಖಭಂಗವೇ ಕಟ್ಟಿಟ್ಟ ಬುತ್ತಿಯಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಘಟಾನುಘಟಿಗಳಿಂದ ತಮ್ಮದೇ ಪಕ್ಷದ ಶಾಸಕರ ಖರೀದಿಗೆ ಪ್ರಯತ್ನ: ಬಿ.ವೈ. ವಿಜಯೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.