ETV Bharat / state

ಈ ದೇಶವನ್ನು ಜಾತಿ, ಧರ್ಮದ ಆಧಾರದಲ್ಲಿ ವಿಭಜಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ : ಬಿ ವೈ ವಿಜಯೇಂದ್ರ - B Y VIJAYENDRA

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಕಾಂಗ್ರೆಸ್​ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ದೇಶವನ್ನ ಜಾತಿ, ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ ಎಂದಿದ್ದಾರೆ.

BJP State President B Y Vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ (ETV Bharat)
author img

By ETV Bharat Karnataka Team

Published : Oct 29, 2024, 1:24 PM IST

ಬೆಂಗಳೂರು : ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ, ಈ ದೇಶವನ್ನು ಜಾತಿ, ಧರ್ಮದ ಆಧಾರದಲ್ಲಿ ವಿಭಜಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಮಾಡುತ್ತಾ ಬಂದಿದೆ. ಅದೇ ನಿಟ್ಟಿನಲ್ಲಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಇವತ್ತು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ. ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನದ ಸ್ಮರಣಾರ್ಥ ಏಕ್ ಭಾರತ್ ಶ್ರೇಷ್ಠ ಭಾರತ್ ಲಕ್ಷ್ಯದೊಂದಿಗೆ ಆಚರಿಸಲ್ಪಡುವ ಐಕ್ಯತಾ ಓಟಕ್ಕೆ ಇಂದು ಕಂಠೀರವ ಸ್ಟೇಡಿಯಂ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಮಾತನಾಡಿದರು (ETV Bharat)
ತಲ ತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಪ್ರಾಪರ್ಟಿ ಎಂದು ಘೋಷಿಸಿದರೆ, ರೈತರು ಬೀದಿಗೆ ಬಂದು ಏನು ಮಾಡಬೇಕು? ಎಂದು ಪ್ರಶ್ನಿಸಿದರು.

ನಾವಿದರ ವಿರುದ್ಧ ಹೋರಾಟ ಮಾಡುತ್ತೇವೆ, ರೈತರಿಗೆ ಧ್ವನಿಗೂಡಿಸುತ್ತೇವೆ, ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ನಮ್ಮ ಮೇಲೆ ಆರೋಪ ಮಾಡುತ್ತಾರೆ ಎಂದು ಟೀಕಿಸಿದರು.

BJP State President B Y Vijayendra
ಐಕ್ಯತಾ ಓಟಕ್ಕೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ (ETV Bharat)

ನಿನ್ನೆ ಸಚಿವರು 120 ಜನ ರೈತರಿಗೆ ನೋಟಿಸ್ ಕೊಟ್ಟಿದ್ದನ್ನು ಒಪ್ಪಿಕೊಂಡಿದ್ದಾರೆ. ಅದಕ್ಕೆ ಬಿಜೆಪಿ ಹೊಣೆಯೇ? ಅದಕ್ಕೆ ಬಿಜೆಪಿ ಕಾರಣವೇ ಎಂದು ಕೇಳಿದರು. ಇದನ್ನು ಬಿಜೆಪಿ ಗಟ್ಟಿಯಾಗಿ ತೆಗೆದುಕೊಳ್ಳದೇ ಇದ್ದರೆ ರಾಜ್ಯ ಸರ್ಕಾರದ ಕ್ರಮದಿಂದ ನೂರಾರು ವರ್ಷಗಳಿಂದ ಉಳುಮೆ ಮಾಡುತ್ತಿದ್ದ ರೈತರು ಬೀದಿಗೆ ಬರಬೇಕಾಗುತ್ತಿತ್ತು ಎಂದರು.

BJP State President B Y Vijayendra
ಐಕ್ಯತಾ ಓಟದಲ್ಲಿ ಪಾಲ್ಗೊಂಡ ಬಿಜೆಪಿ ನಾಯಕರು (ETV Bharat)

ಬಿಜೆಪಿ ರೈತರ ಜೊತೆ ದೃಢವಾಗಿ ನಿಲ್ಲಲಿದೆ : ಕಾಂಗ್ರೆಸ್ಸಿನವರು ಈಗ ಟಾಸ್ಕ್ ಫೋರ್ಸ್ ಮಾಡಿದ್ದೇವೆ, ಜಿಲ್ಲಾಧಿಕಾರಿಗಳಿಗೆ ಹೋಗಿ ಮನವಿ ಕೊಡಲಿ ಎಂಬಂತಹ ಆಟವನ್ನು ಶುರು ಮಾಡಿದ್ದಾರೆ ಎಂದು ಹೇಳಿದರು. ಬಳಿಕ ಪ್ರಶ್ನೆಗೆ ಉತ್ತರಿಸಿದ ಅವರು, ಮಾಜಿ ಉಪ ಮುಖ್ಯಮಂತ್ರಿ ಮತ್ತು ಹಿರಿಯರಾದ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ಬಿಜೆಪಿ ತಂಡ ಈಗಾಗಲೇ ಬಿಜಾಪುರ ತಲುಪಿದೆ. ಬಿಜಾಪುರ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ಕೊಟ್ಟು ರೈತರನ್ನು ಸಂಪರ್ಕಿಸಿ, ಅವರಿಗೆ ಧೈರ್ಯ ತುಂಬುವ ಕಾರ್ಯ ಮಾಡಲಿದ್ದಾರೆ ಎಂದು ಹೇಳಿದರು.

ಬಿಜೆಪಿ ವಿಚಾರ ಸ್ಪಷ್ಟವಾಗಿದೆ. ರಾಜ್ಯ ಸರ್ಕಾರ ರೈತರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದು, ಬಿಜೆಪಿ ರೈತರ ಪರ ಇದೆ. ನಾವು ಅವರ ಜೊತೆಯಲ್ಲಿದ್ದೇವೆ. ರೈತರ ಈ ಸಮಸ್ಯೆ ಪರಿಹಾರಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು. ಕಾನೂನಿನ ಸಹಾಯ ಸೇರಿ ಯಾವುದೇ ರೀತಿಯ ಸಹಕಾರವನ್ನು ಬಿಜೆಪಿ ಕೊಡಲಿದ್ದು, ಅವರ ಜೊತೆ ಗಟ್ಟಿಯಾಗಿ ನಿಲ್ಲಲಿದೆ ಎಂದು ತಿಳಿಸಿದರು.

ನಿಖಿಲ್ ಕುಮಾರಸ್ವಾಮಿ, ಹಿರಿಯರಾದ ಮಾಜಿ ಪ್ರಧಾನಮಂತ್ರಿ ದೇವೇಗೌಡರ ಮೊಮ್ಮಗ ಇರಬಹುದು. ಆದರೆ ಅವರು ಇವತ್ತು ಎನ್‍ಡಿಎ ಅಭ್ಯರ್ಥಿ. ನಿಖಿಲ್ ಕುಮಾರಸ್ವಾಮಿ ಗೆಲ್ಲಿಸುವ ಕರ್ತವ್ಯ ನಮ್ಮೆಲ್ಲರದೂ ಇದೆ. ಯಾವ ರೀತಿ ರಾಜಕಾರಣದಲ್ಲಿ ಹುಚ್ಚುಚ್ಚಾಗಿ ಆಡಿ ಪಕ್ಷ ಬಿಟ್ಟು ಹೋಗಿದ್ದಾರೆ. ಇವೆಲ್ಲವನ್ನೂ ಆ ಕ್ಷೇತ್ರದ ಜನರೂ ಗಮನಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದವರಿಗೆ ಆತಂಕ ಶುರುವಾಗಿದೆ: ಈ ವಯಸ್ಸಿನಲ್ಲೂ ಮಾಜಿ ಪ್ರಧಾನಮಂತ್ರಿ ದೇವೇಗೌಡರ ಉತ್ಸಾಹವನ್ನು ಮೆಚ್ಚಿಕೊಳ್ಳಬೇಕು. ಯುವಕರಿಗೂ ದೇವೇಗೌಡರು ಪ್ರೇರಣೆ. ಅವರು ಬಂದು ಪ್ರಚಾರ ಮಾಡುತ್ತಾರೆ ಎಂದರೆ ಕಾಂಗ್ರೆಸ್ ಪಕ್ಷದವರಿಗೆ ಆತಂಕ ಶುರುವಾಗಿದೆ ಎಂದರು. ದೇವೇಗೌಡರು ಬಂದರೆ ಆ ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವ ಸತ್ಯ ಅವರಿಗೆ ಅರ್ಥವಾಗಿದೆ. ಹಾಗಾಗಿ ಈ ರೀತಿ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸಂಬಂಧ ಏಕಸದಸ್ಯ ಆಯೋಗ ರಚಿಸಿದ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳ ಮೀಸಲಾತಿ ವಿಚಾರದಲ್ಲಿ ಪ್ರಾಮಾಣಿಕತೆ ಇದ್ದರೆ, ಅವರಿಗೆ ಕಾಂತರಾಜ್ ವರದಿ ಕುರಿತು ಗಂಭೀರತೆ ಇರುತ್ತಿದ್ದರೆ, ಬಹಳಷ್ಟು ಹಿಂದೆಯೇ ಅವರು ಇದರ ಕುರಿತು ಕ್ರಮ ಕೈಗೊಳ್ಳುತ್ತಿದ್ದರು. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷವು ರಾಜಕೀಯ ಲಾಭ ಪಡೆಯುವ ಕುರಿತು ಯೋಚಿಸುತ್ತದೆ. ಈ ವಿಚಾರದಲ್ಲಿ ಹೆಚ್ಚು ಗೊಂದಲ ಮೂಡಿಸುವ ಬಗ್ಗೆ ಅವರು ಪ್ರಯತ್ನಿಸುತ್ತಾರೆ. ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಪ್ರಾಮಾಣಿಕತೆ ಹೊಂದಿಲ್ಲ ಎಂಬುದು ನನ್ನ ಭಾವನೆ ಎಂದು ಹೇಳಿದರು. ಉಪ ಚುನಾವಣೆ ಕಾರಣಕ್ಕೆ ಈ ವಿಚಾರವನ್ನು ತರುತ್ತಿದ್ದಾರೆ. ಈ ವಿಷಯದಲ್ಲಿ ಅವರಿಗೆ ಬದ್ಧತೆ ಇಲ್ಲ ಎಂದು ನುಡಿದರು.

ಇದನ್ನೂ ಓದಿ : ಬೇರೆಯವರ ಒಂದಿಂಚು ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಹೇಳಲ್ಲ: ಸಚಿವ ಜಮೀರ್ ಅಹ್ಮದ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.