ETV Bharat / state

ಪೆಟ್ರೋಲ್ - ಡೀಸೆಲ್ ದರ ಏರಿಕೆ ಆರಂಭವಷ್ಟೇ, ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿವೆ; ಬಿ.ವೈ.ವಿಜಯೇಂದ್ರ - BY Vijayendra slams - BY VIJAYENDRA SLAMS

ಪೆಟ್ರೋಲ್ ಮತ್ತು ಡೀಸೆಲ್ ಏರಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

BY VIJAYENDRA SLAMS
ಬಿ.ವೈ.ವಿಜಯೇಂದ್ರ (ETV Bharat)
author img

By ETV Bharat Karnataka Team

Published : Jun 17, 2024, 12:37 PM IST

Updated : Jun 17, 2024, 1:09 PM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (ETV Bharat)

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಏರಿಕೆ ಮಾಡಿರುವುದು ಜನ ವಿರೋಧಿ ನಿರ್ಧಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ಧವಳಗಿರಿ ನಿವಾಸದ ಬಳಿ‌ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೆಟ್ರೋಲ್-ಡೀಸೆಲ್ ದರ ಆರಂಭವಷ್ಟೇ, ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿವೆ. ಜನಸಾಮಾನ್ಯರು, ಕಾರ್ಮಿಕರು, ಬಡವರು ಹಾಗೂ ಮಧ್ಯಮ ವರ್ಗದವರು ಬೆಲೆ ಏರಿಕೆಯ ಚಕ್ರವ್ಯೂಹದಲ್ಲಿ ಸಿಲುಕಿ ನಲುಗುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದರು.

ಮೊನ್ನೆ ಮುದ್ದೆಬಿಹಾಳದ ಕಾಂಗ್ರೆಸ್ ಶಾಸಕರ ಹೇಳಿಕೆಯನ್ನು ಗಮನಿಸಿದ್ದೇನೆ. ಈ ಸರ್ಕಾರ ಬಂದ ಮೇಲೆ ಒಂದು ವರ್ಷದಿಂದ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಆದಮೇಲೆ ಯಾವುದೇ ಅನುದಾನ ಕ್ಷೇತ್ರಕ್ಕೆ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಇಂಥ ಸಂದರ್ಭದಲ್ಲಿ ನಾನು ರಾಜಕೀಯ ಮಾಡುವ ಇಚ್ಛೆಯನ್ನು ಕಳೆದುಕೊಂಡಿದ್ದೇನೆ. ನನ್ನ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ. ಇದು ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ‌. ಇದರಿಂದ ಯಾವ ರೀತಿ ಆಡಳಿತ ನಡೆಸುತ್ತಿದ್ದಾರೆ ಎಂದು ಗೊತ್ತಾಗುತ್ತದೆ ಎಂದು ಟೀಕಿಸಿದರು.

ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದರು‌.

ಈ ಬೆಲೆ ಏರಿಕೆಯ ಪಂಪ್ ಸೆಟ್, ಟ್ರ್ಯಾಕ್ಟರ್ ಸೇರಿದಂತೆ ಇತರ ಕೃಷಿ ಉಪಕರಣಗಳನ್ನು ಬಳಸುವ ರೈತರ ಕೈ ಸುಡಲಿದೆ. ಅದರ ಜೊತೆಗೆ ವಾಹನವನ್ನು ಆಶ್ರಯಿಸಿ ಶಾಲಾ - ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೂ ಕೂಡ ಇದರ ಬಿಸಿ ತಟ್ಟಲಿದೆ. ಒಟ್ಟಾರೆಯಾಗಿ ಎಲ್ಲ ಕ್ಷೇತ್ರಗಳಿಗೂ ಬೆಲೆ ಏರಿಕೆಯ ಬಿಸಿತಟ್ಟಿಸುವ ನಿರ್ಧಾರವನ್ನು ಈ ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿದರು.

ರಾಜ್ಯದ ಸಂಪನ್ಮೂಲವನ್ನು ಬಳಸಿಕೊಳ್ಳುವ ಯಾವ ಕಾಳಜಿಯೂ ಸರ್ಕಾರಕ್ಕಿಲ್ಲ, ಬದಲಾಗಿ ರಾಜ್ಯದ ಸಂಪನ್ಮೂಲವನ್ನು ಕೊಳ್ಳೆ ಹೊಡೆಯುವವರಿಗೆ ಆಥಿತ್ಯ ನೀಡುವ ತಾಣವನ್ನಾಗಿಸುತ್ತಿದೆ, ಕಾಂಗ್ರೆಸ್ ಕರ್ನಾಟಕದಲ್ಲಿ ಅರಾಜಕತೆ ಸೃಷ್ಟಿ ಮಾಡಿಯೇ ಅಧಿಕಾರದಿಂದ ಕೆಳಗಿಳಿಯುವ ಶಪಥ ಮಾಡಿದಂತೆ ಕಾಣುತ್ತಿದೆ, ಈ ಕೂಡಲೇ ಪೆಟ್ರೋಲ್ - ಡೀಸೆಲ್​​ಗಳ ಮೇಲೆ ಹೆಚ್ಚಿಸಿರುವ ದರವನ್ನು ವಾಪಸ್ ಪಡೆಯದಿದ್ದರೆ ಬಿಜೆಪಿ ದರ ಹಿಂಪಡೆಯುವವರೆಗೂ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ನೀಡಿದರು.

ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಆದಾಯ ಚೆನ್ನಾಗಿಯೇ ಇತ್ತು. ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಒಂದು ಕಡೆ ಭ್ರಷ್ಟಾಚಾರ, ಮತ್ತೊಂದು ಕಡೆ ಹಣಕಾಸಿನ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರ ನಡುವೆ ಇದಕ್ಕೆ ರಾಜ್ಯದ ಜನ ಬೆಲೆ ತೆತ್ತಿದ್ದಾರೆ. ಮೊದಲು ಸಿಎಂ ಸಿದ್ದರಾಮಯ್ಯ ಅವರು ಉಡಾಫೆ ಮಾತುಗಳನ್ನು ಆಡುವುದನ್ನು ಬಿಡಬೇಕು ಎಂದು ಹೇಳಿದರು.

ಇದನ್ನೂ ಓದಿ: ಕಿವಿಗೆ ಹೂವು, ಕೈಗೆ ಚಿಪ್ಪು; ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿನೂತನ ಪ್ರತಿಭಟನೆ - PETROL AND DIESEL PRICE

Last Updated : Jun 17, 2024, 1:09 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.