ETV Bharat / state

ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಹೆಸರಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ - Lok Sabha Election - LOK SABHA ELECTION

KPCC ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರ ಮತ್ತು ಸದಸ್ಯರ ಸಮಾವೇಶ ಆಯೋಜಿಸಲಾಗಿತ್ತು.

CM Siddaramaiah
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Mar 23, 2024, 3:35 PM IST

ಬೆಂಗಳೂರು: ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಕೆಪಿಸಿಸಿ ಕಚೇರಿ ಬಳಿಯ ಭಾರತ್ ಜೋಡೋ ಸಭಾಂಗಣದಲ್ಲಿ ಮಾತನಾಡಿದ ಅವರು, ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮನ್ನು ಕೈಬಿಡಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿ ಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ನಂತರ KPCC ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಅವರು ಮಾತನಾಡಿದರು. ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು ಹಾಕಿದ್ರಾ? ಎಂದು ಪ್ರಧಾನಿ ನರೇಂದ್ರ ಮೋದಿಯವರ ಆಶ್ವಾಸನೆಗಳ ಸರಣಿ ಸುಳ್ಳುಗಳನ್ನು ಪಟ್ಟಿಯನ್ನೇ ಬಿಚ್ಚಿಟ್ಟರು.

ಗ್ಯಾರಂಟಿ ಯೋಜನೆ: ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲ ಧರ್ಮ, ಎಲ್ಲಾ ಜಾತಿ, ಎಲ್ಲ ವರ್ಗದವರಿಗೆ ಸೇರಿವೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾರ್ಯಕ್ರಮಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ರೂಪಿಸುತ್ತಿದೆ. ಜಾರಿ ಮಾಡುತ್ತಿದೆ. ಅವೆಲ್ಲವನ್ನೂ ನೀವೆಲ್ಲ ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ತಕ್ಕ ಸತ್ಯದ ದಾಖಲೆ ತಿಳಿಸಿ ಎಂದು ಸಲಹೆ ನೀಡಿದರು.

ನಮ್ಮ ಸರ್ಕಾರದ ಗ್ಯಾರಂಟಿಗಳನ್ನು, ನಮ್ಮ ಸಾಧನೆಗಳನ್ನು ಬಿಜೆಪಿ ಸಾಧನೆ ಎಂದು ಹಳ್ಳಿ ಹಳ್ಳಿಗಳಲ್ಲಿ ಅವರು ನಿರಂತರವಾಗಿ ಸುಳ್ಳು ಹೇಳುತ್ತಿದ್ದಾರೆ. ಹೀಗಾಗಿ ನಾಡಿನ ಜನರ ಜೇಬಿಗೆ, ಮಹಿಳೆಯರ ಖಾತೆಗೆ ಹಣ ಹಾಕುತ್ತಿರುವುದು ನಮ್ಮ‌ ಕಾಂಗ್ರೆಸ್ ಸರ್ಕಾರ.

ನಮ್ಮ ನಾಡಿನ ಜನತೆಗೆ, ಮಹಿಳೆಯರಿಗೆ, ಯುವ ಸಮೂಹಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುತ್ತಿರುವುದು ನಮ್ಮ ಕಾಂಗ್ರೆಸ್ ಸರ್ಕಾರ. ಆದರೆ ಬಿಜೆಪಿಯವರು ಮಾಮೂಲಿಯಂತೆ ಸುಳ್ಳು ಹೇಳುತ್ತಾ ನಮ್ಮ ಕಾರ್ಯಕ್ರಮಗಳನ್ನು ಅವರ ಕಾರ್ಯಕ್ರಮ ಎಂದು ಹೇಳಿಕೊಳ್ಳುವ ಅಪಾಯ ಇದೆ. ಈ ಸುಳ್ಳುಗಳನ್ನು ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಜನರ ಬಳಿ ಹೋಗಿ ಸತ್ಯ ತಿಳಿಸಿ ಎಂದು ಸಲಹೆ ನೀಡಿದರು.

4 ಲಕ್ಷದ 50 ಸಾವಿರ ಕೋಟಿ ತೆರಿಗೆ: ಕರ್ನಾಟಕ ರಾಜ್ಯದಿಂದ ನಾವು 4 ಲಕ್ಷದ 50 ಸಾವಿರ ಕೋಟಿ ತೆರಿಗೆಯನ್ನು ಕೇಂದ್ರಕ್ಕೆ ಕಟ್ಟುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ವಾಪಸು ಕೊಡುತ್ತಿರುವುದು ಕೇವಲ 50 ಸಾವಿರ ಕೋಟಿ. ಈ ಅನ್ಯಾಯವನ್ನೇ ನ್ಯಾಯ ಎಂದು ಬಿಜೆಪಿ - ಜೆಡಿಎಸ್ ನವರು ಡ್ಯಾನ್ಸ್ ಮಾಡುತ್ತಿದ್ದಾರೆ. ಆದರೆ ನೀವುಗಳು ಬಿಜೆಪಿ-ಜೆಡಿಎಸ್​ ನವರು ಅನ್ಯಾಯವನ್ನು ಬೆಂಬಲಿಸುತ್ತಿರುವುದನ್ನು ನಮ್ಮ ನಾಡಿನ ಜನರಿಗೆ ಅರ್ಥ ಮಾಡಿಸಿ ಎಂದು ಹೇಳಿದರು.

ಇದನ್ನೂಓದಿ:ಜೆಡಿಎಸ್ ಸೀಟು ಹಂಚಿಕೆ ಚರ್ಚೆಗೆ ತೆರೆ: ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟ ಬಿಜೆಪಿ - Lok Sabha election

ETV Bharat Logo

Copyright © 2024 Ushodaya Enterprises Pvt. Ltd., All Rights Reserved.