ETV Bharat / state

ವಕ್ಫ್ ಆಸ್ತಿ ಘೋಷಣೆ, ಅಧಿಕಾರ ದುರ್ಬಳಕೆ ವಿರುದ್ಧ ಬಿಜೆಪಿ ಜನಾಂದೋಲನ: ಡಾ.ಸಿ.ಎನ್.ಅಶ್ವತ್ಥನಾರಾಯಣ್ - WAQF LAND ROW

ವಕ್ಫ್ ಆಸ್ತಿ ಘೋಷಣೆ, ಅಧಿಕಾರ ದುರ್ಬಳಕೆ ವಿರುದ್ಧ ಬಿಜೆಪಿ ಜನಾಂದೋಲನ ನಡೆಸಲಿದೆ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದ್ದಾರೆ.

CN ASHWATH NARAYAN SLAMS STATE GOVT
ಡಾ.ಸಿ.ಎನ್.ಅಶ್ವತ್ಥನಾರಾಯಣ್ (ETV Bharat)
author img

By ETV Bharat Karnataka Team

Published : Nov 4, 2024, 6:36 AM IST

ಬೆಂಗಳೂರು: ರಾಜ್ಯದಲ್ಲಿ ಮಠ, ಮಂದಿರಗಳು, ರೈತರ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ನಮೂದಿಸಿರುವ ವಿರುದ್ಧ ಬಿಜೆಪಿ ಜನಾಂದೋಲನ ರೂಪಿಸಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 1974ರ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಲು ಆಗ್ರಹಿಸಿ ಮತ್ತು ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ಸೋಮವಾರ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗುವುದು ಎಂದರು.

ಕರ್ನಾಟಕದ ವಕ್ಫ್​ನಲ್ಲಿ ನಡೆದಿರುವ ಖೊಟ್ಟಿ (ನಕಲಿ) ದಾಖಲೆಗಳ ಸೃಷ್ಟಿ, ಆ ಮೂಲಕ ಮಾಡಿಕೊಂಡಿರುವ ಲಾಭದ ಕುರಿತು ಇ.ಡಿ. (ಜಾರಿ ನಿರ್ದೇಶನಾಲಯ) ತನಿಖೆಯಾಗಬೇಕು. 50 ವರ್ಷದ ಹಿಂದಿನ ಗೆಜೆಟ್ ನೆಪವೊಡ್ಡಿ 50 ವರ್ಷ ಯಾವುದೇ ಕ್ರಮ ಕೈಗೊಳ್ಳದೇ, ಈಗ ಅಲ್ಪಸಂಖ್ಯಾತರ ಮತ ಬ್ಯಾಂಕ್ ರಾಜಕಾರಣಕ್ಕಾಗಿ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ, ಕರ್ನಾಟಕ ವಕ್ಫ್ ಬೋರ್ಡ್ ಮೂಲಕ ಮಾಡಿರುವ ಬೃಹತ್ ದಾಖಲೆಗಳ ಸೃಷ್ಟಿಯ ಎಲ್ಲಾ ವ್ಯವಹಾರಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ವಕ್ಫ್ ಕಾಯ್ದೆಯ ದುರ್ಬಳಕೆಯ ಕಾರಣಕ್ಕಾಗಿ ರೈತರು, ಮಠಗಳು, ಹಿಂದೂ ದೇವಾಲಯಗಳಿಗೆ ಆತಂಕ ಎದುರಾಗಿದೆ. ಹಿಂದೆ ಕಾಂಗ್ರೆಸ್​ನವರು ರೂಪಿಸಿರುವ ವಕ್ಫ್ ಕಾಯ್ದೆ ಮುಸ್ಲಿಂ ತುಷ್ಟೀಕರಣಕ್ಕಾಗಿ, ಮತಗಳಿಕೆಯ ಆಸೆಯೊಂದಿಗೆ ರಚಿಸಿರುವ ಕಾಯ್ದೆಯಾಗಿದೆ ಎಂದು ಅವರು ಹೇಳಿದರು.

ರೈತರು ವಿಭಿನ್ನ ತರಹದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಆಸ್ತಿ ಕಳೆದುಕೊಳ್ಳುವ ಭೀತಿ ನಿರ್ಮಾಣವಾಗಿದೆ. ಈ ಸಂಬಂಧ ಕೇವಲ ನೋಟಿಸ್ ಹಿಂಪಡೆದರೆ ಸಾಲದು, ರೈತರ ಆಸ್ತಿಗಳಲ್ಲಿ ರೈತರ ಹೆಸರನ್ನು ನಮೂದಿಸಬೇಕು. ಅಲ್ಲದೆ, 1974ರ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಬಿಜೆಪಿ ಪ್ರತಿಭಟನೆ ಹಿಂದೆ ರಾಜಕೀಯ ದುರುದ್ದೇಶ ಇದೆ, ಜನತೆ ಅರ್ಥಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಬಿಜೆಪಿ ಪ್ರತಿಭಟನೆಯ ಹಿಂದೆ ರಾಜಕೀಯ ಲಾಭದ ದುರುದ್ದೇಶ- ಸಿಎಂ: ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್​ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದೆ. ಆದರೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ (ETV Bharat)

ಇನ್ನೊಂದೆಡೆ, ಮೈಸೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದ ವಿಷಯ ದೊಡ್ಡದು ಮಾಡಿ ಉಪಚುನಾವಣಾ ಅಸ್ತ್ರವಾಗಿ ಬಳಸಿಕೊಳ್ಳಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ವಕ್ಫ್​ ವಿಷಯ ಬಳಸಿಕೊಂಡು ಚುನಾವಣೆ ಎದುರಿಸುತ್ತಿದ್ದಾರೆ: ಶಾಸಕ ವಿನಯ್​ ಕುಲಕರ್ಣಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.