ETV Bharat / state

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಬಿಜೆಪಿ ನಾಯಕರಿಂದ ಆಗ್ರಹ - BJP Urges Inquiry on officer death

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧಿಕಾರಿ ಆತ್ಮಹತ್ಯೆ ಕುರಿತು ಬಿಜೆಪಿ ನಾಯಕರು ಸಂಶಯ ವ್ಯಕ್ತಪಡಿಸಿದ್ದು, ಈ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.

ಆರ್.ಅಶೋಕ್
ಆರ್.ಅಶೋಕ್ (ETV Bharat)
author img

By ETV Bharat Karnataka Team

Published : May 27, 2024, 3:50 PM IST

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೌಲ್ಯದ ಬೃಹತ್ ಭ್ರಷ್ಟಾಚಾರವನ್ನ ಅಧಿಕಾರಿ ತಲೆಗೆ ಕಟ್ಟಲು ಹೋಗಿ ಕಿರುಕುಳ ನೀಡಿದ್ದರಿಂದ ಆತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವಂತೆ ಈ ಕೊಲೆಗಡುಕ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

ಆರ್ ಅಶೋಕ್ ಪೋಸ್ಟ್
ಆರ್ ಅಶೋಕ್ ಪೋಸ್ಟ್ (ETV Bharat)

ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯನವರೇ ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11,000 ಕೋಟಿ ರೂಪಾಯಿ ಎಸ್​​ಸಿಎಸ್​ಪಿ/ಟಿಎಸ್​​ಪಿ ಹಣವನ್ನ ಗ್ಯಾರಂಟಿ ಹೆಸರಿನಲ್ಲಿ ಲಪಟಾಯಿಸಿ ಈಗಾಗಲೇ ದಲಿತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡಿದ್ದೀರಿ. ಈಗ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿ ಒಬ್ಬ ಅಧಿಕಾರಿಯ ಸಾವಿಗೆ ಕಾರಣರಾಗಿದ್ದೀರಿ ಎಂದು ದೂರಿದರು.

ಇದನ್ನೂ ಓದಿ: ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ₹80 ಲಕ್ಷವನ್ನು ರಾಜ್ಯ ಸರ್ಕಾರವೇ ಭರಿಸಲಿದೆ: ಸಚಿವ ಈಶ್ವರ ಖಂಡ್ರೆ - Eshwar Khandre

ಸಿಎಂ ಸಿದ್ದರಾಮಯ್ಯ ಅವರೇ, ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಿ. ಈ ಪ್ರಕರಣದ ತನಿಖೆಗೆ ಆದೇಶ ಮಾಡಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿ ಎಂದು ಆಗ್ರಹಿಸಿದರು.

ಕಾಣದ ಕೈಗಳ ಕರಾಮತ್ತು ಯಾವುದು ಎಂಬುದನ್ನ ಮಹಾದೇವನೇ ಬಲ್ಲ: ಈ ಸಂಬಂಧ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಚಿವ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಶಿವಮೊಗ್ಗದಲ್ಲಿ ಶಂಕಾಸ್ಪದ ರೀತಿಯಲ್ಲಿ ಸಾವಿಗೆ ಶರಣಾಗಿದ್ದಾರೆ. ಈ ಸಾವಿನ ಸುತ್ತ ಭ್ರಷ್ಟಾಚಾರದ ಹುತ್ತ ಕಟ್ಟಿದ ಅನುಮಾನ ಬರುತ್ತಿದೆ. ಇಲಾಖೆಯಲ್ಲಿನ ಕಾಣದ ಕೈಗಳ ಕರಾಮತ್ತು ಯಾವುದಯ ಎಂಬುದನ್ನು ಮಹಾದೇವನೇ ಬಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಯಲಿ. ಸಾಕ್ಷ್ಯ ನಾಶ ಮಾಡಿ ಎಸ್​​ಐಟಿ ತನಿಖೆ ಎಂಬ ರಾಗವನ್ನು ಸರ್ಕಾರ ಹಾಡದಿರಲಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ, ಎನ್‌ಡಿಎ ಸೋಲು ಮೋದಿ ಅವರಿಗೆ ಗೊತ್ತಿದ್ದೂ ಹತಾಶೆಯಿಂದ ಮಾತನಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.