ETV Bharat / state

ರಾಜ್ಯದಲ್ಲಿ ಬಿಜೆಪಿ 25 ರಿಂದ 26 ಸೀಟು ಗೆಲ್ಲುತ್ತದೆ: ಬಿ.ಎಸ್.ಯಡಿಯೂರಪ್ಪ - B S Yediyurappa

ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು. ​

ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
author img

By ETV Bharat Karnataka Team

Published : Apr 30, 2024, 4:22 PM IST

ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ರಾಜ್ಯದಲ್ಲಿ 25ರಿಂದ 26 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ನಿರೀಕ್ಷೆ ಮೀರಿ ಎಲ್ಲೆಡೆ ಒಳ್ಳೆಯ ವಾತಾವರಣ ಇದೆ. ಬಿಜೆಪಿ ದೇಶದಲ್ಲಿ 400 ಸ್ಥಾನ ಗೆಲ್ಲಲಿದೆ. ರಾಜ್ಯದ 28 ಕ್ಷೇತ್ರದಲ್ಲಿ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಒಂದೆರಡು ಕ್ಷೇತ್ರದಲ್ಲಿ ವ್ಯತ್ಯಾಸವಾದರೂ ದೊಡ್ಡ ಮಟ್ಟದಲ್ಲಿ ಗೆಲ್ಲುತ್ತೇವೆ ಎಂದರು.

ನಾನು ನಾಳೆಯಿಂದ ಮತ್ತೆ ಪ್ರವಾಸ ಕೈಗೊಂಡಿದ್ದೇವೆ. ಶಿವಮೊಗ್ಗದಲ್ಲಿ ರಾಘವೇಂದ್ರ 2 ಲಕ್ಷ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಇವತ್ತೂ ಕೂಡ ಜೆ.ಪಿ.ನಡ್ಡಾ ಅವರು ಶಿವಮೊಗ್ಗಕ್ಕೆ ಬಂದಿದ್ದಾರೆ. ನಮಗೆ ಸ್ಫೂರ್ತಿ ತುಂಬಿದ್ದಾರೆ ಎಂದು ಹೇಳಿದರು.

ಬರ ಪರಿಹಾರ ವಿಚಾರ: ಬರ ಪರಿಹಾರದ ವಿಚಾರದಲ್ಲಿ ಕಾಂಗ್ರೆಸ್​ನವರು ಕೇಂದ್ರದ್ತತ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ. ಬರ ಬಂದಿರುವುದು ನಿಜ. ಅಗತ್ಯ ಇದ್ದರೆ ನಾವು ಹೋರಾಟ ಮಾಡುತ್ತೇವೆ. ಸರ್ಕಾರ ದಿವಾಳಿಯಾಗಿದೆ. ಅಭಿವೃದ್ಧಿಯೇ ನಿಂತು ಹೋಗಿದೆ. ಇಂತಹ ದುರ್ಬಲ ಸರ್ಕಾರವನ್ನು ನೋಡಿಲ್ಲ. ವಿಚಿತ್ರವಾದ ಪರಿಸ್ಥಿತಿ ಇದೆ ಎಂದು ಟೀಕಿಸಿದರು.

ಹಾಸನ ಪೆನ್ ಡ್ರೈವ್ ವಿಚಾರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡೋಲ್ಲ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದಷ್ಟೇ ಹೇಳಿದರು.

ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಆಘಾತಕಾರಿ, ಮಾತೃಶಕ್ತಿಯ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ: ಬಿಜೆಪಿ - Hassan Pen Drive Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.