ಮೈಸೂರು: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಘಟಕವು ಡಿಸಿಪಿ ಜಾಹ್ನವಿ ಅವರಿಗೆ ದೂರು ಸಲ್ಲಿಸಿತು.
ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಮುಡಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜಭವನದ ಮೇಲೆ ಬಾಂಗ್ಲಾ ಮಾದರಿ ದಾಳಿ ಮಾಡುವುದಾಗಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ ಐವಾನ್ ಡಿಸೋಜಾ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಬಿಜೆಪಿ ಯುವ ಮೋರ್ಚಾ ಘಟಕ ಆಗ್ರಹಿಸಿತು.
ಈ ವೇಳೆ ಬಿಜೆಪಿ ಮೈಸೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರಿಧರ್, ನಗರ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ರಾಜ್ಯ ಯೋಜನಾ ಹಾಗೂ ಸಂಶೋಧನೆಯ ಸಂಚಾಲಕರಾದ ಪ್ರಣಯ್, ನಗರ ಉಪಾಧ್ಯಕ್ಷ ಜೋಗಿ ಮಂಜು, ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಿ.ಲೋಹಿತ್, ಉಪಾಧ್ಯಕ್ಷ ಮನು ಅಪ್ಪಿ, ಮಂಡಲ ಅಧ್ಯಕ್ಷ ಅರ್ಜುನ್ ನವೀನ್, ಪದಾಧಿಕಾರಗಳಾದ ಕಿರಣ್ ನಾಯ್ಡು, ಶಂಕರ್, ಲಿಖಿತ್ ಸಾಗರ್ ಚೇತನ್, ಮನೋಹರ್ ಮತ್ತಿತರರು ಇದ್ದರು.
ಇದನ್ನೂ ಓದಿ: ಕಾನೂನಿನಲ್ಲಿ ಬಂಧಿಸಲು ಅವಕಾಶ ಇದ್ದರೆ ಮಾಡ್ತಾರೆ, ಇದಕ್ಕೆ ನೂರು ಜನರ ಅವಶ್ಯಕತೆ ಇಲ್ಲ; ಪರಮೇಶ್ವರ್ - HDK Arrest Issue