ETV Bharat / state

ಸಂವಿಧಾನ ಬದಲಾವಣೆಗೆ ಪೇಜಾವರ ಶ್ರೀ ಪತ್ರ ಸಂವಿಧಾನಕ್ಕೆ ಒಡ್ಡಿದ ಬೆದರಿಕೆ: ಬಿ.ಕೆ.ಹರಿಪ್ರಸಾದ್ - PEJAWAR SEER LETTER TO GOVERNOR

ಸ್ವಾಮೀಜಿಗಳು ಒಂದಿಷ್ಟು ಇತಿಹಾಸ ಅರಿತು ಮಾತಾಡಲಿ.‌ ಹರಿದು ಹಂಚಿ ಹೋಗಿದ್ದ ದೇಶವನ್ನು ಒಕ್ಕೂಟ ವ್ಯವಸ್ಥೆಯನ್ನಾಗಿ ಮಾಡಿ ಭಾರತವಾಗಿಸಲು ನಮ್ಮ ಪೂರ್ವಜರ ಪರಿಶ್ರಮವನ್ನು ಅವಮಾನಿಸುವ ಹಕ್ಕು ಸ್ವಾಮೀಜಿಗಳಿಗಿಲ್ಲ ಎಂದು ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ.

bk-hariprasad-slams-pejawar-seer-for-constitution-change-letter
ಬಿ.ಕೆ.ಹರಿಪ್ರಸಾದ್​ (ETV BHARAT ಸಂಗ್ರಹ ಚಿತ್ರ)
author img

By ETV Bharat Karnataka Team

Published : Nov 25, 2024, 1:50 PM IST

ಬೆಂಗಳೂರು: ಸಂವಿಧಾನ ಬದಲಾಯಿಸಬೇಕು ಎಂದು ಪೇಜಾವರ ಶ್ರೀ ಹಾಗೂ ಸಂಘ ಪರಿವಾರ ನಿಷ್ಠೆಯ ಸ್ವಾಮೀಜಿಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಆತಂಕಕಾರಿ‌ ಹಾಗೂ ಕಳವಳಕಾರಿ ಮಾತ್ರವಲ್ಲ, ಸಂವಿಧಾನಕ್ಕೆ ಬೆದರಿಕೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಸಂವಿಧಾನ ವಿರೋಧಿ ಸಂಘಟನೆ ಆರ್​​ಎಸ್​ಎಸ್​ ನೂರು ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಸಂವಿಧಾನ ಬದಲಾಯಿಸಬೇಕು ಎಂದು ಪರಿವಾರ ನಿಷ್ಟೆಯ ಯತಿಗಳು ಬೀದಿಗಿಳಿದು ಮಾತಾಡುತ್ತಿರುವುದಕ್ಕೂ ಸಂಬಂಧವಿದೆ. ಇದರಲ್ಲಿ ಸಂಘ ಪರಿವಾರದ ನೂರು ವರ್ಷಗಳ ಸಂಭ್ರಮಾಚಾರಣೆಯ ಕಾರ್ಯಕ್ರಮದ ಗುಪ್ತಸೂಚಿ ಇರುವುದು ಸ್ಪಷ್ಟ ಎಂದಿದ್ದಾರೆ.

ಸಮಾಜ ಸುಧಾರಕರ ಆಶಯಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದಿಂದ ರಚಿತವಾಗಿರುವ ಸರ್ವ ಧರ್ಮ, ಸಹಬಾಳ್ವೆ ತಿರುಳಿರುವ ಸಂವಿಧಾನವನ್ನು ಬದಲಾವಣೆಗೆ ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ. ನೂರಾರು ಕೋಟಿ ಜನಸಂಖ್ಯೆಯ ಭಾರತದಲ್ಲಿ ಪ್ರತಿಯೊಬ್ಬರು ಸ್ವಾಭಿಮಾನದಿಂದ ಬದುಕಲು ಸಂವಿಧಾನ ಅವಕಾಶ ನೀಡಿದೆ. ಇದರ ಬದಲಾಗಿ ಪೇಜಾವರರು ಯಾವ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ. ದಲಿತರು-ಶೂದ್ರರು ಶ್ರೇಷ್ಟತೆಯ ವ್ಯಸನಕ್ಕೆ ತಲೆಬಾಗಬೇಕೇ? ಮಹಿಳೆಯರು ಅತ್ಯಾಚಾರಿಗಳನ್ನು ಆರಾಧಿಸಬೇಕೆನ್ನುವ ವ್ಯವಸ್ಥೆ ಇರಬೇಕೆ? ಜೀತದಾರರು, ಶ್ರಮಿಕ ವರ್ಗ ಮಾಲೀಕರ ಅಡಿಯಾಳಾಗಿರಬೇಕೇ ಎಂದು ಶ್ರೀಗಳಿಗೆ ಪ್ರಶ್ನಿಸಿದ್ದಾರೆ

ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿ ಮಾಡಲು ಹೊರಟಿರುವ ಸಂಘ ಪರಿವಾರದ ಹಿಡನ್ ಅಜೆಂಡಾವನ್ನೇ ಪೇಜಾವರರು ಮುಂದುವರೆಸುತ್ತಿದ್ದಾರೆ. ದಲಿತ- ಹಿಂದುಳಿದ- ಶೋಷಿತ ಸಮುದಾಯಗಳು ಸೇರಿದಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನ-ಘನತೆಯಿಂದ ಬದುಕುಬೇಕಾದ ವ್ಯವಸ್ಥೆ ಇರುವುದು ಸಂವಿಧಾನದಡಿಯಲ್ಲಿ ಮಾತ್ರ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲೇ ರೈತರಿಗೆ ಹೆಚ್ಚು ವಕ್ಫ್ ನೋಟಿಸ್ ಜಾರಿ: ಸಚಿವ ಜಿ.ಪರಮೇಶ್ವರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.