ಬೆಂಗಳೂರು : ಶಾಲಾ ಬಾಲಕನಿಗೆ ಬಿಎಂಟಿಸಿ ಕಂಡಕ್ಟರ್ ಕಾಲಿನಿಂದ ಒದ್ದಿದ್ದಾರೆ ಎಂಬ ಆರೋಪ ನಗರದಲ್ಲಿ ಕೇಳಿಬಂದಿದೆ. ಚಿಕ್ಕಬಿದರಕಲ್ಲು ಬಸ್ ನಿಲ್ದಾಣದಿಂದ ನಿನ್ನೆ ಮಧ್ಯಾಹ್ನ ಹೊರಟಿಸಿದ್ದ ಬಸ್ವೊಂದರಲ್ಲಿ ಈ ಘಟನೆ ನಡೆದಿದೆ.
ಕೆಎ57ಎಫ್ 3364 ನೋಂದಣಿ ಸಂಖ್ಯೆಯ ಬಿಎಂಟಿಸಿ ಬಸ್ ನಿರ್ವಾಹಕರ ವಿರುದ್ಧ ಆರೋಪ ಕೇಳಿಬಂದಿದ್ದು, ಪ್ರಯಾಣಿಕನೊಬ್ಬ ಘಟನೆಯ ವಿಡಿಯೋವನ್ನ ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚಿಕ್ಕಬಿದರಕಲ್ಲು ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಹತ್ತಿದ್ದರು. ಕ್ಷುಲ್ಲಕ ಕಾರಣಕ್ಕಾಗಿ ಕಂಡಕ್ಟರ್ ಕಾಲಿನಿಂದ ವಿದ್ಯಾರ್ಥಿಯೊಬ್ಬನಿಗೆ ಒದ್ದಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಈ ಬಗ್ಗೆ ಸಹ ಪ್ರಯಾಣಿಕರು ಸಹ ಕಾಲಿನಿಂದ ಒದ್ದಿರುವುದಾಗಿ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಕಂಡಕ್ಟರ್ ಪ್ರತಿಕ್ರಿಯಿಸಿದ್ದು, ಕಾಲಿನಿಂದ ಒದ್ದಿಲ್ಲ.. ಮಂಡಿ ತಾಗಿಸಿದ್ದು ಎಂದು ಸ್ಪಷ್ಟನೆ ನೀಡಿದ್ದಾರೆ. ಬೇಕಾದರೆ ದೂರು ನೀಡಿ ಎಂದೂ ಹೇಳಿದ್ದಾರೆ.
ಘಟನೆ ಬಗ್ಗೆ ಕಂಡಕ್ಟರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಬಿಎಂಟಿಸಿ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ಘಟನೆ ಸಂಬಂಧ ದೂರು ದಾಖಲಿಸಿಕೊಂಡಿದ್ದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
ಇದನ್ನೂ ಓದಿ : ಬೈಕ್ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್: ಮದುವೆಗೆ ತೆರಳುತ್ತಿದ್ದ ಇಬ್ಬರ ದುರ್ಮರಣ - BUS BIKE ACCIDENT