ETV Bharat / state

ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಬಾಲಿವುಡ್ ಗಾಯಕ ಲಕ್ಕಿ ಅಲಿ - Bollywood Singer Lucky Ali - BOLLYWOOD SINGER LUCKY ALI

ರೋಹಿಣಿ ಸಿಂಧೂರಿ ಹಾಗು ಅವರ ಪತಿಯ ವಿರುದ್ಧ ಬಾಲಿವುಡ್ ಗಾಯಕ ಲಕ್ಕಿ ಅಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

rohini-sindhuri
IAS ಅಧಿಕಾರಿ ರೋಹಿಣಿ ಸಿಂಧೂರಿ, ಬಾಲಿವುಡ್ ಗಾಯಕ ಲಕ್ಕಿ ಅಲಿ (ETV Bharat)
author img

By ETV Bharat Karnataka Team

Published : Jun 21, 2024, 5:12 PM IST

ಬೆಂಗಳೂರು: ಭೂ ಕಬಳಿಕೆ ಆರೋಪದಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗು ಅವರ ಪತಿ ವಿರುದ್ಧ ಬಾಲಿವುಡ್ ಗಾಯಕ ಲಕ್ಕಿ ಅಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಯಲಹಂಕ ನ್ಯೂಟೌನ್​ ಕೆಂಚೇನಹಳ್ಳಿ ಬಳಿ ಇರುವ ತಮ್ಮ ಜಮೀನು ಕಬಳಿಸಲು ರೋಹಿಣಿ ಸಿಂಧೂರಿ ಹಾಗು ಪತಿ ಸುಧೀರ್ ರೆಡ್ಡಿ ಸೇರಿದಂತೆ ಯಲಹಂಕ ಉಪವಿಭಾಗದ ಎಸಿಪಿ ಮಂಜುನಾಥ್, ಸರ್ವೇಯರ್ ಅಧಿಕಾರಿ ಮನೋಹರ್ ಸೇರಿದಂತೆ 6 ಮಂದಿ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಪ್ರತಿಯನ್ನು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

2022ರಲ್ಲಿ ಸುಧೀರ್ ರೆಡ್ಡಿ ಜಮೀನು ಕಬಳಿಸಲು ಪ್ರಯತ್ನಿಸಿದ್ದು, ರೋಹಿಣಿ ಸಿಂಧೂರಿ ಕೂಡಾ ಸಹಾಯ ಮಾಡಿದ್ದರು. ಸ್ಥಳೀಯ ಪೊಲೀಸರಿಗೆ ದೂರು ನೀಡಿದರೂ ಸೂಕ್ತ ಕ್ರಮ ಕೈಗೊಂಡಿರಲಿಲ್ಲ ಎಂದು ಅಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಅತಿಥಿ ಗೃಹದಲ್ಲಿ ಸಾಮಗ್ರಿ ನಾಪತ್ತೆ ಪ್ರಕರಣ: ರೋಹಿಣಿ ಸಿಂಧೂರಿ ವೇತನದಲ್ಲಿ ಕಡಿತಗೊಳಿಸುವಂತೆ ಸರ್ಕಾರಕ್ಕೆ ಪತ್ರ - Rohini Sindhuri

ETV Bharat Logo

Copyright © 2025 Ushodaya Enterprises Pvt. Ltd., All Rights Reserved.