ETV Bharat / state

ಕಲಬುರಗಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ; ಬಾಂಬ್ ಸ್ಕ್ವಾಡ್​ನಿಂದ ತಪಾಸಣೆ - Bomb threat in airport

author img

By ETV Bharat Karnataka Team

Published : Jun 24, 2024, 3:10 PM IST

Updated : Jun 24, 2024, 3:41 PM IST

ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದರಿಂದ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರು ವಿಮಾನ ನಿಲ್ದಾಣದ ಎಲ್ಲ ಸ್ಥಳಗಳಲ್ಲಿ ಹಾಗೂ ಪ್ರಯಾಣಿಕರ ಬ್ಯಾಗ್​ಗಳನ್ನು ಎರಡು ಮೂರು ಗಂಟೆಗಳ ಕಾಲ ಪರಿಶೀಲನೆ ನಡೆಸಿದರು.

Bomb disposal squad
ಬಾಂಬ್ ನಿಷ್ಕ್ರಿಯ ದಳ (ETV Bharat)
ಕಲಬುರಗಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ (ETV Bharat)

ಕಲಬುರಗಿ : ಕಲಬುರಗಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದ್ದು, ಕೆಲ ಕಾಲ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ಹೊರಗೆ ಬಿಡದೆ ಬಾಂಬ್​ ನಿಷ್ಕ್ರಿಯ ದಳ ತಪಾಸಣೆ ನಡೆಸಿತು.

ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಏರ್​ಪೋರ್ಟ್​ ನಿರ್ದೇಶಕ ಚಿಲಕಾ ಮಹೇಶ ಅವರಿಗೆ ಇಂದು ಬೆಳಗ್ಗೆ 7 ಗಂಟೆಗೆ ಇ-ಮೇಲ್ ಬಂದಿದೆ. ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ವಿಚಾರ ಗೊತ್ತಾಗುತ್ತಿದ್ದಂತೆ ನಿಲ್ದಾಣಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರು ವಿಮಾನ ನಿಲ್ದಾಣದ ಎಲ್ಲ ಸ್ಥಳಗಳಲ್ಲಿ ಮತ್ತು ಪ್ರಯಾಣಿಕರ ಬ್ಯಾಗ್​ಗಳನ್ನ ಸತತ ಎರಡ್ಮೂರು ಗಂಟೆಗಳ ಕಾಲ ಪರಿಶೀಲನೆ ನಡೆಸಿದರು.

Bomb disposal squad
ಬಾಂಬ್ ನಿಷ್ಕ್ರಿಯ ದಳ (ETV Bharat)

ಇದೇ ಸಂದರ್ಭದಲ್ಲಿ ಬೆಂಗಳೂರಿನಿಂದ ಕಲಬುರಗಿಗೆ ಆಗಮಿಸಿದ ವಿಮಾನದಲ್ಲಿದ್ದ ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಎಲ್ಲ ಪ್ರಯಾಣಿಕರನ್ನು ಸುರಕ್ಷತೆ ದೃಷ್ಟಿಯಿಂದ ಕೆಳಗೆ ಇಳಿಯಲು ಬಿಡದೆ ನಿಲ್ದಾಣದಲ್ಲಿ ತಪಾಸಣೆ ಕಾರ್ಯ ಮುಂದುವರೆಸಿದ್ರು. ಆದ್ರೆ ಯಾವುದೇ ಬಾಂಬ್ ಪತ್ತೆಯಾಗಲಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಅನ್ನೋದು ಗೊತ್ತಾಗಿದೆ. ಆದ್ರೆ ಇ-ಮೇಲ್ ಕಳುಹಿಸಿದವರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ಬೆದರಿಕೆ ಮೇಲ್ ಹಿನ್ನೆಲೆ ಸಚಿವ ಕೃಷ್ಣ ಬೈರೇಗೌಡ ಸುಮಾರು ಅರ್ಧ ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಕಳೆಯಬೇಕಾಯಿತು. ಹೊರಬಂದು ನಂತರ ಮಾತನಾಡಿದ ಸಚಿವರು, ''ಬಾಂಬ್ ಬೆದರಿಕೆ ಹಿನ್ನೆಲೆ ವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರನ್ನು ಹೊರಗೆ ಬಿಡಲಿಲ್ಲ. ನನಗೂ ಅರ್ಧ ಗಂಟೆ ಸಮಯ ವಿಳಂಬವಾಯಿತು.

ಈ ರೀತಿಯ ಕರೆಗಳು ಬರುತ್ತಿರುತ್ತವೆ, ಕೆಲವರು ಸುಮ್ಮನೆ ಅನಾಮಧೇಯ ಕರೆ ಮಾಡುತ್ತಿರುತ್ತಾರೆ. ವಿಮಾನ ನಿಲ್ದಾಣದ ಸಿಬ್ಬಂದಿ ತಪಾಸಣೆ ನಡೆಸಿದರು. ಇದರಿಂದ ನನಗೆ ಅಧಿಕಾರಿಗಳ ಜೊತೆ ಸಭೆ ನಡೆಸಲು ನಿಗದಿಗಿಂತ ಸಮಯ ಅರ್ಧಗಂಟೆ ವಿಳಂಬವಾಗಿದ್ದು ಬಿಟ್ಟರೆ ಮತ್ತೇನಾಗಿಲ್ಲ. ಅಲ್ಲಿ ಯಾವುದೇ ರೀತಿಯ ಆತಂಕ ಇರಲಿಲ್ಲ. ಅದೊಂದು ಅನಾಮಧೇಯ ಕರೆ ಅನ್ನಿಸುತ್ತೆ'' ಎಂದು ಹೇಳಿದರು.

ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ: ತಡವಾಗಿ ಬೆಳಕಿಗೆ

Last Updated : Jun 24, 2024, 3:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.