ETV Bharat / state

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ: ಏರ್​ಪೋರ್ಟ್​ನಲ್ಲಿ ಭದ್ರತೆ ಹೆಚ್ಚಳ - BOMB THREAT

ಬೆಳಗಾವಿ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಭದ್ರತೆ ಹೆಚ್ಚಿಸಲಾಗಿದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ (ETV Bharat)
author img

By ETV Bharat Karnataka Team

Published : Oct 20, 2024, 4:18 PM IST

ಬೆಳಗಾವಿ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಸಾಂಬ್ರಾ ‌ವಿಮಾನ ನಿಲ್ದಾಣದ‌ ಇಮೇಲ್‌ಗೆ ಶುಕ್ರವಾರ ಮತ್ತು ಶನಿವಾರದಂದು ಎರಡು ಬಾರಿ ಅಪರಿಚಿತರಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ ಬೆನ್ನಲ್ಲೇ ಎಚ್ಚೆತ್ತ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯು ಏರ್​ಪೋರ್ಟ್​ನಲ್ಲಿ ಭದ್ರತೆಯನ್ನು ಹೆಚ್ಚಿಸಿದೆ.

ಶ್ವಾನದಳ, ಬಾಂಬ್ ನಿಷ್ಕ್ರೀಯ ದಳದೊಂದಿಗೆ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ಸಂಬಂಧ ಮಾಹಿತಿ ನೀಡಿರುವ ಡಿಸಿಪಿ ರೋಹನ್​ ಜಗದೀಶ್​, "ಬೆದರಿಕೆ ಕರೆಗೆ ಸಂಬಂಧಿಸಿದಂತೆ ಯಾವುದೇ ಸ್ಫೋಟಕ ವಸ್ತುಗಳು, ರಾಸಾಯನಿಕ ಪದಾರ್ಥಗಳು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿಲ್ಲ. ಇದೊಂದು ಹುಸಿ ಸಂದೇಶವಾಗಿದ್ದು, ಇದರ ಮೂಲ ಪತ್ತೆಗೆ ಜಾಲ ಬೀಸಿದ್ದೇವೆ. ಹಾಗಾಗಿ, ಯಾರೂ ಭಯ ಪಡುವ ಅಗತ್ಯವಿಲ್ಲ" ಎಂದು ತಿಳಿಸಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣ
ಬೆಳಗಾವಿ ವಿಮಾನ ನಿಲ್ದಾಣ (ETV Bharat)

ಮಾರಿಹಾಳ ಪೊಲೀಸ್ ಠಾಣೆಯಲ್ಲಿ ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ದೂರು ನೀಡಿದ್ದರು. ಚೆನ್ನೈನಿಂದ ಈ ಬೆದರಿಕೆ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಾಗೆಯೇ ದೇಶದ ಹಲವೆಡೆ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ (ETV Bharat)

ಇದನ್ನೂ ಓದಿ: ದೆಹಲಿಯ ಸಿಆರ್​ಪಿಎಫ್​ ಶಾಲೆಯ ಬಳಿ ಭಾರಿ ಸ್ಫೋಟ: ಜೀವಹಾನಿ ಇಲ್ಲ, ಪೊಲೀಸರಿಂದ ತೀವ್ರ ತನಿಖೆ

ಇದನ್ನೂ ಓದಿ: ನಿಲ್ಲದ ಬಾಂಬ್​ ಬೆದರಿಕೆ ಸಂದೇಶ; ಫ್ರಾಂಕ್​ಫರ್ಟ್​ಗೆ ವಿಮಾನ ಮಾರ್ಗ ಬದಲಾವಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.