ETV Bharat / state

ಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ - BOY SUICIDE IN BENGALURU

ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

suicide
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Nov 18, 2024, 5:15 PM IST

ಬೆಂಗಳೂರು: ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೆದ್ದಲಹಳ್ಳಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಆದೀವ್ (16) ಸಾವನ್ನಪ್ಪಿದ ಬಾಲಕ. ಖಾಸಗಿ ಕಾಲೇಜಿನಲ್ಲಿ‌ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ ಬಾಲಕನ ತಂದೆ ಕಂಪನಿಯೊಂದರಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 15 ವರ್ಷಗಳಿಂದಲೂ ಕುಟುಂಬವು ಗೆದ್ದಲಹಳ್ಳಿಯಲ್ಲಿ ವಾಸಿಸುತ್ತಿದೆ. ನಿನ್ನೆ ತಡರಾತ್ರಿ ಅಪಾರ್ಟ್​​ಮೆಂಟ್​​ನ ಏಳನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಪರಿಶೀಲಿಸಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕ ಇತ್ತೀಚೆಗೆ ಕಾಲೇಜು ಬದಲಾವಣೆ ವಿಚಾರವಾಗಿ ಕುಟುಂಬಸ್ಥರೊಂದಿಗೆ ಚರ್ಚಿಸಿದ್ದ‌.‌ ಪೋಷಕರೊಂದಿಗೆ ಮಾತಿನ ಚಕಮಕಿ ನಡೆದಿತ್ತು. ಇದೇ ವಿಚಾರವಾಗಿ ಭಾನುವಾರ ಮಧ್ಯಾಹ್ನ ಮನೆಬಿಟ್ಟು ಹೋಗಿದ್ದ. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಬಳಿಕ ರಾತ್ರಿ ಮನೆಗೆ ಬಂದಿದ್ದ. ತಡರಾತ್ರಿ ಅಪಾರ್ಟ್​​ಮೆಂಟ್​​ನ ಏಳನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಮಾಕ್ಷಿಪಾಳ್ಯ ಹಿಟ್​​ ಅಂಡ್​​​ ರನ್ ಪ್ರಕರಣ: ಕಾರು ಚಾಲಕನ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.