ETV Bharat / state

ಮಂಡ್ಯ: ದೇಗುಲದ ಗೇಟ್ ಮೈಮೇಲೆ ಬಿದ್ದು ಬಾಲಕ ಸಾವು - BOY DIES AFTER GATE FALLS ON HIM

ದೇವಸ್ಥಾನ ಹಾಗೂ ಮುಜರಾಯಿ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಬಾಲಕನ ಪೋಷಕರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Temple Gate
ದೇವಸ್ಥಾನದ ಗೇಟ್​ (ETV Bharat)
author img

By ETV Bharat Karnataka Team

Published : Nov 12, 2024, 2:32 PM IST

ಮಂಡ್ಯ: ದೇಗುಲದ ಗೇಟ್ ಮೈಮೇಲೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆ ಗ್ರಾಮದ ಚೆನ್ನಕೇಶವ ದೇಗುಲದಲ್ಲಿ ನಡೆದಿದೆ. ಗ್ರಾಮದ ಹೆಚ್.ಎಸ್.ಜಿಷ್ಣು (5) ಮೃತ ಮಗು.

ಸೋಮವಾರ ಕಾರ್ತಿಕ ಮಾಸ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಗ್ರಾಮದ ಚೆನ್ನಕೇಶವ ದೇಗುಲಕ್ಕೆ ತೆರಳಿದ್ದರು. ಈ ವೇಳೆ ದೇಗುಲದ ಗೇಟ್ ಜಿಷ್ಣು ಮೇಲೆ ಬಿದ್ದು ತೀವ್ರ ಗಾಯಗೊಂಡಿದ್ದ. ತಕ್ಷಣ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಇಂದು ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ. ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಜರಾಯಿ ಇಲಾಖೆಗೆ ಸೇರಿರುವ ಚೆನ್ನಕೇಶವ ದೇಗುಲದ ಗೇಟ್ ಮುರಿದು ಬಹಳ ದಿನಗಳಾದರೂ ದುರಸ್ಥಿ ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ. ಮುಜರಾಯಿ ಇಲಾಖೆ ನಿರ್ಲಕ್ಷ್ಯದಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಮುಜರಾಯಿ ಇಲಾಖೆ ವಿರುದ್ಧ ಪೋಷಕರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಡೋದರಾದ ಐಒಸಿಎಲ್​ ಸಂಸ್ಕರಣಾ ಘಟಕದಲ್ಲಿ ಬೆಂಕಿ, ಇಬ್ಬರು ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.