ETV Bharat / state

ಬೆಂಗಳೂರು: ಬೈಕ್​ಗೆ ಟ್ರಕ್​ ಡಿಕ್ಕಿ; ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಬಾಲಕ ದಾರುಣ ಸಾವು - BOY DIES IN TRUCK BIKE ACCIDENT

ಟ್ರಕ್ ಹರಿದು ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

boy death
ಘಟನಾ ಸ್ಥಳ (ETV Bharat)
author img

By ETV Bharat Karnataka Team

Published : Jan 12, 2025, 10:57 AM IST

ಬೆಂಗಳೂರು: ಜನ್ಮದಿನದ ಸಂಭ್ರಮದಲ್ಲಿದ್ದ ಬಾಲಕನೋರ್ವ ಟ್ರಕ್ ಹರಿದು ಸಾವನ್ನಪ್ಪಿರುವ ದಾರುಣ ಘಟನೆ ತಡರಾತ್ರಿ ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ಶನಿವಾರ ನಡೆದಿದೆ. ಸಹೋದರನೊಂದಿಗೆ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಭಾನುತೇಜ (12) ಸಾವನ್ನಪ್ಪಿದ್ದು, ಜೊತೆಗಿದ್ದ ಚಕ್ರಧರಣ್ ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಘಟನೆ ವಿವರ: ಆಂಧ್ರಪ್ರದೇಶದ ಚಿತ್ತೂರು ಮೂಲದ ಭಾನುತೇಜ ಕಳೆದ ಒಂದು ತಿಂಗಳಿನಿಂದ ತನ್ನ ಸಹೋದರ ಹಾಗೂ ವೇದಗುರು ಚಕ್ರಧರಣ್ ಜೊತೆ ಆರ್.ಟಿ.ನಗರದ ಸತ್ಯಾಂಜನೇಯ ಸ್ವಾಮಿ ದೇವಸ್ಥಾನದಲ್ಲಿದ್ದುಕೊಂಡು ವೇದಾಭ್ಯಾಸ ಮಾಡಿಕೊಂಡಿದ್ದ. ಶನಿವಾರ ಭಾನುತೇಜನ ಹುಟ್ಟು ಹಬ್ಬವಿದ್ದರಿಂದ ಇಬ್ಬರೂ ಹೊರಮಾವು ಬಳಿಯಿರುವ ಅಕ್ಕನ ಮನೆಗೆ ಹೋಗಿದ್ದರು.

ಬಾಲಕನ ತಲೆ ಮೇಲೆ ಹರಿದ ಟ್ರಕ್: ಹುಟ್ಟುಹಬ್ಬ ಆಚರಿಸಿದ ಬಳಿಕ ಆರ್.ಟಿ.ನಗರ ಕಡೆಗೆ ತೆರಳುತ್ತಿದ್ದ ಚಕ್ರಧರಣ್ ಅವರ ದ್ವಿಚಕ್ರ ವಾಹನಕ್ಕೆ ರಾತ್ರಿ 11:20ರ ಸುಮಾರಿಗೆ ಹೆಣ್ಣೂರು ಬಂಡೆ ಮುಖ್ಯರಸ್ತೆಯಲ್ಲಿ ಟ್ರಕ್ ಡಿಕ್ಕಿಯಾಗಿತ್ತು. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನದ ಹಿಂಬದಿಯಿದ್ದ ಭಾನುತೇಜ ನೆಲಕ್ಕೆ ಬಿದ್ದಿದ್ದ. ಅದೇ ಸಂಧರ್ಭದಲ್ಲಿ ಭಾನುತೇಜನ ತಲೆ ಮೇಲೆ ಟ್ರಕ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಚಕ್ರಧರಣ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಹುಟ್ಟುಹಬ್ಬದ ದಿನವೇ ಮಗನ ಸಾವಿನ ಸುದ್ದಿ ತಿಳಿದು ಬೆಂಗಳೂರು ತಲುಪಿರುವ ಆತನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಘಟನೆಯ ಕುರಿತು ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಬಳಿಕ ಪರಾರಿಯಾಗಿರುವ ಟ್ರಕ್ ಚಾಲಕನಿಗಾಗಿ ಶೋಧ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಕಬ್ಬಿನ ಗದ್ದೆಯಲ್ಲಿ ಆಟವಾಡುವಾಗ ಹಾವು ಕಚ್ಚಿ 2 ವರ್ಷದ ಬಾಲಕ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.