ETV Bharat / state

ಹಾಸನ: ಪ್ರೀತಿ ನಿರಾಕರಿಸಿದ ಬಾಲಕಿಯ ಕತ್ತು ಕೊಯ್ದು ಆತ್ಮಹತ್ಯೆಗೆ ಶರಣಾದ ಹುಡುಗ - Hassan murder

ಹುಡುಗನೊಬ್ಬ ತನ್ನ ಪ್ರೀತಿಯನ್ನು ನಿರಾಕರಿಸಿದ ಬಾಲಕಿಯ ಕತ್ತು ಕೊಯ್ದು ಕೊಂದು ನಂತರ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಪ್ರೀತಿ ನಿರಾಕರಣೆ  Love Rejection  ಬಾಲಕಿಯ ಕತ್ತು ಕೊಯ್ದ ಪ್ರಿಯತಮ  Hassan
ಸಾಂದರ್ಭಿಕ ಚಿತ್ರ
author img

By ETV Bharat Karnataka Team

Published : Mar 5, 2024, 8:26 AM IST

Updated : Mar 5, 2024, 12:12 PM IST

ಹಾಸನ: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಅಪ್ರಾಪ್ತ ಬಾಲಕಿಯ ಕೊಲೆಗೈದ ಹುಡುಗ ಬಳಿಕ ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

ಕೊಲೆಯಾದ ಬಾಲಕಿ ಬೆಳಗುಂಬ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದಳು. ಸೋಮವಾರ (ಫೆ.4 ರಂದು) ಸಂಜೆ ಶಾಲೆಯಿಂದ ವಾಪಸ್ ಮನೆಗೆ ಬರುತ್ತಿದ್ದಾಗ ಅಡ್ಡಗಟ್ಟಿದ ಶರತ್ ಎಂಬಾತ ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡಿದ್ದಾನೆ. ಆಕೆ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡು ಬಾಲಕಿಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಇದಾದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಅರಸೀಕೆರೆ ಗ್ರಾಮಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಪ್ರಕರಣ- ಪ್ರೇಯಸಿಗೆ ಚಾಕು ಇರಿದ ಪ್ರಿಯಕರ: ಮದುವೆಯಾಗಲು ನಿರಾಕರಿಸಿದ ಪ್ರೇಯಸಿಗೆ ಪ್ರಿಯಕರ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದಿತ್ತು. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯ ಚೇತನ್(28) ಎಂಬಾತ ದುಷ್ಕೃತ್ಯ ಎಸಗಿದ ವ್ಯಕ್ತಿ. ಅದೇ ಗ್ರಾಮದ ಯುವತಿ ಚಾಕು ಇರಿತಕ್ಕೊಳಗಾದ್ದಳು. ಕಳೆದ ಏಳು ವರ್ಷಗಳಿಂದ ಚೇತನ್ ಈ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಆಕೆ ಮದುವೆಗೆ ನಿರಾಕರಿಸಿದ್ದರಿಂದ ಕೋಪಗೊಂಡು ನಗರದ ಶಿವಪ್ಪ‌ ನಾಯಕ ವೃತ್ತದಲ್ಲಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಯುವತಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತನ್‌ಗೆ ಸ್ಥಳೀಯರು ಥಳಿಸಿದ್ದರು. ಇದರಿಂದ ತಲೆಯ ಭಾಗಕ್ಕೆ ಗಾಯವಾಗಿತ್ತು. ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಗೆ ಚಾಕು ಇರಿತ, ಆರೋಪಿ ಸೆರೆ: ವ್ಯಕ್ತಿಯೊಬ್ಬ ಮಹಿಳೆಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಆರ್.ಟಿ.ನಗರ ಠಾಣಾ ವ್ಯಾಪ್ತಿಯ ಮಠದಹಳ್ಳಿಯಲ್ಲಿ ಇತ್ತೀಚೆಗೆ ನಡೆದಿತ್ತು. ಚಾಕು ಇರಿತಕ್ಕೆ ಒಳಗಾದ ಮಹಿಳೆಯನ್ನು ಹಬೀಬಾ ತಾಜ್ (30) ಎಂದು ಗುರುತಿಸಲಾಗಿದೆ. ಆರೋಪಿ ಶೇಕ್ ಮೆಹಬೂಬ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಕಡಬದಲ್ಲಿ ಆ್ಯಸಿಡ್ ದಾಳಿ ಪ್ರಕರಣ: ಎಂಬಿಎ ವಿದ್ಯಾರ್ಥಿಯಿಂದ ಕೃತ್ಯ

Last Updated : Mar 5, 2024, 12:12 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.