ETV Bharat / state

ಹಾವೇರಿ: ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿಹೋಗಿ 12 ವರ್ಷದ ಬಾಲಕ ಸಾವು

ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಬಾಲಕನೋರ್ವ ನೀರಿನಲ್ಲಿ ಕೊಚ್ಚಿಹೋಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

author img

By ETV Bharat Karnataka Team

Published : 3 hours ago

Updated : 2 hours ago

rain
ಬಾಲಕನಿಗಾಗಿ ಶೋಧ ನಡೆಸಿದ ಸಿಬ್ಬಂದಿ (ETV Bharat)

ಹಾವೇರಿ: ನಗರದಲ್ಲಿ ಭಾರಿ ಮಳೆಯಿಂದ ಬಾಲಕನೊಬ್ಬ ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತ ಬಾಲಕನನ್ನು 12 ವರ್ಷದ ನಿವೇದನ ಬಸವರಾಜ್ ಗುಡಗೇರಿ ಎಂದು ಗುರುತಿಸಲಾಗಿದೆ.

ನಗರದ ಎಸ್​​ಪಿ ಕಚೇರಿ ಮುಂದೆ ರಸ್ತೆ ಕಾಣದೆ, ಚರಂಡಿಯಲ್ಲಿ ಬಿದ್ದು ನಿವೇದನ ಕೊಚ್ಚಿ ಹೋಗಿದ್ದ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಬಾಲಕನ ಶೋಧ ಕಾರ್ಯ ನಡೆಸಿದ್ದರು. ಬಳಿಕ ಬಾಲಕನನ್ನು ಪತ್ತೆ ಹಚ್ಚಲಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ಅವರು ದೃಢಪಡಿಸಿದ್ದಾರೆ.

ಘಟನೆ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ (ETV Bharat)

''ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಮೃತಪಟ್ಟಿದ್ದಾನೆ. ಅತಿಯಾದ ಮಳೆಯಿಂದಾಗಿ ಘಟನೆ ನಡೆದಿದೆ. ಬಾಲಕನ ಪತ್ತೆಗೆ ನಾವು ಸತತ ಕಾರ್ಯಾಚರಣೆ ಮಾಡಿದ್ದೆವು. ವೈದ್ಯರು ಹೇಳುವಂತೆ, ಆಸ್ಪತ್ರೆಗೆ ಬರುವ ಮುನ್ನವೇ ಬಾಲಕ ಮೃತಪಟ್ಟಿದ್ದಾನೆ'' ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ಮಾಹಿತಿ ನೀಡಿದರು.

ಘಟನೆ ಖಂಡಿಸಿ ಪ್ರತಿಭಟನೆ: ಕಾಲುವೆಯಲ್ಲಿ ಬಾಲಕ ಕೊಚ್ಚಿ ಹೋದ ಪ್ರಕರಣ ಖಂಡಿಸಿ, ಸ್ಥಳೀಯರು ಹಾಗೂ ಕುಟುಂಬದ ಸದಸ್ಯರು ಪ್ರತಿಭಟನೆ ನಡೆಸಿದರು. ಶಿವಾಜಿ ನಗರದ 1ನೇ ಕ್ರಾಸ್ ನಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಕೈಗೊಂಡರು. ಕಾಲುವೆ ಒತ್ತುವರಿ ಹಾಗೂ ದುರಸ್ತಿ ಸರಿಯಾಗಿಲ್ಲ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ‌ಮನವೊಲಿಸುವ ಕಾರ್ಯ ಮಾಡಿದ್ದಾರೆ.

ಬಾಲಕ
ಕೊಚ್ಚಿಹೋದ ಬಾಲಕನಿಗಾಗಿ ಶೋಧ (ETV Bharat)

ನಗರದಲ್ಲಿ ಕಳೆದ ರಾತ್ರಿಯಿಂದ ನಗರದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ರಸ್ತೆಗಳು ನೀರು ನಿಂತು ಕೆರೆಗಳಂತಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತೇಲಿಹೋದ ಬಾಲಕ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆತನ ಮನೆಯಲ್ಲಿ ಶೋಕದ ವಾತಾವರಣ ಆವರಿಸಿದೆ. ಬಾಲಕನನ್ನು ಕಳೆದುಕೊಂಡ ಪೋಷಕರು ಕಣ್ಣೀರಿಡುತ್ತಿದ್ದಾರೆ.

ಸೀಗೆ ಹುಣ್ಣಿಮೆ ಸಂಭ್ರಮಕ್ಕೆ ಮಳೆ ಅಡ್ಡಿ: ಹಾವೇರಿ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ರೈತರ ಸೀಗೆ ಹುಣ್ಣಿಮೆ ಹಬ್ಬದ ಸಂಭ್ರಮಕ್ಕೆ ತಣ್ಣೀರೆರಚಿದೆ. ಹಬ್ಬದ ಆಚರಣೆ ಇರಲಿ, ಇದ್ದ ಬೆಳೆಯನ್ನೂ ಉಳಿಸಿಕೊಳ್ಳಲು ಜಿಲ್ಲೆಯ ಅನ್ನದಾತರು ಪರದಾಡುವಂತಾಗಿದೆ. ಜಮೀನಿಗೆ ನೀರು ನುಗ್ಗುತ್ತಿದ್ದು, ಮೆಕ್ಕೆಜೋಳ, ‌ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣ ನಾಶವಾಗಿವೆ.

rain
ಹೊಲಕ್ಕೆ ನುಗ್ಗಿರುವ ನೀರು (ETV Bharat)

ಹಾವೇರಿ ತಾಲೂಕಿನ ಅಗಡಿಯಲ್ಲಿ ರೈತರ ಮೆಕ್ಕೆಜೋಳದ ಜಮೀನಿಗೆ ನೀರು ನುಗ್ಗಿದೆ. ನಿರಂತರ ಮಳೆಗೆ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. ನಗರ ಪ್ರದೇಶದಲ್ಲೂ ಭಾರಿ ಮಳೆಯಿಂದ ರಸ್ತೆಗಳು ಕೆರೆಗಳಂತಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: ಸುರಿಯುತ್ತಿರುವ ಮಳೆಯಿಂದ ಬೆಂಗಳೂರಲ್ಲಿ ಹಲವು ಅವಾಂತರ: ಜನಜೀವನ ಅಸ್ತವ್ಯಸ್ತ

Last Updated : 2 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.