ETV Bharat / state

ನಿಮ್ಹಾನ್ಸ್​ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರ ಓಪನ್​ - Nimhans

ರಾಜ್ಯದ 33 ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರ ತೆರೆಯಲಾಗಿದ್ದು ಈ ಸೇವೆ ದೇಶಕ್ಕೆ ಮಾದರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮೆದುಳು ಆರೋಗ್ಯ ಕೇಂದ್ರ ಓಪನ್​
ಮೆದುಳು ಆರೋಗ್ಯ ಕೇಂದ್ರ ಓಪನ್​
author img

By ETV Bharat Karnataka Team

Published : Mar 12, 2024, 10:19 AM IST

ಬೆಂಗಳೂರು: ನಿಮ್ಹಾನ್ಸ್​ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ.‌ ಈ ಮೂಲಕ ನಿಮ್ಹಾನ್ಸ್ ಮೇಲಿನ ಒತ್ತಡ ಕಡಿಮೆ ಮಾಡುವುದರೊಂದಿಗೆ, ಜಿಲ್ಲಾಮಟ್ಟದ ಆಸ್ಪತ್ರೆಗಳಲ್ಲಿಯೇ ಮೆದುಳು ಹಾಗೂ ನರ ಸಮಸ್ಯೆಗಳನ್ನು ಹೊಂದಿರುವ ರೋಗಿಗಳಿಗೆ ಆರೋಗ್ಯ ಸೇವೆ ಒದಗಿಸುವತ್ತ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು, ದೇಶಕ್ಕೆ ಮಾದರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನ ನಿಮ್ಹಾನ್ಸ್​ನಲ್ಲಿ ಸೋಮವಾರ ನೂತನ ಮೆದುಳು ಆರೋಗ್ಯ ಕೇಂದ್ರಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಇದೊಂದು ಮಾದರಿ ಕಾರ್ಯಕ್ರಮವಾಗಿದೆ. ಮೆದುಳು ಆರೋಗ್ಯದ ವಿಚಾರದಲ್ಲಿ ಹೆಚ್ಚು ಒತ್ತು ನೀಡಬೇಕಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ ಎಂದರು.

ಮೆದುಳು ಹಾಗೂ ನರ ಸಮಸ್ಯೆಗಳಿಗೆ ರಾಜ್ಯದ ಜನರು ಬೆಂಗಳೂರಿನ ನಿಮ್ಹಾನ್ಸ್​ಗೆ ಆಗಮಿಸಬೇಕಾಗಿತ್ತು. ನಿಮ್ಹಾನ್ಸ್ ಮೇಲೆ ಹೆಚ್ಚಿನ ಒತ್ತಡ ಇತ್ತು‌. ಈ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ, ಜಿಲ್ಲಾ ಮಟ್ಟದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲು 33 ಮೆದುಳು ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ. ನಿಮ್ಹಾನ್ಸ್​ ಸಹಯೋಗ ಹಾಗೂ ಸಲಹೆಗಳೊಂದಿಗೆ ಈ ಕೇಂದ್ರಗಳಲ್ಲಿ ಇನ್ನು ಮುಂದೆ ಚಿಕಿತ್ಸೆ ದೊರೆಯಲಿದೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ನಿಮ್ಹಾನ್ಸ್​ ತಜ್ಞ ವೈದ್ಯರ ಸಲಹೆ ಪಡೆದುಕೊಂಡು ಜಿಲ್ಲಾ ಕೇಂದ್ರಗಳಲ್ಲಿಯೇ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ
ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ

ಪಾರ್ಶ್ವವಾಯು, ಅಪಸ್ಮಾರ, ಮರೆವಿನ ಕಾಯಿಲೆ ಮತ್ತು ತಲೆನೋವು ಸೇರಿದಂತೆ ನರವೈಜ್ಞಾನಿಕ ಕಾಯಿಲೆಗಳ ಹೊರೆ ಭಾರತದಲ್ಲಿ ಹೆಚ್ಚಾಗುತ್ತಿದೆ. ಇವು ಮರಣ ಮತ್ತು ಅಂಗವೈಕಲ್ಯಕ್ಕೆ ಪ್ರಮುಖ ಕಾರಣವಾಗಿವೆ. ಇದನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಆರೋಗ್ಯ ಕೇಂದ್ರಗಳು ಸಹಕಾರಿಯಾಗಲಿವೆ. ಪ್ರತಿ ಆರೋಗ್ಯ ಕೇಂದ್ರ ವೈದ್ಯರು, ಪಿಸಿಯೋಥೆರಪಿಸ್ಟ್​​, ಸ್ಪೀಚ್​ ಥೆರಪಿಸ್ಟ್​​, ಮನಶ್ಯಾಸ್ತ್ರಜ್ಞರು, ನರ್ಸ್​ ಮತ್ತು ಜಿಲ್ಲಾ ಸಂಯೋಜಕರನ್ನು ಒಳಗೊಂಡಿರುತ್ತದೆ ಎಂದು ಹೇಳಿದರು..

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ
ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ

ಇದನ್ನೂ ಓದಿ: ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆಗೆ ನಿರ್ಬಂಧ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.