ಹಾಸನ: ಲಂಚ ಸ್ವೀಕರಿಸುತ್ತಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮತ್ತು ಕಚೇರಿ ಅಧೀಕ್ಷಕನನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಡಿಡಿಪಿಐ ಹೆಚ್.ಕೆ.ಪಾಂಡು ಮತ್ತು ಕಚೇರಿ ಅಧೀಕ್ಷಕ ಎ.ಎಸ್.ವೇಣುಗೋಪಾಲ್ ರಾವ್ ಸಿಕ್ಕಿಬಿದ್ದ ಅಧಿಕಾರಿಗಳು. ಇವರು ಖಾಸಗಿ ಶಾಲೆಯ ಶಿಕ್ಷಕಿಯ ವರ್ಗಾವಣೆಗೆ ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ಶಿಕ್ಷಕಿಯ ಪತಿ ಅಭಿಜಿತ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಮೊದಲ ಕಂತಿನಲ್ಲಿ 40 ಸಾವಿರ ರೂ. ಅನ್ನು ಶಿಕ್ಷಕಿ ಡಿಡಿಪಿಐಗೆ ನೀಡುತ್ತಿದ್ದಾಗ ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಾಲು ಮತ್ತು ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿ, ಹಣದ ಸಮೇತ ಡಿಡಿಪಿಐ ಮತ್ತು ಕಚೇರಿ ಅಧೀಕ್ಷಕರನ್ನು ಸೆರೆ ಹಿಡಿದಿದ್ದಾರೆ.
ಇದನ್ನೂ ಓದಿ: ಹೊಸ ವರ್ಷದಂದು ಲೋಕಾಯುಕ್ತ ದಾಳಿ: ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ಬಲೆಗೆ