ETV Bharat / state

ಚಿಕ್ಕೋಡಿ : ಜಮೀನು ವಿವಾದದಲ್ಲಿ ದಾಯಾದಿ ಕಲಹ; ಪರಸ್ಪರ ಹೊಡೆದಾಡಿಕೊಂಡು ಅಣ್ತಮ್ಮ ಸಾವು - LAND DISPUTE ISSUE - LAND DISPUTE ISSUE

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ ತಮ್ಮಂದಿರು ಪರಸ್ಪರ ಹೊಡೆದಾಡಿಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ.

brothers-died
ಹಣಮಂತ ರಾಮಚಂದರ ಖೋತ, ಖಂಡೋಭಾ ತಾನಾಜಿ ಖೋತ (ETV Bharat)
author img

By ETV Bharat Karnataka Team

Published : Jul 23, 2024, 4:59 PM IST

ಚಿಕ್ಕೋಡಿ (ಬೆಳಗಾವಿ) : ಜಮೀನು ವಿವಾದ ಹಿನ್ನೆಲೆ ಅಣ್ಣ ತಮ್ಮಂದಿರು ಪರಸ್ಪರ ಮಾರಕಾಸ್ತ್ರಗಳಿಂದ ಹೊಡೆದಾಟ ಮಾಡಿಕೊಂಡು ದುರಂತ ಅಂತ್ಯ ಕಂಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ನಡೆದಿದೆ.

ಈ ಗಲಾಟೆ ನಡೆದು ಹಣಮಂತ ರಾಮಚಂದರ ಖೋತ (35) ಖಂಡೋಭಾ ತಾನಾಜಿ ಖೋತ (30) ಮೃತರು. ಸೋಮವಾರ ರಾತ್ರಿ ಮಾತಿನ ಚಕಮಕಿ ನಡೆದು ಇಬ್ಬರ ಜಗಳ ಅತಿರೇಕಕ್ಕೆ ಏರಿ ಮಾರಕಾಸ್ತ್ರಗಳಿಂದ ದಾಳಿ ಮಾಡಿಕೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುಗಳನ್ನು ಕುಟುಂಬಸ್ಥರು ಪಕ್ಕದ ಮಹಾರಾಷ್ಟ್ರದ ಆಸ್ಪತ್ರೆಗೆ ದಾಖಲು ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಕೂಡ ಮೃತಪಟ್ಟಿದ್ದಾರೆ. ಸಹೋದರ ಸಂಬಂಧಿಕರ ಮಕ್ಕಳ ನಡುವೆ ಈ ಗಲಾಟೆ ಸಂಭವಿಸಿದೆ. 20 ಗುಂಟೆ ಜಮೀನಿಗೋಸ್ಕರ ಆಗಾಗ ಇವರ ಮಧ್ಯೆ ಗಲಾಟೆ ನಡೆಯುತ್ತಿತ್ತು. ತಡರಾತ್ರಿ ನಡೆದ ಗಲಾಟೆಯಲ್ಲಿ ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಟ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬೆಳಗಾವಿ ಎಸ್​ಪಿ ಭೀಮಾಶಂಕರ್ ಗುಳೇದ, ಅಥಣಿ ಡಿವೈಎಸ್ಪಿ ಶ್ರೀಪಾದ ಜಲದೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ವಿಜಯಪುರ : ವಿದ್ಯುತ್ ಸ್ಪರ್ಶಿಸಿ ಸಹೋದರರ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.