ETV Bharat / state

ಬೆಳಗಾವಿ: ಅಪ್ರಾಪ್ತ ಮಗಳೊಂದಿಗೆ ಮದುವೆಗೆ ಒತ್ತಾಯ, ಅಣ್ಣ - ತಮ್ಮನ ಹತ್ಯೆ ಮಾಡಿದ ಬಾಲಕಿಯ ತಂದೆ - Double Murder

ಅಪ್ರಾಪ್ತೆ ಜೊತೆ ಮದುವೆ ಮಾಡಿಕೊಡುವಂತೆ ಒತ್ತಾಯಿಸುತ್ತಿದ್ದ ಯುವಕ ಹಾಗೂ ಆತನ ಸಹೋದರನನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

murder
ಯುವಕರಿಬ್ಬರ ಕೊಲೆ (ETV Bharat)
author img

By ETV Bharat Karnataka Team

Published : May 8, 2024, 3:37 PM IST

Updated : May 8, 2024, 3:49 PM IST

ಸೋಮಪ್ಪ ಅಳಗೋಡಿ (ETV Bharat)

ಬೆಳಗಾವಿ: ಅಪ್ರಾಪ್ತ ಮಗಳ ಜೊತೆ ಮದುವೆ ಮಾಡಿಕೊಡುವಂತೆ ಒತ್ತಾಯಿಸುತ್ತಿದ್ದ ಯುವಕ ಹಾಗೂ ಜಗಳ ಬಿಡಿಸಲು ಬಂದ ಆತನ ಸಹೋದರನನ್ನು ಚಾಕುವಿನಿಂದ ಇರಿದು ಬಾಲಕಿಯ ತಂದೆಯೇ ಹತ್ಯೆ ಮಾಡಿರುವ ಘಟನೆ ಸವದತ್ತಿ ತಾಲೂಕಿನ ದುಂಡನಕೊಪ್ಪ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ದುಂಡನಕೊಪ್ಪ ಗ್ರಾಮದ ಯಲ್ಲಪ್ಪ ಸೋಮಪ್ಪ ಅಳಗೋಡಿ (22) ಹಾಗೂ ಮಾಯಪ್ಪ ಸೋಮಪ್ಪ ಅಳಗೋಡಿ (20) ಕೊಲೆಯಾದ ಸಹೋದರರು. ಸವದತ್ತಿ ತಾಲೂಕಿನ ದುಂಡನಕೊಪ್ಪ ಗ್ರಾಮದ ಫಕೀರಪ್ಪ ಭಾಂವಿಹಾಳ (50) ಕೊಲೆ ಮಾಡಿರುವ ಆರೋಪಿ.

ಇಬ್ಬರಿಗೂ ಚಾಕು ಇರಿತ: ಆರೋಪಿ ಫಕೀರಪ್ಪನ‌ ಅಪ್ರಾಪ್ತ ಪುತ್ರಿಯನ್ನು ಪ್ರೀತಿಸುವಂತೆ ಮಾಯಪ್ಪ ಹಳೇಗೋಡಿ ಪದೇ ಪದೆ ಪೀಡಿಸುತ್ತಿದ್ದನಂತೆ. ಈ ವಿಷಯ ತಿಳಿದು ಪುತ್ರಿಯ ತಂಟೆಗೆ ಬರಬೇಡ ಎಂದು ಆತನಿಗೆ ಎಷ್ಟೇ ಬುದ್ಧಿವಾದ ಹೇಳಿದರೂ ಮಾತ್ರ ಸುಮ್ಮನಾಗದೇ, ತನ್ನ ಹಳೆ ಚಾಳಿ ಮುಂದುವರೆಸಿದ್ದ. ಇದರಿಂದ ಆಕ್ರೋಶಗೊಂಡ ಫಕೀರಪ್ಪ, ಮಾಯಪ್ಪನಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ, ಜಗಳ ಬಿಡಿಸಲು ಬಂದ ಯಲ್ಲಪ್ಪನಿಗೂ ಚಾಕುವಿನಿಂದ ಫಕೀರಪ್ಪ ಇರಿದು ಪರಾರಿಯಾಗಿದ್ದ. ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದ ಯಲ್ಲಪ್ಪನನ್ನು ಕೂಡಲೇ ಗ್ರಾಮಸ್ಥರು ಮತ್ತು ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಯಲ್ಲಪ್ಪ ಕೂಡ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ‌ರಾಮದುರ್ಗ ಡಿವೈಎಸ್‌ಪಿ ಹಾಗೂ ಮುರಗೋಡ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಇಂದು ಆರೋಪಿ‌ ಫಕೀರಪ್ಪ ಭಾಂವಿಹಾಳನನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ. ಈ ಬಗ್ಗೆ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯೆ: ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದು, ''ಆರೋಪಿಯ ಅಪ್ರಾಪ್ತ ಪುತ್ರಿಯನ್ನು ತನಗೆ ಮದುವೆ ಮಾಡಿಕೊಡುವಂತೆ ಅವರ ಮನೆಗೆ ಹೋಗಿ ಕೊಲೆಯಾದ ಮಾಯಪ್ಪ ಗಲಾಟೆ ಮಾಡಿದ್ದ. ಅಲ್ಲದೇ ಆತನಿಗೆ ಪರಿ ಪರಿಯಾಗಿ ಹೇಳಿದರೂ ಮಗಳಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿರಲಿಲ್ಲ. ಹಾಗಾಗಿ, ನಿನ್ನೆ ಅಣ್ಣಾ, ತಮ್ಮನ‌ ಮೇಲೆ ಹಲ್ಲೆ ಮಾಡಿದ್ದಾನೆ. ಆರೋಪಿಯ ಪ್ರಮುಖ ಟಾರ್ಗೆಟ್ ಮಾಯಪ್ಪ ಆಗಿದ್ದ. ಆದರೆ, ಜಗಳ ಬಿಡಿಸಲು ಬಂದ ಆತನ ಅಣ್ಣ ಯಲ್ಲಪ್ಪನನ್ನೂ ಆರೋಪಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ಕಾನೂ‌ನು ಕ್ರಮ ಕೈಗೊಂಡಿದ್ದೇವೆ'' ಎಂದು ತಿಳಿಸಿದ್ದಾರೆ.

ಯುವಕರ ತಂದೆ ಹೇಳಿದ್ದೇನು?: ಕೊಲೆಯಾದ ಸಹೋದರರ ತಂದೆ ಸೋಮಪ್ಪ ಅಳಗೋಡಿ ಮಾಧ್ಯಮದವರ ಜೊತೆ ಮಾತನಾಡಿದ್ದು, ''ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ನಾನು ಕೂಡ ಸ್ಥಳದಲ್ಲೇ ಇದ್ದೆ. ಮೊದಲಿಗೆ ಸಣ್ಣ ಮಗನಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ.‌ ಈ ವೇಳೆ ಜಗಳ ಬಿಡಿಸಲು ಬಂದ ದೊಡ್ಡ ಮಗನಿಗೂ ಚಾಕು ಹಾಕಿದ. ಇಬ್ಬರೂ ನನ್ನ ಬಿಟ್ಟರು. ನನ್ನ ಹೆಂಡತಿ ತೀರಿಕೊಂಡು 10 ವರ್ಷ ಆಗಿದೆ. ತಾಯಿ ಇಲ್ಲದ ಮಕ್ಕಳೆಂದು ನಾನೇ ಸಾಕಿ, ಸಲುಹುತ್ತಿದ್ದೆ. ಯಾವ ಕಾರಣಕ್ಕೆ ಕೊಲೆ ಮಾಡಿದ್ದಾನೋ ಗೊತ್ತಿಲ್ಲ. ಮಗ ಪ್ರೀತಿ ಮಾಡುತ್ತಿರುವ ವಿಚಾರವೂ‌ ನನಗೆ ಗೊತ್ತಿರಲಿಲ್ಲ. ನಾಲ್ಕು ದಿನದ ಹಿಂದೆ ಹಿರಿಯರು ಕೂಡಿಕೊಂಡು ಬಗೆಹರಿಸಿದ್ದರು. ಆದರೆ, ಈಗ ನೋಡಿದರೆ ನನ್ನ ಕಣ್ಮುಂದೆಯೇ ಮಕ್ಕಳು ಕೊಲೆಯಾಗಿ ಹೋದರು'' ಎಂದು ದುಃಖಿತರಾದರು.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ - Rowdy sheeter murder

Last Updated : May 8, 2024, 3:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.