ETV Bharat / state

ಬೆಳಗಾವಿ: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಭೀಕರ ಕೊಲೆ - murder

author img

By ETV Bharat Karnataka Team

Published : Aug 20, 2024, 1:46 PM IST

ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ.

ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ
ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ (ETV Bharat)

ಬೆಳಗಾವಿ: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ನಿನ್ನೆ ನಡೆದಿದೆ.

ಕರ್ಲೆ ಗ್ರಾಮದ ಮೋಹನ ತಳವಾರ(52) ಹತ್ಯೆಯಾದವರು. ಕೆಲಸದ ನಿಮಿತ್ತ ನಿನ್ನೆ ಕಿಣೆಯೆ ಗ್ರಾಮ ಪಂಚಾಯತಿಗೆ ಮೋಹನ ಹೋಗಿದ್ದರು. ಕೆಲಸ ಮುಗಿಸಿಕೊಂಡು ಮರಳಿ ಬೈಕ್​ನಲ್ಲಿ ಬರುತ್ತಿದ್ದಾಗ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೋಹನ್​ನನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೋಹನ ಅವರು ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್, ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಈಟಿವಿ ಭಾರತ ಪ್ರತಿನಿಧಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರನ್ನು ಸಂಪರ್ಕಿಸಿದಾಗ, "ಪ್ರಕರಣ ಸಂಬಂಧ ಒಂದು ತಂಡ ರಚಿಸಲಾಗಿದ್ದು, ಕೊಲೆ ಯಾವ ಕಾರಣಕ್ಕೆ ಆಗಿದೆ..? ಕೊಲೆ ಯಾರು ಮಾಡಿದ್ದಾರೆ ಎಂಬ ಕುರಿತು ತನಿಖೆ ಮಾಡಲಾಗುತ್ತಿದೆ. ಶೀಘ್ರವೇ ಆರೋಪಿಗಳನ್ನು ಪೊಲೀಸರು ಬಂಧಿಸಲಿದ್ದಾರೆ" ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಉಡುಪಿ: ಮೊಬೈಲ್,​ ಚಿನ್ನಾಭರಣ ಬಿಟ್ಟು ವರ ನಾಪತ್ತೆ; ಮದುವೆಗೆ ಬಂದವರು ಮರಳಿ ಮನೆ ಹಾದಿ ಹಿಡಿದರು! - Groom Missing

ETV Bharat Logo

Copyright © 2024 Ushodaya Enterprises Pvt. Ltd., All Rights Reserved.