ETV Bharat / state

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಬರ್ಬರ ಕೊಲೆ - Murder In Airport - MURDER IN AIRPORT

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಬರ್ಬರ ಕೊಲೆಯಾಗಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಬೆಚ್ಚಿಬೀಳಿಸಿದೆ.

MURDER IN AIRPORT
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ETV Bharat)
author img

By ETV Bharat Karnataka Team

Published : Aug 28, 2024, 11:06 PM IST

ದೇವನಹಳ್ಳಿ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಕೃಷ್ಣಪ್ಪ(45) ಹತ್ಯೆಯಾದ ವ್ಯಕ್ತಿ. ರಮೇಶ್ ಹತ್ಯೆ ಮಾಡಿದ ಆರೋಪಿಯಾಗಿದ್ದು, ಆತನನ್ನು ವಶಕ್ಕೆ ಪಡೆದಿರುವ ಸಿಐಎಸ್​ಎಫ್​ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಮಾನ ನಿಲ್ದಾಣದ ಟರ್ಮಿನಲ್ 1ರ ಬಳಿ ಬುಧವಾರ ಸಂಜೆ 6:30ರ ಸಮಯದಲ್ಲಿ ಈ ಘಟನೆ ನಡೆದಿದೆ. ದೇವನಹಳ್ಳಿಯ ಶೆಟ್ಟಿಗೆರೆ ಬಳಿ ಹೆಂಡತಿ ಮಕ್ಕಳ ಜೊತೆ ವಾಸವಾಗಿದ್ದ ರಾಮಕೃಷ್ಣಪ್ಪ, ವಿಮಾನ ನಿಲ್ದಾಣದ ಟರ್ಮಿನಲ್ ಒಂದರಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದೆಂದು ಹೇಳಲಾಗುತ್ತಿದೆಯಾದರೂ ನಿಖರ ಕಾರಣ ತಿಳಿದು ಬಂದಿಲ್ಲ. ಕೊಲೆ ನಿಲ್ದಾಣದಲ್ಲಿ ಕೆಲ ಹೊತ್ತು ಆತಂಕ ಸೃಷ್ಟಿಸಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದ್ದಾರೆ. ಈ ಬಗ್ಗೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಪತ್ನಿ ಕೊಲೆ ಮಾಡಿ ಪೊಲೀಸರಿಗೆ ದೂರು ನೀಡಿದ್ದ ಆರೋಪಿ ಪತಿ ಬಂಧನ - Husband Kills Wife

ETV Bharat Logo

Copyright © 2025 Ushodaya Enterprises Pvt. Ltd., All Rights Reserved.