ETV Bharat / state

ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಬಿ.ಎಸ್.ಯಡಿಯೂರಪ್ಪ ಆಗ್ರಹ - BS Yediyurappa - BS YEDIYURAPPA

ಸಚಿವ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಬಿಎಸ್​ವೈ ಆಗ್ರಹಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ (ETV Bharat)
author img

By ETV Bharat Karnataka Team

Published : May 29, 2024, 4:47 PM IST

Updated : May 29, 2024, 5:36 PM IST

ಬಿ.ಎಸ್​ ಯಡಿಯೂರಪ್ಪ (ETV Bharat)

ಶಿವಮೊಗ್ಗ: ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.

ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಂದ್ರಶೇಖರ್ ಆತ್ಮಹತ್ಯೆ ಒಂದು ಅಹಿತಕರ ಘಟನೆ. ಅವರು ಡೆತ್​ನೋಟ್​ನಲ್ಲಿ ತಮ್ಮ ಸಾವಿಗೆ ಕಾರಣರಾದವರ ಹೆಸರುಗಳನ್ನು ಬರೆದಿಟ್ಟಿದ್ದಾರೆ. ಸದ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದಾರೆ. ಡೆತ್​ನೋಟ್​ನಲ್ಲಿ ಹೆಸರು ಇರುವವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದರು. ಅಲ್ಲದೇ ಸಚಿವ ನಾಗೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಇದೇ ವೇಳೆ ಅವರು ಆಗ್ರಹಿಸಿದರು.

20 ರಿಂದ 22 ಸ್ಥಾನಗಳಲ್ಲಿ ಗೆಲುವು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವು ನೂರಕ್ಕೆ ನೂರು 20 ರಿಂದ 22 ಸ್ಥಾನಗಳನ್ನು ಗೆದ್ದೆ ಗೆಲ್ಲುತ್ತೇವೆ. ಡಾ.ಧನಂಜಯ್ ಸರ್ಜಿ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಖಂಡಿತಾ ಅವರು ದೊಡ್ಡ ಅಂತರದಲ್ಲಿ ಗೆದ್ದೆ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ. ಎಲ್ಲ ಕಡೆ ಅವರ ಪರವಾದ ಅಲೆ ಇದೆ. ವಾತಾವರಣ ಅನುಕೂಲಕರವಾಗಿರವುದರಿಂದ ವಿಧಾನ ಪರಿಷತ್​ಗೆ ಹೆಚ್ಚು ಸೀಟು ಗೆಲ್ಲುವ ಪ್ರಯತ್ನ ಮಾಡ್ತಾ ಇದ್ದೇವೆ. ಅದರಲ್ಲಿ ಯಶಸ್ವಿ ಆಗುತ್ತೇವೆ ಎಂಬ ವಿಶ್ವಾಸವಿದೆ ಎಂದರು. ಬಳಿಕ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ರಘುಪತಿ ಭಟ್ ಬಗ್ಗೆ ಮಾತನಾಡಲ್ಲ, ಅವರಿಗೆ ಎಲ್ಲ ಸ್ಥಾನ ಮಾನವನ್ನು ನೀಡಲಾಗಿತ್ತು‌. ಆದರೂ ಹಠ ಮಾಡಿ ನಿಂತಿದ್ದಾರೆ. ಜನ ಸೂಕ್ತ ತೀರ್ಮಾನ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದರು.

ಇದನ್ನೂ ಓದಿ: ಅಧಿಕಾರಿ ಆತ್ಮಹತ್ಯೆ ಪ್ರಕರಣ: ನನ್ನ ಹೆಸರು ಯಾಕೆ ತಳುಕು ಹಾಕಿದ್ದಾರೆ ಎಂಬುದೇ ನನಗೆ ಗೊತ್ತಿಲ್ಲ - ಸಚಿವ ನಾಗೇಂದ್ರ - Minister B Nagendra Reaction

Last Updated : May 29, 2024, 5:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.