ETV Bharat / state

ಬಜೆಟ್​-2024: ಸಮುದ್ರ ಸಾರಿಗೆ ಹಾಗೂ ಪರಿಸರ ಪ್ರವಾಸೋದ್ಯಮಕ್ಕೆ ಒತ್ತು - ಕರ್ನಾಟಕ ಬಜೆಟ್ 2024

ಮೂಲಸೌಕರ್ಯ, ಬಂದರು ಮತ್ತು ಒಳನಾಡು ಜಲಸಾರಿಗೆ ವಿಭಾಗಕ್ಕೆ ಇಂದಿನ ಬಜೆಟ್​ನಲ್ಲಿ ಘೋಷಿಸಲಾದ ಯೋಜನೆಗಳ ಮಾಹಿತಿ ಇಲ್ಲಿದೆ.

Budget 2024 Focus on sea transport freight and eco tourism

author img

By ETV Bharat Karnataka Team

Published : Feb 16, 2024, 12:48 PM IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ರಾಜ್ಯ ಬಜೆಟ್​-2024ರಲ್ಲಿ ಮೂಲಸೌಕರ್ಯ, ಬಂದರು ಮತ್ತು ಒಳನಾಡು ಜಲಸಾರಿಗೆ ವಿಭಾಗಕ್ಕೆ ಕೆಲ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಕ್ಕೆ ಬಜೆಟ್​ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಸಾಗರಮಾಲಾ ಯೋಜನೆಯಡಿ 26 ಕಾಮಗಾರಿಗಳು, ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಎರಡನೇ ಬೃಹತ್ ಬಂದರಿಗಾಗಿ ಟೆಂಡರ್ ಕರೆಯಲಾಗಿರುವುದು, ಜಲಮೆಟ್ರೋ ಸೇವೆಗಾಗಿ ಕಾರ್ಯಸಾಧ್ಯತಾ ವರದಿ ಕೇಳಿರುವುದು ಸೇರಿದಂತೆ ಇನ್ನೂ ಹಲವಾರು ಯೋಜನೆಗಳನ್ನು ಮುಖ್ಯಮಂತ್ರಿಗಳು ಪ್ರಕಟಿಸಿದ್ದಾರೆ.

ಒಟ್ಟಾರೆಯಾಗಿ ಮೂಲಸೌಕರ್ಯ, ಬಂದರು ಮತ್ತು ಒಳನಾಡು ಜಲಸಾರಿಗೆಗೆ ಇಂದಿನ ಬಜೆಟ್​ನಲ್ಲಿ ಘೋಷಿಸಲಾದ ಯೋಜನೆಗಳು ಹಾಗೂ ಅನುದಾನ ಮೀಸಲಿಟ್ಟ ಮಾಹಿತಿ ಹೀಗಿದೆ:

  • ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಆರ್ಥಿಕ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ
  • ರೈಲು ಮತ್ತು ವಿಮಾನ ಸಂಪರ್ಕವನ್ನು ಒದಗಿಸುವ ಮೂಲಕ ಕೆಲವು ವರ್ಷಗಳಲ್ಲಿ ಅಂದಾಜು 20,000 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಗಣನೀಯ ಅಭಿವೃದ್ಧಿ ಸಾಧನೆಯ ಗುರಿ
  • ರಾಜ್ಯದಲ್ಲಿ ಜಲಸಾರಿಗೆ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಖಾಸಗಿ ಹೂಡಿಕೆಗಳನ್ನು ಆಕರ್ಷಿಸಲು, ಕರ್ನಾಟಕ ಜಲಸಾರಿಗೆ ಅಭಿವೃದ್ಧಿ ನೀತಿ ಹಾಗೂ ಒಳನಾಡು ಜಲಸಾರಿಗೆ ನಿಯಮಗಳನ್ನು ರೂಪಿಸಲಾಗುವುದು
  • ಸಾಗರಮಾಲಾ ಯೋಜನೆಯಡಿ ಅಂದಾಜು 1,017 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 26 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಆ ಪೈಕಿ ರಾಜ್ಯದ ಪಾಲು 530 ಕೋಟಿ ರೂಗಳಾಗಿರಲಿದೆ. ಇನ್ನೂ 1,145 ಕೋಟಿ ರೂ. ಮೊತ್ತದ 12 ಕಾಮಗಾರಿಗಳ ವಿಸ್ತ್ರತ ಯೋಜನಾ ವರದಿಗಳನ್ನು ಕೇಂದ್ರದ ಅನುಮೋದನೆಗಾಗಿ ಸಲ್ಲಿಸಲಾಗಿದೆ.
  • ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸಾಮರ್ಥ್ಯದ ಮತ್ತು 4,200 ಕೋಟಿ ರೂ. ಅಂದಾಜು ಯೋಜನಾ ವೆಚ್ಚದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಹೊಸ ಆಳಸಮುದ್ರ ಸರ್ವಋತು ಬಂದರು ಅಭಿವೃದ್ಧಿ
  • ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಅಂದಾಜು 3048 ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಎರಡನೇ ಬೃಹತ್ ಬಂದರಿನ ಅಭಿವೃದ್ದಿಗೆ ಅಂತರಾಷ್ಟ್ರೀಯ ಟೆಂಡರ್ ಕರೆಯಲಾಗಿದೆ.
  • ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ನಾಲ್ಕು ಬರ್ತ್‌ಗಳನ್ನು ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ.
  • ಕಾರವಾರ, ಹಳೆ ಮಂಗಳೂರು ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಸುಗಮ ಸಂಚಾರಕ್ಕಾಗಿ ಹೂಳೆತ್ತುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಗೊಳ್ಳಲಾಗುತ್ತಿದೆ
  • ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ವಿವಿಧೋದ್ದೇಶ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿ ತಯಾರಿಸಲಾಗುತ್ತಿದೆ.
  • ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಆಳವಡಿಕೆ ಕಾಮಗಾರಿಯನ್ನು ಕೈಗೊಳ್ಳಲಾಗುವುದು
  • ಹಳೇ ಮಂಗಳೂರು ಬಂದರಿನಲ್ಲಿ 350 ಮೀ. ಉದ್ದದ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿಯನ್ನು 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.
  • ಹಳೆ ಮಂಗಳೂರು ಮತ್ತು ಹಂಗಾರಕಟ್ಟೆ ಬಂದರುಗಳಲ್ಲಿ ಸಾರ್ವಜನಿಕ - ಖಾಸಗಿ ಸಹಭಾಗಿತ್ವದಲ್ಲಿ ಆಧುನಿಕ ಹಡಗು ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಈ ವಲಯದಲ್ಲಿ ಇನ್ನೂ ಹೆಚ್ಚು ಹೂಡಿಕೆಯನ್ನು ಆಕರ್ಷಿಸಲು ಆದ್ಯತೆ ನೀಡಲಾಗುವುದು.
  • ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಾರ್ಯಸಾಧ್ಯತಾ ವರದಿಗಳ ತಯಾರಿಕೆಗಾಗಿ Karnataka Infrastructure Project Development Fund (KIPDF) ಸ್ಥಾಪಿಸಲಾಗಿದ್ದು, ಇದನ್ನು ಆರ್ಥಿಕವಾಗಿ ಮತ್ತಷ್ಟು ಸದೃಢಗೊಳಿಸಲಾಗುವುದು.
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರೂಸ್ ಮತ್ತು ಪ್ರವಾಸೋದ್ಯಮ ಬಂದರನ್ನು (ICTP) ಅಭಿವೃದ್ಧಿಪಡಿಸಲು ಐ.ಐ.ಟಿ. ಮದ್ರಾಸ್ ಸಹಯೋಗದೊಂದಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
  • ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಅನ್ನು ತಯಾರಿಸಲಾಗುವುದು.
  • ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
  • ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಸಂಪರ್ಕ ಸಾಧಿಸುವ ದೃಷ್ಟಿಯಿಂದ 1600 ಕೋಟಿ ರೂ. ವೆಚ್ಚದಲ್ಲಿ ವಿವಿಧ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ
  • ಮೈಸೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆಗೆ ನಮ್ಮ ಅಧಿಕಾರಕ್ಕೆ ಬಂದ ನಂತರ ಭೂಸ್ವಾಧೀನಕ್ಕೆ 126 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಹಾಗೂ ಪ್ರಸಕ್ತ ಸಾಲಿನಲ್ಲಿ ಬಾಕಿ 43 ಕೋಟಿ ರೂ. ಬಿಡುಗಡೆಗೊಳಿಸಿ, ಕಾಮಗಾರಿ ಪ್ರಾರಂಭಕ್ಕೆ ಕ್ರಮ ವಹಿಸಲಾಗುವುದು.
  • ವಿಜಯಪುರದಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯು ಮುಕ್ತಾಯ ಹಂತದಲ್ಲಿದ್ದು, ಶೀಘ್ರವೇ ಕಾರ್ಯಾಚರಣೆ ಪ್ರಾರಂಭವಾಗಲಿದೆ.
  • ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ 2023-24ನೇ ಸಾಲಿನಲ್ಲಿ 55 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಬಾಕಿ ಇರುವ 30 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಲಾಗುವುದು.
  • 220 ಕೋಟಿ ರೂ. ವೆಚ್ಚದ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು.
  • ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯ ತೊಡಕುಗಳನ್ನು ನಿವಾರಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.
  • ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ಸಿಗ್ನೇಚರ್ ಪಾರ್ಕ್‌ 817 ಕೋಟಿ ರೂ. ಯೋಜನಾ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಈ ಸಿಗ್ನೆಚರ್ ಬಿಸಿನೆಸ್ ಪಾರ್ಕ್ ಮುಂದಿನ ದಿನಗಳಲ್ಲಿ 5,000 ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸುವ ನಿರೀಕ್ಷೆಯಿದೆ
  • ರಾಜ್ಯದಲ್ಲಿ ರೈಲ್ವೆ ಇಲಾಖೆಯೊಂದಿಗೆ ವೆಚ್ಚ ಹಂಚಿಕೆ ಆಧಾರದಲ್ಲಿ 12,147 ಕೋಟಿ ರೂ.ಗಳ 9 ರೈಲ್ವೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಯೋಜನೆಯ ಕಾಮಗಾರಿಗಳು ಹಾಗೂ ಭೂಸ್ವಾಧೀನಕ್ಕಾಗಿ 9,915 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಭರಿಸಲಿದೆ
  • 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ರೈಲ್ವೆ ಯೋಜನೆಗಳಿಗಾಗಿ ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಪಾಲನ್ನು ಪಡೆದು ಆದ್ಯತೆಯನುಸಾರ ಕಾಮಗಾರಿ ಪೂರ್ಣಗೊಳಿಸಲಾಗುವುದು.
  • ಮೂಲಸೌಕರ್ಯ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ಪಿ.ಪಿ.ಪಿ. ನೀತಿ-2018ರ ಮಧ್ಯಂತರ ಪರಿಷ್ಕರಣೆಯನ್ನು ಮಾಡಲಾಗುವುದು.
  • ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಎಲ್ಲಾ ಪಿ.ಪಿ.ಪಿ. ಮಾದರಿಯ ಯೋಜನೆಗಳ ಮಾಹಿತಿ ಸಂಗ್ರಹಣೆ, ಮೇಲ್ವಿಚಾರಣೆ ಮತ್ತು ಪರಿಶೀಲನೆಗಾಗಿ ತಂತ್ರಜ್ಞಾನ ಆಧಾರಿತ ಮಾಹಿತಿ ನಿರ್ವಹಣಾ ವ್ಯವಸ್ಥೆ ಅಳವಡಿಸಲಾಗುವುದು.
  • ರಾಜ್ಯದ ತೆರಿಗೆಯೇತರ ರಾಜಸ್ವ ಸಂಗ್ರಹದ ಸಾಮರ್ಥ್ಯದ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಆಸ್ತಿ ನಗದೀಕರಣದ ಈ ಪ್ರಕ್ರಿಯೆಯನ್ನು ಅವಕಾಶಗಳನ್ನು ಗುರುತಿಸಲು ಹಾಗೂ ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ವಿಧಾನವನ್ನು ರೂಪಿಸಲು ತಜ್ಞರ ಸಮಿತಿ ರಚಿಸಲಾಗುವುದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.