ETV Bharat / state

ವಿಧಾನಮಂಡಲ ಅಧಿವೇಶನ: ಜೈ ಶ್ರೀರಾಮ್​ ಘೋಷಣೆ ಕೂಗಿದ ಬಿಜೆಪಿ ಶಾಸಕರು, ಜೈ ಭೀಮ್​ ಎಂದ ಕಾಂಗ್ರೆಸ್​ ಸದಸ್ಯರು - ಜೈ ಭೀಮ್​

ಇಂದಿನಿಂದ ಆರಂಭಗೊಂಡಿರುವ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಮುಗಿಯುತ್ತಿದ್ದಂತೆ ಬಿಜೆಪಿ ನಾಯಕರು ಜೈ ಶ್ರೀ ರಾಮ್​ ಎಂದು ಕೂಗಿದರೆ ಕಾಂಗ್ರೆಸ್​ ನಾಯಕರು ಜೈ ಭೀಮ್​ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ.

Budget Session
ವಿಧಾನಮಂಡಲ ಅಧಿವೇಶನ
author img

By ETV Bharat Karnataka Team

Published : Feb 12, 2024, 1:08 PM IST

ಜೈ ಶ್ರೀ ರಾಮ್​ ಘೋಷಣೆ ಕೂಗಿದ ಬಿಜೆಪಿ ಶಾಸಕರು, ಜೈ ಭೀಮ್​ ಎಂದ ಕಾಂಗ್ರೆಸ್​ ಸದಸ್ಯರು

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಭಾಷಣ ಮುಗಿಸುತ್ತಿದ್ದಂತೆ ಬಿಜೆಪಿ ಶಾಸಕರು ಜೈ ಶ್ರೀ ರಾಮ್​ ಎಂದು, ಕಾಂಗ್ರೆಸ್​ ಶಾಸಕರು ಜೈ ಭೀಮ್​ ಎಂದು ಘೋಷಣೆ ಕೂಗಿದ ಘಟನೆ ಅಧಿವೇಶನದಲ್ಲಿ ನಡೆದಿದೆ. ಅದಲ್ಲದೆ ಇಂದು ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಸದನ ಆರಂಭಕ್ಕೂ ಮುನ್ನವೇ ಸದನದ ಒಳಗೆ ಕೇಸರಿ ಶಾಲು ಹಾಕಿಕೊಂಡು ಬಂದ ವಿಧಾನಸಭೆ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರು ಜೈ ಶ್ರೀ ರಾಮ್​ ಘೋಷಣೆ ಕೂಗಿದರು.

ಅಧಿವೇಶನದ ಮೊದಲ ದಿನದವಾದ ಇಂದು ರಾಜ್ಯಪಾಲರು ಸದನವನ್ನು ಉದ್ದೇಶಿಸಿ ಹಿಂದಿಯಲ್ಲಿ ಭಾಷಣ ಮಾಡಿದರು. ಭಾಷಣ ಮುಗಿಸಿ ರಾಜ್ಯಪಾಲರು ಜೈ ಹಿಂದ್​, ಜೈ ಕರ್ನಾಟಕ, ಧನ್ಯವಾದ ಎಂದು ಹೇಳುತ್ತಿದ್ದಂತೆ ಬಿಜೆಪಿ ಸದಸ್ಯರು ಜೈ ಶ್ರೀ ರಾಮ್​ ಎಂದು ಘೋಷಣೆ ಕೂಗಿದರು. ಅಷ್ಟರಲ್ಲಿ ರಾಷ್ಟ್ರಗೀತೆ ಮೊಳಗಿತು. ರಾಷ್ಟ್ರಗೀತೆ ಮುಗಿಯುತ್ತಿದ್ದಂತೆ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್​, ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್​. ಕೆ.ಪಾಟೀಲ್​ ಅವರು ಸಭೆಯಿಂದ ನಿರ್ಗಮಿಸಿದರು. ರಾಜ್ಯಪಾಲರು ತೆರಳುವವರೆಗೂ ಬಿಜೆಪಿ ಸದಸ್ಯರು ಜೈ ಶ್ರೀರಾಮ್ ಘೋಷಣೆ ಕೂಗುತ್ತಿದ್ದರು. ಇದಕ್ಕೆ ಪ್ರತಿಯಾಗಿ ಸಚಿವರಾದ ಸಂತೋಷ್ ಲಾಡ್, ಬೈರತಿ ಸುರೇಶ್, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸೇರಿದಂತೆ ಇತರ ಕಾಂಗ್ರೆಸ್ ಶಾಸಕರು 'ಜೈ ಭೀಮ್, ಜೈ ಸಂವಿಧಾನ' ಎಂದು ಘೋಷಣೆ ಕೂಗಿದರು.

ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿಚಾರ ದೊಡ್ಡ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಮತ್ತೆ ಹಾರಿಸಲು ಬಿಜೆಪಿ ನಾಯಕರು ಪಣತೊಟ್ಟಿದ್ದಾರೆ. ಇದರ ಪ್ರತೀಕವೆಂಬಂತೆ ಬಿಜೆಪಿ ಶಾಸಕರು ಅಧಿವೇಶನಕ್ಕೆ ಕೇಸರಿ ಶಾಲು ಹಾಕಿಕೊಂಡು ಬರುವ ಮೂಲಕ ಸರ್ಕಾರಕ್ಕೆ ಸಾಂಕೇತಿಕವಾಗಿ ಟೀಕಿಸಿದ್ದಾರೆ.

ರಾಜ್ಯಪಾಲರನ್ನು ಸ್ವಾಗತಿಸಿದ ಸಿಎಂ: ಇದಕ್ಕೂ ಮುನ್ನ ವಿಧಾನ ಮಂಡಲದ ಜಂಟಿ ಅವೇಶನ ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸಂಪ್ರದಾಯದಂತೆ ಸ್ವಾಗತಿಸಲಾಯಿತು. ರಾಜಭವನದಿಂದ ವಿಶೇಷ ವಾಹನದಲ್ಲಿ ಆಗಮಿಸಿದ ಅವರನ್ನು ಶಿಷ್ಟಾಚಾರದಂತೆ ಶಾಸಕರ ಭವನ ಪ್ರವೇಶಿಸುವ ಗೇಟ್ ಬಳಿ ಅಶ್ವದಳದ ಮೂಲಕ ಬರ ಮಾಡಿಕೊಳ್ಳಲಾಯಿತು.

ನಂತರ ವಿಧಾನಸೌಧ ಮುಂಭಾಗ ಆಗಮಿಸಿದ ರಾಜ್ಯಪಾಲರನ್ನು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೂಗುಚ್ಛ ನೀಡಿ ಬರಮಾಡಿಕೊಂಡರು. ಬಳಿಕ ವಿಧಾನಸಭೆ ಪ್ರಾಂಗಣ ಪ್ರವೇಶಿಸುತ್ತಿದ್ದಂತೆ ಸಂಪ್ರದಾಯದಂತೆ ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತ ಕೋರಲಾಯಿತು. ಬಳಿಕ ಸದನದ ಸದಸ್ಯರೆಲ್ಲರೂ ಎದ್ದು ನಿಂತು ರಾಜ್ಯಪಾಲರಿಗೆ ಸ್ವಾಗತ ಕೋರಿದರು.

ಇದನ್ನೂ ನೋಡಿ: ಕೋಲಾರ: 3 ಸಾವಿರ ದೀಪಗಳಲ್ಲಿ ಬೆಳಗಿದ ಅಂಬೇಡ್ಕರ್-ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.