ETV Bharat / state

ಬೈಕ್​ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್: ಮದುವೆಗೆ ತೆರಳುತ್ತಿದ್ದ ಇಬ್ಬರ ದುರ್ಮರಣ - BUS BIKE ACCIDENT

ಖಾಸಗಿ ಬಸ್ ಡಿಕ್ಕಿ ಹೊಡೆದು ಮದುವೆಗೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನಲ್ಲಿ ನಡೆದಿದೆ.

ಬೈಕ್​ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್, Accident
ಬೈಕ್​ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್ (ETV Bharat)
author img

By ETV Bharat Karnataka Team

Published : Jan 31, 2025, 10:51 AM IST

ದಾವಣಗೆರೆ: ದ್ವಿಚಕ್ರ ವಾಹನದಲ್ಲಿ ಮದುವೆ ಮನೆಗೆ ತೆರಳುತ್ತಿದ್ದ ಇಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಆರನೇ ಮೈಲಿಗ್ಗಲು (ತರಳಬಾಳು ನಗರ) ಗ್ರಾಮದಲ್ಲಿ ತಡರಾತ್ರಿ ನಡೆಯಿತು.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಹದಡಿ ಗ್ರಾಮದ ರಾಜು (38) ಮತ್ತು ರಾಮಪ್ಪ (40) ಮೃತರೆಂದು ಗುರುತಿಸಲಾಗಿದೆ. ಮೃತದೇಹಗಳನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಮನೆಗೆ ನುಗ್ಗಿದ ಬಸ್
ಮನೆಗೆ ನುಗ್ಗಿದ ಬಸ್ (ETV Bharat)

ಹದಡಿ ಗ್ರಾಮದಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ದಾವಣಗೆರೆ ಕಡೆಯಿಂದ ಚನ್ನಗಿರಿ ಕಡೆ ಸಂಚರಿಸುತ್ತಿದ್ದ ಬಸ್ ಡಿಕ್ಕಿಯಾಗಿ, ಬಳಿಕ ಮನೆಗೆ ನುಗ್ಗಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಇಡೀ ಮನೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಹದಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆಗೆ ತೆರಳುತ್ತಿದ್ದಾಗ ದುರಂತ: ರಾಮಪ್ಪ ಹಾಗು ರಾಜು ಆಪ್ತ ಮಿತ್ರರಾಗಿದ್ದು, ತಮ್ಮದೇ ದ್ವಿಚಕ್ರ ವಾಹನದಲ್ಲಿ ಸಂಬಂಧಿಕರ ಮದುವೆಗೆಂದು ದಾವಣಗೆರೆ ಬರುತ್ತಿದ್ದರು. ಈ ವೇಳೆ ಬಸ್ ಯಮನಂತೆ ಎದುರಾಗಿದ್ದು, ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ.

ಇದನ್ನೂ ಓದಿ: ಅಪಘಾತದಲ್ಲಿ ಸಾವನ್ನಪ್ಪಿದ ಮೂವರ ನೇತ್ರದಾನ; 6 ಜನರ ಬದುಕಿಗೆ ಬೆಳಕು, ಸಾರ್ಥಕತೆ ಮೆರೆದ ಕುಟುಂಬ

ಇದನ್ನೂ ಓದಿ: ಮೈಸೂರು: ಬಸ್ - ಟಿಪ್ಪರ್ ಓವರ್​​ಟೇಕ್​ ವೇಳೆ ಅಪಘಾತ: ಕುತ್ತಿಗೆ, ಕೈ ಕಟ್​ ಆಗಿ ಮಹಿಳೆ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.