ETV Bharat / state

ಬೆಳಗಾವಿ: ಕಾರಿನಲ್ಲಿ ಹೋಗುತ್ತಿದ್ದ ಉದ್ಯಮಿ ಮೇಲೆ ಗುಂಡಿನ ದಾಳಿ - FIRING ON BUSINESSMAN

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

FIRING ON BUSINESSMAN
ಗುಂಡಿನ ದಾಳಿಗೊಳಗಾದ ಕಾರು, ಉದ್ಯಮಿ ಪ್ರಪುಲ್ ಬಾಲಕೃಷ್ಣ ಪಾಟೀಲ (ETV Bharat)
author img

By ETV Bharat Karnataka Team

Published : 5 hours ago

ಬೆಳಗಾವಿ: ಕಾರಿನಲ್ಲಿ ಹೋಗುತ್ತಿದ್ದ ಉದ್ಯಮಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ಬೆಳಗಾವಿಯ ಗಣೇಶಪುರದ ಹಿಂದು ನಗರದ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ರಿಯಲ್ ಎಸ್ಟೇಟ್ ಉದ್ಯಮಿ, ಶಾಹುನ ನಗರದ ನಿವಾಸಿ ಪ್ರಪುಲ್ ಬಾಲಕೃಷ್ಣ ಪಾಟೀಲ (30) ಎಂಬವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಕಾರಿನ ಗ್ಲಾಸ್​​ಗೆ ಗುಂಡು ತಗುಲಿದ್ದು, ಅದೃಷ್ಟವಶಾತ್ ಪ್ರಪುಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಗಾಜು ಪ್ರಪುಲ್ ಅವರ ತಲೆ, ಮುಖಕ್ಕೆ ಸಿಡಿದು ಗಾಯವಾಗಿದೆ. ತಕ್ಷಣ ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಉದ್ಯಮಿ ಕಾರಿನ ಮೇಲೆ ಗುಂಡಿನ ದಾಳಿ (ETV Bharat)

ಘಟನಾ ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಎರಡು ಸುತ್ತು ಗುಂಡಿನ ದಾಳಿ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದಾಳಿ ಮಾಡಿದವರು ಯಾರು‌‌? ಯಾವ ಕಾರಣಕ್ಕೆ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದಲೇ ಗೊತ್ತಾಗಬೇಕಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಂಗಳೂರು ಗನ್ ಫೈರಿಂಗ್ ಪ್ರಕರಣ: ರೌಡಿಶೀಟರ್ ಬದ್ರುದ್ದೀನ್ ಅದ್ದು ಅರೆಸ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.