ETV Bharat / state

ಬೆಂಗಳೂರಲ್ಲಿ ಅನುಮತಿ ಪಡೆಯದೆ ಕೊಳವೆ ಬಾವಿ ಕೊರೆದರೆ ಕಾನೂನು ಕ್ರಮ: BWSSB - Borewell in Bengaluru

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೆ ಕೊಳವೆ ಬಾವಿಗಳನ್ನು ಕೊರೆದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ‌ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಎಚ್ಚರಿಸಿದೆ.

bwssb
ಕೊಳವೆಬಾವಿ
author img

By ETV Bharat Karnataka Team

Published : Mar 10, 2024, 2:39 PM IST

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಅನುಮತಿ ಪಡೆದಿರುವ ಜಾಗದಲ್ಲಿ ಮಾತ್ರ ಕೊಳವೆ ಬಾವಿಗಳನ್ನು ಕೊರೆಯಬೇಕು. ಅನುಮತಿ ಪಡೆಯದೇ ಇರುವ ಸ್ಥಳಗಳಲ್ಲಿ ಕೊಳವೆ ಬಾವಿಗಳನ್ನು ಕೊರೆದರೆ, ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ‌ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಎಚ್ಚರಿಕೆ ನೀಡಿದೆ.

ಅಂತರ್ಜಲವನ್ನು ಸಮರ್ಪಕವಾಗಿ ಸದ್ಬಳಕೆ ಮಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡು ಆದೇಶ ಹೊರಡಿಸಲಾಗಿದೆ. ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ಹಾಗೂ ನಿಯಂತ್ರಣ) ಅಧಿನಿಯಮ 2011ರ ಅಡಿಯ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಇನ್ನು ಮುಂದೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯದೇ, ಕೊಳವೆ ಬಾವಿಯನ್ನು ಕೊರೆಸುವ ಮಾಲೀಕರ ವಿರುದ್ಧ ನಿಯಮ ಉಲ್ಲಂಘನೆ ಅಡಿ ದೂರು ದಾಖಲಿಸಿ, ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಆದೇಶ ಮಾರ್ಚ್​​ 15 ರಿಂದ ಜಾರಿಗೆ ಬರಲಿದೆ. ಅಂದಿನಿಂದ ಬೆಂಗಳೂರು ಜಲಮಂಡಳಿ ಜಾಲತಾಣದಲ್ಲಿ ಕೊಳವೆ ಬಾವಿ ಕೊರೆಸಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಅನುಮತಿ ಕೇಳಿದಲ್ಲಿ ಸಾರ್ವಜನಿಕ ಕೊಳವೆ ಬಾವಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಖಾಸಗಿ ಕೊಳವೆಬಾವಿಗಳಿಗೆ ಅಂತರ್ಜಲ ಮಟ್ಟ, ಅವಶ್ಯಕತೆ ಹಾಗೂ ತಜ್ಞರ ವರದಿ ಆಧರಿಸಿ ಸಂಬಂಧಪಟ್ಟವರಿಂದ ಸ್ಥಳ ಪರಿಶೀಲನೆ ನಡೆಸಿದ ಬಳಿಕ ನಿಯಮಾನುಸಾರ ಸೂಕ್ತ ಪ್ರಾಧಿಕಾರದಿಂದ ಅನುಮತಿ ನೀಡಲಾಗುವುದು ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

ಬೆಂಗಳೂರು ಮಹಾನಗರದಲ್ಲಿ ಮಳೆ ನೀರಿನ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ನಗರದಲ್ಲಿನ ಸಾಕಷ್ಟು ಕೊಳವೆಬಾವಿಗಳು ಬತ್ತಿಹೋಗಿವೆ. ಅಂತರ್ಜಲ ನೀರಿನ ಮಟ್ಟ ಕಡಿಮೆಯಾಗಿದೆ. ಬೆಂಗಳೂರು ನಗರದಲ್ಲಿ ವೈಯಕ್ತಿಕ ಅಥವಾ ಇನ್ನಿತರ ಬಳಕೆಗೆ ಕೊಳವೆ ಬಾವಿಗಳನ್ನು ಕೊರೆಯುವ ಮುನ್ನ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011ರ ಅನುಸಾರ ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದಿದ್ದಾರೆ.

ಅವೈಜ್ಞಾನಿಕವಾಗಿ ಕೊಳವೆ ಬಾವಿಗಳನ್ನು ಕೊರೆಯುತ್ತಿರುವುದು ಹಾಗೂ ನಿಯಮಾನುಸಾರ ಕೊಳವೆ ಬಾವಿಗಳನ್ನು ಕೊರೆಯುವ ಮುನ್ನ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆಯದೇ ಇರುವುದರಿಂದ ಬೆಂಗಳೂರು ನಗರದ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂತರ್ಜಲವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದೇ ಬಾವಿ ಆಶ್ರಯಿಸಿದ 7 ಗ್ರಾಮಗಳ ಜನರು: ಯಮಕನಮರಡಿ ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.