ETV Bharat / state

ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸಿದರೆ 5,000 ರೂಪಾಯಿ ದಂಡ: BWSSB ಆದೇಶ - BWSSB Fine

ಕುಡಿಯುವ ನೀರನ್ನು ಇತರ ಕೆಲಸಗಳಿಗೆ ಪೋಲು ಮಾಡಿದ್ದಲ್ಲಿ ಬಿಡಬ್ಲ್ಯೂಎಸ್‌ಎಸ್​ಬಿ 5,000 ರೂಪಾಯಿ ದಂಡ ವಿಧಿಸುವುದಾಗಿ ಆದೇಶದಲ್ಲಿ ಎಚ್ಚರಿಸಿದೆ.

BWSSB
ಬಿಡಬ್ಲ್ಯೂಎಸ್​ಎಸ್​ಬಿ
author img

By ETV Bharat Karnataka Team

Published : Mar 8, 2024, 12:26 PM IST

ಬೆಂಗಳೂರು: ನಗರದಲ್ಲಿ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯೂಎಸ್‌ಎಸ್​ಬಿ) ಆದೇಶ ಹೊರಡಿಸಿದೆ. ಈ ಆದೇಶ ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.

"ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಛತೆ, ಕೈದೋಟ, ಕಟ್ಟಡ ನಿರ್ಮಾಣ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆ, ಸಿನಿಮಾ ಮಂದಿರ ಮತ್ತು ಮಾಲ್​ಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರ ಬಳಕೆ, ರಸ್ತೆ ನಿರ್ಮಾಣ ಮತ್ತು ಸ್ವಚ್ಛತೆಗೆ ಬಳಸದಂತೆ ನೀಷೇಧಿಸಲಾಗಿದೆ" ಎಂದು ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾದ್​ ಮನೋಹರ್ ಆದೇಶದಲ್ಲಿ ತಿಳಿಸಿದ್ದಾರೆ.

"ಈ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಜಲಮಂಡಳಿಯ ಕಾಯ್ದೆ 1964ರ ಕಲಂ 109ರಂತೆ 5,000 ರೂಪಾಯಿಗಳ ದಂಡ ವಿಧಿಸಲಾಗುವುದು. ಉಲ್ಲಂಘನೆ ಮರುಕಳಿಸಿದಲ್ಲಿ ದಂಡದ ಮೊತ್ತದ ಜೊತೆಗೆ ಹೆಚ್ಚುವರಿಯಾಗಿ ಪ್ರತಿದಿನಕ್ಕೆ 500 ರೂಪಾಯಿ ದಂಡ ಹಾಕಲಾಗುವುದು" ಎಂದು ಎಚ್ಚರಿಕೆ ನೀಡಿದ್ದಾರೆ.

"ಸಾರ್ವಜನಿಕರು ಯಾರಾದರೂ ಈ ಆದೇಶವನ್ನು ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ 1916ಗೆ ಕರೆ ಮಾಡಿ ತಿಳಿಸಬೇಕು" ಎಂದು ಮನವಿ ಮಾಡಿದ್ದಾರೆ.

"ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆ ಇದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯಕವಾಗಿದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದೆ. ಮಳೆಯ ಕೊರತೆಯಿಂದ ಅಂತರ್ಜಲ ಕೂಡ ಕುಸಿದಿದೆ. ಹೀಗಾಗಿ ನೀರು ಪೋಲು ಮಾಡುವುದನ್ನು ತಡೆಗಟ್ಟುವುದು ಅವಶ್ಯಕ ಎಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸಬೇಕಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ" ಎಂದು ಡಾ.ವಿ.ರಾಮ್‌ ಪ್ರಸಾತ್ ಮನೋಹರ್ ವಿವರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನೀರಿನ ಅಭಾವ: ಬಿಬಿಎಂಪಿ ಸಹಾಯವಾಣಿಗೆ ನೂರಾರು ಕರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.