ETV Bharat / state

ಚನ್ನಪಟ್ಟಣದಲ್ಲಿ ನಾಳೆ ನಾಮಪತ್ರ ಸಲ್ಲಿಕೆ, ಮಲ್ಲಿಕಾರ್ಜುನ ಖರ್ಗೆಯಿಂದ ಅಭ್ಯರ್ಥಿಗಳ ಪಟ್ಟಿ ಅಂತಿಮ: ಡಿ.ಕೆ.ಶಿವಕುಮಾರ್

ಚನ್ನಪಟ್ಟಣದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮುಜುಗರಕ್ಕೆ ಒಳಗಾಗುವಂತೆ ನಾವು ಮಾಡುವುದಿಲ್ಲ. ಅವರ ಜೊತೆ ನಾನು ಹಾಗೂ ಡಿ.ಕೆ. ಸುರೇಶ್ ಇದ್ದೇವೆ. ಯೋಗೇಶ್ವರ್ ಅವರಿಗೂ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

shivakumar
ಯೋಗೇಶ್ವರ್​, ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : 2 hours ago

ಬೆಂಗಳೂರು: ''ಉಪ ಚುನಾವಣೆಗೆ ಸ್ಪರ್ಧಿಸುವವರ ಪಟ್ಟಿಯನ್ನು ಇಂದೇ ಹೈಕಮಾಂಡ್​ಗೆ ಕಳುಹಿಸಲಾಗುವುದು. ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳನ್ನು ಅಂತಿಮ ಮಾಡುತ್ತಾರೆ'' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್​ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ''ಚನ್ನಪಟ್ಟಣದ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರವನ್ನು ಡಿ.ಕೆ. ಸುರೇಶ್​ಗೆ ಜವಾಬ್ದಾರಿ ವಹಿಸಲಾಗಿತ್ತು. ಅವರು ಈಗಾಗಲೇ ಖರ್ಗೆ ಬಳಿ ಮಾತನಾಡಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಗೆ ನಡೆಯುವ ನಾಮಪತ್ರ ಸಲ್ಲಿಕೆ ವೇಳೆ ಎಲ್ಲರೂ ಭಾಗವಹಿಸಬೇಕು'' ಎಂದು ಮನವಿ ಮಾಡಿದರು.

ಅಭ್ಯರ್ಥಿ ಕೊರತೆಯಿಂದ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತೇ ಎಂದು ಕೇಳಿದಾಗ ''ಕಾಂಗ್ರೆಸ್ ಪಕ್ಷಕ್ಕೆ ಎಂದಿಗೂ ಅಭ್ಯರ್ಥಿಗಳ ಕೊರತೆ ಕಾಣುವುದಿಲ್ಲ. ನಾನು ಇಲ್ಲದಿದ್ದರೂ ಪಕ್ಷ ನಡೆಯುತ್ತದೆ'' ಎಂದು ಸ್ಪಷ್ಟಪಡಿಸಿದರು.

ಎಲ್ಲ ಪಕ್ಷದಲ್ಲಿಯೂ ಈ ವಿದ್ಯಮಾನ ನಡೆಯುತ್ತದೆ: ಡಿ.ಕೆ. ಸುರೇಶ್ ಅವರನ್ನು ಸೋಲಿಸಿದವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೀರಿ ಎಂದು ಕೇಳಿದಾಗ, ''ಇದರ ಬಗ್ಗೆ ನಮ್ಮ ಕಾರ್ಯಕರ್ತರ ಬಳಿ ಚರ್ಚೆ ನಡೆಸಿದ್ದೇವೆ. ಇದು ಎಲ್ಲಾ ಪಕ್ಷದಲ್ಲಿಯೂ ಇದ್ದಿದ್ದೇ. ನಮ್ಮಲ್ಲಿ ಮಾತ್ರ ಇದು ನಡೆದಿಲ್ಲ. ಇದೊಂದು ರಾಜಕೀಯ ವಿದ್ಯಮಾನವಷ್ಟೇ'' ಎಂದು ಹೇಳಿದರು.

''ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಕುಮಾರಸ್ವಾಮಿ ಗೆದ್ದಿದ್ದರು. ನಮ್ಮ ಪಕ್ಷ 16 ಸಾವಿರ ಮತಗಳನ್ನು ಚನ್ನಪಟ್ಟಣದಲ್ಲಿ ಗಳಿಸಿತ್ತು. ಲೋಕಸಭಾ ಚುನಾವಣೆಯಲ್ಲಿ 85 ಸಾವಿರ ಮತಗಳನ್ನು ಪಡೆದಿದ್ದೆವು. ಅನೇಕ ಮಂದಿ ಜನತಾದಳದಿಂದ ಬಂದು ನಮಗೆ ಸಹಾಯ ಮಾಡಿದ್ದರು. ನಂತರ ಸ್ಥಾನ ತೆರವುಗೊಂಡ ಬಳಿಕ ಸುಮಾರು 15ಕ್ಕೂ ಹೆಚ್ಚು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ'' ಎಂದರು.

ಪಕ್ಷ ಕಟ್ಟಿದ ಕಾರ್ಯಕರ್ತರ ಜೊತೆ ನಾವಿದ್ದೇವೆ: ''ನಮ್ಮ ಕಾರ್ಯಕರ್ತರು ಕ್ಷೇತ್ರದಲ್ಲಿ ಪಕ್ಷವನ್ನು ತಳಮಟ್ಟದಿಂದ ಗಟ್ಟಿ ಮಾಡಲು ಶ್ರಮವಹಿಸಿದ್ದರು. ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಮುಜುಗರಕ್ಕೆ ಒಳಗಾಗುವ ಪ್ರಮೇಯವನ್ನು ನಾವು ಉಂಟು ಮಾಡುವುದಿಲ್ಲ. ನಿಮ್ಮ ಜೊತೆ ನಾನು ಹಾಗೂ ಡಿ.ಕೆ. ಸುರೇಶ್ ಇದ್ದೇವೆ. ನಿಮ್ಮನ್ನು ಉತ್ತಮವಾದ ರೀತಿಯಲ್ಲಿ ನಡೆಸಿಕೊಳ್ಳುತ್ತೇವೆ, ಇದನ್ನೇ ಯೋಗೇಶ್ವರ್ ಅವರಿಗೂ ಸೂಚನೆ ಕೊಟ್ಟಿದ್ದೇವೆ. ಅವರೂ ಸಹ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಿಗೆ ಕೆಲಸ ಮಾಡುತ್ತಾರೆ. ಚನ್ನಪಟ್ಟಣಕ್ಕೆ ವಿಶೇಷ ಸ್ಥಾನಮಾನ ನೀಡುತ್ತೇವೆ. ಕಾರ್ಯಕರ್ತರು ಎಲ್ಲಾ ಭಿನ್ನಾಭಿಪ್ರಾಯಗಳನ್ನು ಮರೆತು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ'' ಎಂದು ತಿಳಿಸಿದರು.

ಕ್ಷೇತ್ರ ಬಿಟ್ಟುಕೊಡಲು ಮುಂದಾಗಿದ್ದ ಕುಮಾರಸ್ವಾಮಿ: ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರ ಬಿಟ್ಟುಕೊಡಲು ಕುಮಾರಸ್ವಾಮಿ ಅವರು ಮುಂದಾಗಿದ್ದರು ಎನ್ನುವ ಬಗ್ಗೆ ಕೇಳಿದಾಗ, ''ಸೋಲಿನ ಭೀತಿಯಿಂದ ತಮ್ಮ ಸ್ವಂತ ಕ್ಷೇತ್ರವನ್ನೇ ಬಿಜೆಪಿಗೆ ಬಿಟ್ಟುಕೊಡಲು ಕುಮಾರಸ್ವಾಮಿ ಸಿದ್ಧರಾಗಿದ್ದರು. ಎರಡು ಬಾರಿ ಸಿಎಂ, ಪ್ರಸ್ತುತ ಕೇಂದ್ರ ಸಚಿವರಾಗಿರುವ ಅವರು ಎಷ್ಟು ದುರ್ಬಲರಾಗಿದ್ದಾರೆ ಎಂಬುದು ಇದರಿಂದ ತಿಳಿಯುತ್ತದೆ. ಅವರು ಚನ್ನಪಟ್ಟಣವನ್ನು ಗೆಲ್ಲುತ್ತೇವೆ ಎಂದು ಹೇಳಲು ಸಾಧ್ಯವೇ'' ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ‌ಸೇರ್ಪಡೆ ಆಶ್ಚರ್ಯ ತಂದಿಲ್ಲ: ನಿಖಿಲ್ ಕುಮಾರಸ್ವಾಮಿ

''ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ನಾವು ತೆರಳಬೇಕಾಗಿತ್ತು. ಪಕ್ಷ ಸೇರ್ಪಡೆ ಕಾರ್ಯಕ್ರಮ ತುರ್ತಾಗಿ ನಡೆದ ಕಾರಣಕ್ಕೆ ಮುಖ್ಯಮಂತ್ರಿಗಳು ಅಲ್ಲಿ ಭಾಗವಹಿಸಿದ್ದಾರೆ. ನಾನು ತೆರಳಲಿಲ್ಲ. ಅಲ್ಲದೇ ಬೆಂಗಳೂರು ನಗರದಲ್ಲಿ ಉಂಟಾಗಿರುವ ಮಳೆ ಹಾನಿ ವೀಕ್ಷಣೆಗೆ ಒಂದಷ್ಟು ಕಡೆ ಭೇಟಿ ನೀಡುವ ಕಾರಣಕ್ಕೆ ವಯನಾಡಿಗೆ ತೆರಳುವುದನ್ನು ರದ್ದು ಮಾಡಿದೆ'' ಎಂದು ಹೇಳಿದರು.

ಮಳೆಯಿಂದ ಕಟ್ಟಡ ಕುಸಿತವಾಗಿಲ್ಲ: ''ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಬಾಬುಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತವಾಗಿಲ್ಲ. ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ಈ ಘಟನೆ ನಡೆದಿದೆ. ಈ ಘಟನೆಗೆ ಕಾರಣರಾದ ಮನೆ ಮಾಲೀಕ, ನಿರ್ಮಾಣ ಗುತ್ತಿಗೆದಾರ, ಅಧಿಕಾರಿಗಳು ಸೇರಿದಂತೆ ಎಲ್ಲರ ಮೇಲೂ ಪ್ರಕರಣ ದಾಖಲಿಸಲಾಗುವುದು. ಸಣ್ಣ ಜಾಗದಲ್ಲಿ ಎತ್ತರದ ಕಟ್ಟಡ ಕಟ್ಟಿದ್ದೇ ಇದಕ್ಕೆ ಕಾರಣ'' ಎಂದರು.

ಇದನ್ನೂ ಓದಿ: ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆಗೊಂಡ ಸಿಪಿ ಯೋಗೇಶ್ವರ್; ಸಿಪಿವೈ ಹೇಳಿದ್ದೇನು? ತಿಳಿಯಲು ಇಲ್ಲಿ ಕ್ಲಿಕ್​ ಮಾಡಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.