ETV Bharat / state

ಚನ್ನಪಟ್ಟಣದಲ್ಲಿ ಉಪಚುನಾವಣೆ: ಅಬ್ಬರದ ಪ್ರಚಾರ ನಡೆಸಿದ ಉಭಯ ಪಕ್ಷಗಳ ಅಭ್ಯರ್ಥಿಗಳು - CHANNAPATNA BYPOLL

ಚನ್ನಪಟ್ಟಣದಲ್ಲಿ ಉಪಚುನಾವಣೆಯ ಪ್ರಚಾರ ಜೋರಾಗಿದೆ. ಕಾಂಗ್ರೆಸ್​ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಹಾಗೂ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಂದಿಗೆ ವಿವಿಧೆಡೆ ಚುನಾವಣೆ ನಡೆಸಿ ಮತದಾರರ ಗಮನ ಸೆಳೆದರು.

CHANNAPATNA BYPOLL
ಉಭಯ ಪಕ್ಷಗಳ ಅಭ್ಯರ್ಥಿಗಳು (ETV Bharat)
author img

By ETV Bharat Karnataka Team

Published : Oct 29, 2024, 6:06 PM IST

Updated : Oct 29, 2024, 7:48 PM IST

ರಾಮನಗರ: ಚನ್ನಪಟ್ಟಣದಲ್ಲಿ ಉಪಚುನಾವಣೆಯ ಪ್ರಚಾರ ಜೋರಾಗಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದು, ಮತದಾರರ ಗಮನ ಸೆಳೆಯುತ್ತಿದ್ದಾರೆ.

ನಾಮಪತ್ರ ಸಲ್ಲಿಸಿದ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್​ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು ಮಾಜಿ ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ಮಾಕಳಿ ಗ್ರಾ.ಪಂ ವ್ಯಾಪ್ತಿ ಸೇರಿ ಹಲವೆಡೆ ಮತಯಾಚನೆ ನಡೆಸಿದರೆ, ಎನ್​ಡಿಎ ಅಭ್ಯರ್ಥಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕ್ಷೇತ್ರದ ದೂಡ್ಡಮಳೂರು, ಕೋಟೆ ಮಾರನಹಳ್ಳಿ, ಬೈರಾಪಟ್ಟಣ, ದೇವರಹಳ್ಳಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಈ ವೇಳೆ ಹೋದಲ್ಲೆಲ್ಲ ಪಟಾಕಿ ಸಿಡಿಸಿ, ಬೃಹತ್ ಹೂವಿನ ಹಾರ ಹಾಕಿ ಗ್ರಾಮಸ್ಥರು ಉಭಯ ನಾಯಕರನ್ನು ಸ್ವಾಗತಿಸಿದ್ದು ಸಾಮಾನ್ಯವಾಗಿತ್ತು.

ಪ್ರಚಾರ ವೇಳೆ ಮಾತನಾಡಿದ ಮಾಜಿ ಸಂಸದ ಡಿ.ಕೆ.ಸುರೇಶ್, "ಚನ್ನಪಟ್ಟಣದಲ್ಲಿ ನಮಗೆ ಹುರುಪು ಬಂದಿದೆ. ಯೋಗೇಶ್ವರ್ ಕಾಂಗ್ರೆಸ್​ಗೆ ಬಂದಿದ್ದು ಅನಿರೀಕ್ಷಿತ. ಇವತ್ತು 6 ಜನ ಬಿಜೆಪಿ ನಗರಸಭೆ ಸದಸ್ಯರು ನಮ್ಮ ಜೊತೆ ಬಂದಿದ್ದಾರೆ. ವಿವಿಧ ಮೋರ್ಚಾ ಪದಾಧಿಕಾರಿಗಳು ಸಹ ಪಕ್ಷಕ್ಕೆ ಬಂದಿದ್ದಾರೆ. ಈ ಬಾರಿ ಯೋಗೇಶ್ವರ್ ಗೆಲುವು ನಿಶ್ಚಿತ" ಎಂದು ಭವಿಷ್ಯ ನುಡಿದರು.

"ಚನ್ನಪಟ್ಟಣ ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಈ ಕೋಟೆಗೆ ಮರಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಬಂದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಇದಲ್ಲದೆ ಇತಿಹಾಸದಲ್ಲೇ ಪ್ರಥಮ ಬಾರಿಗೆ 27ಕ್ಕೂ ಹೆಚ್ಚು ನಗರಸಭೆ ಸದಸ್ಯರು ಕಾಂಗ್ರೆಸ್ ‌ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರುವವರಿಗೆ ನಾವು ಸ್ವಾಗತಿಸುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕೆಲವೊಂದು ಆಸೆ ಇರುತ್ತವೆ, ಅದನ್ನು ಸರಿಪಡಿಸಿದ್ದೇವೆ. ಚುನಾವಣೆಯಲ್ಲಿ ಒಗ್ಗಟ್ಟಾಗಿ ದುಡಿಯುತ್ತೇವೆ" ಎಂದರು.

ಯೋಗೇಶ್ವರ್ ವಿಶ್ವಾಸ: "ಜನ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಎರಡು ಬಾರಿ ಸೋತಿದ್ದು, ಈ ಬಾರಿ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ. ನನ್ನ ಕೆಲಸಗಳು ಗೆಲುವಿಗೆ ಅವಕಾಶ ಮಾಡಿಕೊಡುತ್ತವೆ. ಕ್ಷೇತ್ರದ ಅಭಿವೃದ್ಧಿಗಾಗಿ ಜನ ಬೆಂಬಲ ನೀಡುತ್ತಾರೆ" ಎಂದು ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

ದೂಡ್ಡಮಳೂರು, ಕೋಟೆ ಮಾರನಹಳ್ಳಿ, ಬೈರಾಪಟ್ಟಣ, ದೇವರಹಳ್ಳಿ ಸೇರಿದಂತೆ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದ ಎನ್​ಡಿಎ ಅಭ್ಯರ್ಥಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, "ಒಬ್ಬ ಯುವಕನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ" ಎಂದು ಮತದಾರರಲ್ಲಿ ಮನವಿ ಮಾಡಿದರು.

ಅದಕ್ಕೂ ಮುನ್ನ ದೊಡ್ಡಮಳೂರು ಗ್ರಾಮದ ಶ್ರೀ ಅಪ್ರಮೇಯ ಸ್ವಾಮಿ, ಬೈರಾಪಟ್ಟಣ ಮಾರಮ್ಮ, ಶ್ರೀ ಆಂಜನೇಯ ಸ್ವಾಮಿಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಯಾ ಗ್ರಾಮದಲ್ಲಿ ಮತಯಾಚಿಸಿದರು. ಪ್ರಚಾರದ ವೇಳೆ ಪ್ರತಿ ಗ್ರಾಮದಲ್ಲೂ ಪಟಾಕಿ ಸಿಡಿಸಿ, ಬೃಹತ್ ಹೂವಿನ ಹಾರ ಹಾಕಿ ಗ್ರಾಮಸ್ಥರು ಸ್ವಾಗತ ಕೋರಿದರು.

"ಮೂರನೇ ದಿನ ಪ್ರಚಾರ ಆರಂಭಿಸಿದ್ದೇವೆ. ಈ ಚುನಾವಣೆ ನನ್ನ ಪಾಲಿಗೆ ಅನಿರೀಕ್ಷಿತ. ಕುಮಾರಸ್ವಾಮಿ ಅವರನ್ನು ಎರಡು ಬಾರಿ ಈ ಕ್ಷೇತ್ರ ಜನರು ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಬಳಿಕ ಕಳೆದ ಲೋಕಸಭಾ ಚುನಾವಣೆ ವೇಳೆ ಒತ್ತಡಕ್ಕೆ ಮಣಿದು ಮಂಡ್ಯದಲ್ಲಿ ಸ್ಪರ್ಧಿಸಿ ಕೇಂದ್ರ ಸಚಿವರೂ ಆದರು. ನಾನು ಅತೀ ಚಿಕ್ಕ ವಯಸ್ಸಿನಲ್ಲೇ ಎರಡು ಚುನಾವಣೆ ಎದುರಿಸಿದೆ. ಆಯಾ ಕ್ಷೇತ್ರದ ಜನರ ಅಭಿಪ್ರಾಯವನ್ನು ಗೌರವಿಸುವೆ. ಮಂಡ್ಯದ ಜನ ಐದೂವರೆ ಲಕ್ಷ ಮತ ನೀಡಿದರೆ, ರಾಮನಗರದಲ್ಲಿ 76 ಸಾವಿರ ಮತಗಳು ಬಂದಿವೆ. ಕುತಂತ್ರದಿಂದ ಅಲ್ಲಿ ಕಾಂಗ್ರೆಸ್ ಗೆದ್ದಿತು. ಹಾಗಾಗಿ ನಾವು‌ ಮತ್ತು ಬಿಜೆಪಿ ಇಂದು ಒಂದಾಗಿ ಕೆಲಸ ಮಾಡ್ತಿದ್ದೇವೆ. ಮಾಜಿ ಸಿಎಂ ಬಿಎಸ್​ವೈ ಅವರು ಎನ್​ಡಿಎ ಅಭ್ಯರ್ಥಿ ನನ್ನ ಹೆಸರು ಘೋಷಣೆ ಮಾಡಿದ್ದಾರೆ. ಹಾಗಾಗಿ ಸೇವೆ ಸಲ್ಲಿಸಲು ನನಗೂ ಒಂದು ಅವಕಾಶ ಮಾಡಿಕೊಡಿ" ಎಂದು ನಿಖಿಲ್ ಕುಮಾರಸ್ವಾಮಿ ಮತದಾರರಲ್ಲಿ ಮನವಿ ಮಾಡಿದರು.

ಚನ್ನಪಟ್ಟಣ ಉಪಚುನಾವಣೆ ಪ್ರಚಾರ ಭರಾಟೆ (ETV Bharat)

ಕುಮಾರಸ್ವಾಮಿ ವಾಗ್ದಾಳಿ: ಚನ್ನಪಟ್ಟಣ ಉಪ ಚುನಾವಣೆಗೆ ಕುಮಾರಸ್ವಾಮಿ ಹಣ ತಂದು ಸುರಿಯುತ್ತಿದ್ದಾರೆಂದು ಆರೋಪ ಮಾಡಿರುವ ಸಚಿವ ಬೈರತಿ ಸುರೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, "ವಾಲ್ಮೀಕಿ ನಿಗಮದಲ್ಲಿದ್ದ ಪರಿಶಿಷ್ಟರ ಹಣವನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದು ಯಾರು" ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣ ಕ್ಷೇತ್ರದ ಸಿದ್ಧಯ್ಯಗೌಡ ದೊಡ್ಡಿ ಗ್ರಾಮದಲ್ಲಿ ಪುತ್ರನ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, "ಉಕ್ಕು ಮಂತ್ರಿಯಾಗಿ ನಾನು ದುಡ್ಡು ಪ್ರಿಂಟ್ ಮಾಡ್ತೀನಾ" ಎಂದು ಖಾರವಾಗಿ ಪ್ರಶ್ನಿಸಿದರು.

"ಕಳೆದ ಲೋಕಸಭೆ ಚುನಾವಣೆ ವೇಳೆ ವಾಲ್ಮಿಕಿ ನಿಗಮದಲ್ಲಿ ₹82 ಕೋಟಿ ಲೂಟಿ ಮಾಡಿದ್ದಾರೆ‌. ಅದೇ ಹಣದಲ್ಲಿ ಬಳ್ಳಾರಿ ಲೋಕಸಭೆ ಚುನಾವಣೆ ಮಾಡಿದ್ದಾರೆ. ತೆಲಂಗಾಣ ಚುನಾವಣೆಗೆ ಎಷ್ಟು ಹಣ ಖರ್ಚು ಮಾಡಿದ್ದಾರೆ ಎನ್ನುವುದು ಕೂಡ ಗೊತ್ತಿದೆ. ಯಾವ ನೈತಿಕತೆ ಇಟ್ಟುಕೊಂಡು ಹಣದ ಬಗ್ಗೆ ಮಾತನಾಡುತ್ತಾರೆ‌?. ಅಪಪ್ರಚಾರ ಮಾಡೋದು ಕಾಂಗ್ರೆಸ್‌ನವರ ಚಾಳಿ" ಎಂದು ತರಾಟೆಗೆ ತೆಗೆದುಕೊಂಡರು. ಇದೇ ವೇಳೆ ಪುತ್ರನ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಚನ್ನಪಟ್ಟಣ ಉಪ ಚುನಾವಣೆ: 38 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

Last Updated : Oct 29, 2024, 7:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.