ETV Bharat / state

ಮುಖ್ಯಮಂತ್ರಿಗಳ ಪಾಪದ ಕೊಡ ತುಂಬಿದೆ: ಬಿ.ವೈ ವಿಜಯೇಂದ್ರ - BY Vijayendra

ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಮುಖ್ಯಮಂತ್ರಿಗಳ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಬಿ.ವೈ ವಿಜಯೇಂದ್ರ
ಬಿ.ವೈ ವಿಜಯೇಂದ್ರ (ETV Bharat)
author img

By ETV Bharat Karnataka Team

Published : Jul 20, 2024, 5:01 PM IST

ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿನ ಹಗರಣದ ಬಗ್ಗೆ ಪ್ರಶ್ನೆ ಮಾಡಿದರೆ, ಬಿಜೆಪಿ ಅವಧಿಯ ಹಗರಣಗಳನ್ನು ತನಿಖೆ ಮಾಡುವುದಾಗಿ ಸಿದ್ದರಾಮಯ್ಯ ಹೇಳುತ್ತಾರೆ. ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಮುಖ್ಯಮಂತ್ರಿಗಳ ಪಾಪದ ಕೊಡ ತುಂಬಿದೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಸಂಡೂರಿನಲ್ಲಿ ನಡೆದ ವಿಶೇಷ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, 'ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಚುನಾವಣೆಯಲ್ಲಿ ಹೆಂಡ ಖರೀದಿಗೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯವೇ ಹೇಳಿದೆ. ಆರಂಭದಲ್ಲಿ ಹಗರಣಕ್ಕೂ ಸರ್ಕಾರಕ್ಕೂ ಸಂಬಂಧವೇ ಇಲ್ಲ ಎಂದರು. ಆದರೆ, ವಿಧಾನಮಂಡಲದಲ್ಲಿ ನಿಲುವಳಿ ಸೂಚನೆ ಮಂಡಿಸಿದಾಗ ಹಗರಣ ಆಗಿದೆ ಎಂದು ಒಪ್ಪಿಕೊಂಡರು. ಅಧಿಕಾರಿಗಳು ಹಗರಣ ಮಾಡಿದ್ದಾರೆ ಎಂದರು. ಅಧಿಕಾರಿಗಳೇ ಮಾಡಿದ್ದರೆ, ಒಂದೋ ಮುಖ್ಯಮಂತ್ರಿ ಒಪ್ಪಿಗೆ ಕೊಟ್ಟಿರಬೇಕು, ಇಲ್ಲವೇ ಅವರ ಬೇಜವಾಬ್ದಾರಿತನದಿಂದ ಹಗರಣ ಆಗಿರಬೇಕು.

ನಿಮ್ಮ ಪಾಪದಕೊಡ ತುಂಬಿದೆ: ಏನೇ ಆಗಿರಲಿ, ಮುಖ್ಯಮಂತ್ರಿ ಸಿದ್ದರಾಯ್ಯ ರಾಜೀನಾಮೆ ನೀಡಲೇಬೇಕು. ಇದರಿಂದ ತಪ್ಪಿಸಿಕೊಳ್ಳಲಾಗದು' ಎಂದು ವಾಗ್ದಾಳಿ ನಡೆಸಿದರು. 'ಇಷ್ಟು ದೊಡ್ಡ ಹಗರಣದಲ್ಲಿ ಸರ್ಕಾರವೇ ಭಾಗಿಯಾಗಿದ್ದರೂ, ಬಿಜೆಪಿ ಸರ್ಕಾರದ ಹಿಂದಿನ ಹಗರಣ ತನಿಖೆ ಮಾಡುತ್ತೇವೆ ಎಂದು ಧಮ್ಕಿ ಹಾಕುತ್ತಿದ್ದೀರಿ. ಮುಖ್ಯಮಂತ್ರಿಗಳೇ ನಿಮ್ಮ ಪಾಪದ ಕೊಡ ತುಂಬಿದೆ. ರಾಜ್ಯದ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗದವರು ವಿಶ್ವಾಸವಿಟ್ಟು ನಿಮಗೆ 136 ಸ್ಥಾನ ನೀಡಿದರು. ಅವರಿಗೆ ಅನ್ಯಾಯ ಮಾಡಿದ್ದೀರಿ. ಕಳೆದ 14 ತಿಂಗಳಲ್ಲಿ ಹಲವು ಹಗರಣ ನಡೆದಿದೆ.

ಮೈಸೂರಿನ ಮುಡಾ ಹಗರಣ ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದೀರಿ ' ಎಂದು ಅವರು ಆರೋಪಿಸಿದರು. 'ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗಿದೆ. ಆರೋಗ್ಯ ಸಚಿವ ಎಸಿ ಕೊಠಡಿಯಲ್ಲಿ ಕುಳಿತು ಡೆಂಗ್ಯೂ ಪ್ರಕರಣ ಕಡಿಮೆ ಮಾಡುವುದಾಗಿ ಹೇಳುತ್ತಿದ್ದಾರೆ. ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ಬೆಳೆ ನಾಶವಾಗಿದೆ. ಪರಿಶಿಷ್ಟ ಜಾತಿ/ ಪಂಗಡಗಳ ನಿಧಿಯ 26 ಸಾವಿರ ಕೋಟಿ ಹಣ ಗ್ಯಾರಂಟಿಗೆ ವರ್ಗಾವಣೆಯಾಗಿದೆ. ಆ ಜನರಿಗೆ ಅನ್ಯಾಯವಾಗಿದೆ.

ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳಲು ಸಿದ್ದರಾಮಯ್ಯ ನೈತಿಕತೆ ಕಳೆದುಕೊಂಡಿದ್ದಾರೆ. ಪರಿಶಿಷ್ಟರ ಹಣ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರಬಾರದು' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ವಿರುದ್ಧ ವಾಗ್ದಾಳಿ: 'ಮಾಜಿ ಸಚಿವ ಬಿ.ನಾಗೇಂದ್ರ ಮನೆ ಮೇಲೆ ಇಡಿ ದಾಳಿಯಾದರೆ ಐವರು ಸಚಿವರು ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡಿದರು. ಇಡಿ ಬಿಜೆಪಿ ಕೈಗೊಂಬೆ ಎಂದರು. ಮುಖ್ಯಮಂತ್ರಿ ಹೆಸರು ಹೇಳಲು ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದರು. ಅದನ್ನು ಮುಖ್ಯಮಂತ್ರಿಯೂ ವಿಧಾನಸಭೆಯಲ್ಲಿ ಉಲ್ಲೇಖಿಸುತ್ತಾರೆ. ಹಗರಣದ ವಿಚಾರವಾಗಿ ಸದನದಲ್ಲಿ ಮುಖ್ಯಮಂತ್ರಿಯನ್ನು ನಾವು ಪ್ರಶ್ನೆ ಮಾಡುತ್ತಿದ್ದರೆ ಅವರು ತಡವರಿಸಿದರು. ಅವರ ಪರವಾಗಿ ಯಾವ ಶಾಸಕರೂ ಬೆಂಬಲವಾಗಿ ನಿಲ್ಲಲಿಲ್ಲ. ಆಡಳಿತ ಪಕ್ಷದ ಶಾಸಕರೇ ಸಿದ್ದರಾಮಯ್ಯರ ಆತಂಕ ನೋಡಿ ಗಲಿಬಿಲಿಯಾದರು' ಎಂದು ವಿಜಯೇಂದ್ರ ಗೇಲಿ ಮಾಡಿದರು.

'ರಾಜ್ಯದಲ್ಲಿ 14 ತಿಂಗಳಲ್ಲಿ ಭಾರಿ ಭ್ರಷ್ಟಾಚಾರದ ಆಗಿದೆ. ಬಿಜೆಪಿಯವರು ಸುಮ್ಮನೆ ಕೂರುವುದಿಲ್ಲ ಎಂದು ಮುಖ್ಯಮಂತ್ರಿಗೆ ಮನವರಿಕೆಯಾಗಿದೆ. ಹೀಗಾಗಿ ಆತಂಕದಲ್ಲಿದ್ದಾರೆ. ರಾಜ್ಯದಲ್ಲಿ ಇರುವುದು ಜನವಿರೋಧಿ, ಪರಿಶಿಷ್ಟಜಾತಿ, ಪಂಗಡಗಳ ವಿರೋಧಿ ಸರ್ಕಾರ. ಹಿಂದುಳಿದ ವರ್ಗಗಳ ವಿರೋಧಿ ಸರ್ಕಾರ. ಇದು ರಾಜ್ಯಕ್ಕೆ ಅಂಟಿದ ಶಾಪ. ಬಡವರು, ರೈತರು ಕಣ್ಣೀರು ಹಾಕುತ್ತಿದ್ದಾರೆ. ಭಗವಂತ ನಿಮಗೆ ಒಳ್ಳೆಯದು ಮಾಡುವುದಿಲ್ಲ. ನೀವು ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ನೀವು ರಾಜೀನಾಮೆ ನೀಡುವ ದಿನ ಹತ್ತಿರ ಬಂದಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾರೇ ಅಭ್ಯರ್ಥಿಯಾದರೂ ಕೆಲಸ ಮಾಡಿ: ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ, ಕಾರ್ಯಕರ್ತರೆಲ್ಲರೂ ಒಮ್ಮನಸಿನಿಂದ ದುಡಿಯಬೇಕು. ಮೋದಿಯೇ ಅಭ್ಯರ್ಥಿಯೆಂದು ಭಾವಿಸಿ ದುಡಿಯಬೇಕು ಎಂದು ಮನವಿ ಮಾಡಿದರು. ಜತೆಗೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಮೈಸೂರು: ಆರ್​ಟಿಐ ಕಾರ್ಯಕರ್ತರ ವಿರುದ್ಧ ದೂರು ಸಲ್ಲಿಸಿದ ಕಾಂಗ್ರೆಸ್ ಮುಖಂಡರು - Complaint against RTI activists

ETV Bharat Logo

Copyright © 2024 Ushodaya Enterprises Pvt. Ltd., All Rights Reserved.