ಬೆಂಗಳೂರು: ಗಣೇಶ ನಿಮಜ್ಜನ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಘರ್ಷಣೆ ಉಂಟಾಗಿ ಆತಂಕದ ವಾತಾವರಣ ಸೃಷ್ಟಿಯಾಗಿರುವ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಘಟನಾ ಸ್ಥಳಕ್ಕೆ ಇಂದು ಸಂಜೆ ರಾಜ್ಯ ಬಿಜೆಪಿ ನಾಯಕರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸಂಜೆ 4.30ಕ್ಕೆ ನಾಗಮಂಗಲಕ್ಕೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ.
ಘಟನೆಯನ್ನು ಖಂಡಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, "ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಶಾಂತಿ ಕದಡುತ್ತಿದೆ. ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು. ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ" ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ವೇಳೆ ಕಲ್ಲುತೂರಾಟ ನಡೆಸಿರುವ ಹಿಂದೂ ವಿರೋಧಿ ಮತಾಂದ ಕಿಡಿಗೇಡಿಗಳ ಅಟ್ಟಹಾಸದಿಂದ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು
— Vijayendra Yediyurappa (@BYVijayendra) September 12, 2024
ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ.
ಈ ಹಿಂದಿನ ವರ್ಷವೂ ಪುಂಡರು ಇದೇ ರೀತಿ ವರ್ತಿಸಿದ್ದ ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು… pic.twitter.com/nOO0YryO4I
"ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ. ಅಂದರೆ ರಾಜ್ಯದಲ್ಲಿ ಇಂತಹ ಪುಂಡರಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ. ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
🪨Stones pelted
— R. Ashoka (@RAshokaBJP) September 12, 2024
⚔️Swords brandished
💣Crude bombs hurled
At Gangesh Visarjan Procession
Are we living in Karnataka or Taliban?
Emboldened by the appeasement politics of @INCKarnataka Govt, a violent muslim mob brutally attacked the Ganesh Visarjan Procession Nagamangala last… pic.twitter.com/ooGP3tfNjb
"ರಾಜ್ಯ ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ. ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನು ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿ ಟಿ ರವಿ, "ನಾಗಮಂಗಲ ಕೋಮುಗಲಭೆ ಒಂದು ಸಮುದಾಯದ ಪುಂಡರ ಉದ್ದೇಶಪೂರ್ವಕ ದಾಂಧಲೆ. ಪೆಟ್ರೋಲ್ ಬಾಂಬ್ ಎಸೆದು ಕೋಮುಗಲಭೆಗೆ ಪ್ರಚೋದನೆ ನೀಡಿದ ಗಲಭೆಕೋರರನ್ನು ಬಂಧಿಸುವುದನ್ನು ಬಿಟ್ಟು ಸಮಿತಿಯ ಸದಸ್ಯರನ್ನು ಬಂಧಿಸಿದ ಪೋಲೀಸರ ಕೃತ್ಯ ಅಕ್ಷಮ್ಯ. ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು" ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ.
— R. Ashoka (@RAshokaBJP) September 12, 2024
ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ… pic.twitter.com/Dlub6borha
ಇಂದು ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರ ಸಭೆ ನಡೆಯುತ್ತಿದ್ದು ಮಧ್ಯಾಹ್ನಕ್ಕೆ ಸಭೆ ಮುಗಿಸಿ ಸಂಜೆ ವೇಳೆಗೆ ಬಿವೈ ವಿಜಯೇಂದ್ರ, ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿ ಪ್ರಮುಖ ನಾಯಕರು ನಾಗಮಂಗಲದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ.
ಇದನ್ನೂ ಓದಿ: ನಾಗಮಂಗಲ ಗಣೇಶ ಮೆರವಣಿಗೆ ವೇಳೆ ಗಲಾಟೆ: 52 ಜನರ ಬಂಧನ, ಪರಿಸ್ಥಿತಿ ಹತೋಟಿಗೆ- ಸಚಿವ ಪರಮೇಶ್ವರ್ - Nagamangala Clash