ಬಳ್ಳಾರಿ: ಕಾಂಗ್ರೆಸ್ನ ಈ.ತುಕಾರಾಂ ರಾಜೀನಾಮೆಯಿಂದ ತೆರವಾದ ಸಂಡೂರು ವಿಧಾಸನಭಾ ಕ್ಷೇತ್ರದ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ಎನ್‌ಡಿಎ ಮೈತ್ರಿ ಮತ್ತು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿವೆ.
ಕಾಂಗ್ರೆಸ್ ಭದ್ರಕೋಟೆಯಾಗಿರುವ ಸಂಡೂರಲ್ಲಿ ಈ ಬಾರಿ ಕಮಲ ಅರಳಿಸಲು ಬಿಜೆಪಿ ನಾಯಕರು ರಣತಂತ್ರ ಹೆಣೆದಿದ್ದಾರೆ. ಕ್ಷೇತ್ರದಲ್ಲೇ ವಾಸ್ತವ್ಯ ಹೂಡಲು ಸಂಡೂರಲ್ಲಿ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ತಾತ್ಕಾಲಿಕವಾಗಿ ಮನೆ ಮಾಡಿದ್ದಾರೆ. ಈ ನೂತನ ಮನೆಗೆ ಇಂದು ಗೃಹ ಪ್ರವೇಶ ಕೂಡ ಮಾಡಿದ್ದಾರೆ.
ಪತ್ನಿ ಅರುಣಾಲಕ್ಷ್ಮೀ, ಸಹೋದರ ಸೋಮಶೇಖರ್ ರೆಡ್ಡಿ ಸೇರಿದಂತೆ ಪಕ್ಷದ ಬೆಂಬಲಿಗರ ಜೊತೆ ಸೇರಿ ನೂತನ ಮನೆಯಲ್ಲಿ ರೆಡ್ಡಿ ವಿಶೇಷ ಪೂಜೆ ಮಾಡಿಸಿದರು. ಈ ಮೂಲಕ ಕ್ಷೇತ್ರದಲ್ಲೇ ವಾಸ್ತವ್ಯ ಹೂಡಿ ಭರ್ಜರಿ ಪ್ರಚಾರ ನಡೆಸಲು ಮುಂದಾಗಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಯಾರಿಗೆ ಅನ್ನೋದು ಇನ್ನೂ ನಿರ್ಧಾರವಾಗಿಲ್ಲ. ಹಾಗೆಯೇ ಕಾಂಗ್ರೆಸ್ ಕೂಡಾ ಅಭ್ಯರ್ಥಿಯನ್ನು ಈವರೆಗೆ ಘೋಷಿಸಿಲ್ಲ. ಆದರೂ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಈ ಬಾರಿ ರೆಡ್ಡಿ ಸಹೋದರರು ಒಂದಾಗಿ ಪ್ರಚಾರದಲ್ಲಿ ಭಾಗಿಯಾಗುವುದರಿಂದ ಚುನಾವಣಾ ಕಣ ರಂಗೇರಲಿದೆ. ಈ ಮೂಲಕ ಕಾಂಗ್ರೆಸ್ಗೆ ಠಕ್ಕರ್ ನೀಡಲು ಬಿಜೆಪಿ ಮುಂದಾಗಿದೆ.
ಇದನ್ನೂ ಓದಿ: ಉಪಚುನಾವಣೆ: ಎನ್‌ಡಿಎ ನಾಯಕರಿಗೆ ಸವಾಲಾದ ಅಭ್ಯರ್ಥಿಗಳ ಆಯ್ಕೆ, ಹೇಗಿದೆ ಪೈಪೋಟಿ?