ETV Bharat / state

ಸಿ ಟಿ ರವಿ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ‌: ಹೆಚ್ಚು ವ್ಯಾಖ್ಯಾನ ಸರಿಯಲ್ಲ- ಡಾ. ಜಿ ಪರಮೇಶ್ವರ್ - C T RAVI CASE

ಸಿ ಟಿ ರವಿ ಆ ರೀತಿ ಹೇಳಿಲ್ಲ ಅಂತಾರೆ. ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳುತ್ತಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ತನಿಖೆ ಆಗಲೆಂದು ಸಿಐಡಿಗೆ ಒಪ್ಪಿಸಲಾಗಿದೆ‌ ಎಂದು ಪರಮೇಶ್ವರ್ ಹೇಳಿದರು.

PARAMESHWAR REACTS ON C T RAVI CASE
ಗೃಹ ಸಚಿವ ಜಿ.ಪರಮೇಶ್ವರ್ (ETV Bharat)
author img

By ETV Bharat Karnataka Team

Published : 14 hours ago

ಹುಬ್ಬಳ್ಳಿ: ಸಿ ಟಿ ರವಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ‌. ಈ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್​ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿ ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಸ್ಪೀಕರ್ ಅವರು ತಮ್ಮ ಕೆಲಸ ತಾವು ಮಾಡುತ್ತಿದ್ದಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನು ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ, ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ ಎಂದರು.

ಗೃಹ ಸಚಿವ ಜಿ. ಪರಮೇಶ್ವರ್ (ETV Bharat)

ಸಿ ಟಿ ರವಿ ಅವರು ಲಕ್ಷ್ಮಿ ಹೆಬ್ಬಾಳ್ಕರ್​ಗೆ ಆ ರೀತಿ ಹೇಳಿಲ್ಲ ಅಂತಾರೆ. ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ತನಿಖೆ ಆಗಲೆಂದು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದರು.

ಸಿ ಟಿ ರವಿ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಪ್ರಕರಣ ವಿಳಂಬ ವಿಚಾರವಾಗಿ ಉತ್ತರಿಸಿದ ಅವರು, ಕೆಲವೊಂದು‌ ಕಾರಣಕ್ಕೆ ವಿಳಂಬವಾಗಿರಬಹುದು ಎಂದರು.‌

ಗೃಹ ಇಲಾಖೆಯಲ್ಲಿ ಹಸ್ತಕ್ಷೇಪ ಆರೋಪ ವಿಚಾರ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದ್ರೂ ಅದನ್ನು ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡುತ್ತಾರೆ ಅಂತಾ ನಾವು ಇಲಾಖೆ ನಡೆಸೋಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಜಿ ಪರಮೇಶ್ವರ್​ ಹೇಳಿದ್ರು.

ಜಿ. ಪರಮೇಶ್ವರ್​ ಅಸಮರ್ಥ ಗೃಹ ಸಚಿವ ಎಂಬ ಜೋಶಿಯವರ ಲೇವಡಿ ವಿಚಾರವಾಗಿ ತಿರುಗೇಟು ನೀಡಿ, ಪ್ರಲ್ಹಾದ್ ಜೋಶಿಯವರು ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ಳುತ್ತಾರಾ? ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಹಾಗಾಗಿ ಅವರು ಹಾಗೆ ಹೇಳಿದ್ದಾರೆಂದರು‌.

ಹಳೇ ಹುಬ್ಬಳ್ಳಿ ಪೊಲೀಸ್ ಇನ್ಸ್​ಪೆಕ್ಟರ್​ ಸುರೇಶ ಯಳ್ಳೂರ ಮೇಲೆ ಲೈಂಗಿಕ ಕಿರುಕುಳ ಆರೋಪ ವಿಚಾರವಾಗಿ, ಈ ಬಗ್ಗೆ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಮಾಹಿತಿ ಪಡೆದು ಪೊಲೀಸ್ ಇನ್ಸ್​ಪೆಕ್ಟರ್ ತಪ್ಪು ಎಸಗಿದ್ದರೆ, ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಬಗ್ಗೆ ರಿವ್ಯೂವ್ ಮಾಡುತ್ತೇನೆ. ಅದರಲ್ಲಿ ತಪ್ಪುಗಳು ಕಂಡುಬಂದಲ್ಲಿ ಸರಿ ಮಾಡುವೆ ಎಂದು ತಿಳಿಸಿದರು.

ಇದನ್ನೂ ಓದಿ: ನನಗೆ ಏನೂ ಆಗಿಲ್ಲ ಅನ್ನೋಕೆ ಹೆಬ್ಬಾಳ್ಕರ್ ಡಾಕ್ಟರ್ ಅಲ್ಲ: ಸಿಟಿ ರವಿ - CT RAVI QUESTION ON HEBBALKAR

ETV Bharat Logo

Copyright © 2024 Ushodaya Enterprises Pvt. Ltd., All Rights Reserved.