ETV Bharat / state

ರಾಜ್ಯ ಸರ್ಕಾರಕ್ಕೆ ರೈತರ ನೆರವಿಗೆ ಬರಬೇಕು ಅನ್ನೋ ಆಸಕ್ತಿ ಇಲ್ಲ: ಸಿ ಟಿ ರವಿ - C T Ravi Statement

ಕೇಂದ್ರದಿಂದ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನಾದರೂ ಸರ್ಕಾರ ಪ್ರಾಮಾಣಿಕವಾಗಿ ರೈತರಿಗೆ ತಲುಪಿಸಲಿ ಎಂದು ಸಿ ಟಿ ರವಿ ಚಾಟಿ ಬೀಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ರೈತರ ನೆರವಿಗೆ ಬರಬೇಕು ಅನ್ನೋ ಆಸಕ್ತಿ ಇಲ್ಲ: ಸಿಟಿ ರವಿ

author img

By ETV Bharat Karnataka Team

Published : Apr 27, 2024, 11:00 PM IST

ರಾಜ್ಯ ಸರ್ಕಾರಕ್ಕೆ ರೈತರ ನೆರವಿಗೆ ಬರಬೇಕು ಅನ್ನೋ ಆಸಕ್ತಿ ಇಲ್ಲ: ಸಿ ಟಿ ರವಿ

ಚಿಕ್ಕಮಗಳೂರು: ರಾಜ್ಯ ಸರ್ಕಾರಕ್ಕೆ ರೈತರ ನೆರವಿಗೆ ಬರಬೇಕು ಅನ್ನೋ ಆಸಕ್ತಿ ಇಲ್ಲ. ರೈತರ ವಿಷಯದಲ್ಲಿ ರಾಜಕಾರಣ ಮಾಡಬೇಕೆಂಬುದರಲ್ಲೇ ಆಸಕ್ತಿ ಹೆಚ್ಚಾಗಿತ್ತು ಎಂದು ಮಾಜಿ ಶಾಸಕ ಸಿ ಟಿ ರವಿ ಟೀಕಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಈಗ ಕೇಂದ್ರದಿಂದ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನಾದರೂ ಸರ್ಕಾರ ಪ್ರಾಮಾಣಿಕವಾಗಿ ತಲುಪಿಸಲಿ, 600ಕ್ಕೂ ಹೆಚ್ಚು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಸಾಮಾನ್ಯ ಸಂಗತಿಯಲ್ಲ. ಹಿಂದೆ ನಿಮ್ಮ ಒಬ್ಬ ಸಚಿವ ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದ್ದರು. ಇದು ರೈತರ ಬಗ್ಗೆ ಇವರಿಗಿರುವ ಕಾಳಜಿಯನ್ನು ತೋರಿಸುತ್ತದೆ ಎಂದರು.

ರೈತ ಸಂಕಷ್ಟಕ್ಕೆ ಒಳಗಾಗಿ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಹಣಕ್ಕಾಗಿ ಯಾರಾದ್ರೂ ಆತ್ಮಹತ್ಯೆ ಮಾಡಿಕೊಳ್ಳುತ್ತಾರಾ? ರೈತರ ಸಂಕಷ್ಟಗಳಿಗೆ ಸ್ಪಂದಿಸಿ, ಸ್ಥಳದಲ್ಲೇ ಉದ್ಯೋಗ ಸೃಷ್ಟಿಸಬೇಕೆಂದು ಆಗ್ರಹ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಯಾದಿಯಾಗಿ ಸಚಿವರು ಶಾಸಕರುಗಳೆಲ್ಲರೂ ಕೇವಲ ರಾಜಕಾರಣ ಮಾಡುವುದರಲ್ಲಿ ನಿರತರಾಗಿದ್ದಾರೆ. ರೈತರ ಸಂಕಷ್ಟಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಸಿ ಟಿ ರವಿ ಆರೋಪಿಸಿದರು.

ಇದನ್ನು ಇಲ್ಲಿಗೆ ನಿಲ್ಲಿಸಿ. ಇನ್ನು ಮುಂದೆಯಾದರೂ ಪ್ರಾಮಾಣಿಕವಾಗಿ ಪ್ರಯತ್ನಿಸಿ, ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಗೆ ಚಾಲನೆ ಕೊಡಿ, ತಕ್ಷಣ ಕೇಂದ್ರದ 6 ಸಾವಿರದ ಜೊತೆಗೆ ನೀವು 6 ಸಾವಿರ ಸೇರಿಸಿ 12000 ರೂ. ಕೊಡಿ, ಹಾಲು ಉತ್ಪಾದಕರ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಿ, ಜಾಹೀರಾತು ಕೊಡುವ ಹಣದ ಅರ್ಧದಲ್ಲಿ ಸಬ್ಸಿಡಿಯನ್ನೇ ಕೊಡಬಹುದಿತ್ತು. ನಿಮಗೆ ಜಾಹೀರಾತು ಕೊಡುವುದಕ್ಕೆ ಹಣ ಇದೆ. ಸಗಣಿ ಬಾಚಿ ಕಷ್ಟಪಡುವ ಮಹಿಳೆಗೆ ಸಬ್ಸಿಡಿ ಕೊಡದೆ ಇರುವುದು ದುರದೃಷ್ಟಕರ. ತಕ್ಷಣ ಹಾಲಿನ ಸಬ್ಸಿಡಿ ದರವನ್ನು ಬಿಡುಗಡೆ ಮಾಡಿ, ರೈತ ವಿದ್ಯಾನಿಧಿ ಸ್ಥಗಿತಗೊಳಿಸಿದ್ದು ಯಾವ ರೀತಿಯ ನ್ಯಾಯ? ನೀವು ನ್ಯಾಯದ ಬಗ್ಗೆ ಮಾತಾನಾಡುತ್ತೀರಿ, ನ್ಯಾಯದ ಮಾತಾಡುವ ಸಂದರ್ಭದಲ್ಲಿ ಇದು ಎಷ್ಟು ಸರಿ? ಇದು ರೈತ ಮಕ್ಕಳಿಗೆ ಮಾಡುವ ಅನ್ಯಾಯ ಅಲ್ಲವೇ? ಸಿ ಟಿ ರವಿ ಪ್ರಶ್ನಿಸಿದರು.

ಇದನ್ನೂ ಓದಿ: ಬರ ಪರಿಹಾರ: ಒಂದೇ ಬಾರಿಗೆ ದೊಡ್ಡ ಮೊತ್ತ ಬಿಡುಗಡೆ ಮಾಡಿದ ಕೇಂದ್ರಕ್ಕೆ ಅಭಿನಂದನೆ - ಬೊಮ್ಮಾಯಿ - drought relief fund

ETV Bharat Logo

Copyright © 2024 Ushodaya Enterprises Pvt. Ltd., All Rights Reserved.