ETV Bharat / state

ರಾಹುಲ್ ಗಾಂಧಿ ದೇಶದ ಕ್ಷಮೆ ಕೇಳಲಿ: ಸಿ.ಟಿ.ರವಿ - MLC C T Ravi

ತಮ್ಮನ್ನು ಹಿಂದೂ ಧರ್ಮದ ಅನುಯಾಯಿಗಳೆಂದು ಕರೆದುಕೊಳ್ಳುವ ಬಿಜೆಪಿ ಹಾಗೂ ಆರೆಸ್ಸೆಸ್​​ ನಾಯಕರು ಹಿಂಸೆ ಮತ್ತು ಅಸತ್ಯದ ಬಗ್ಗೆ ಮಾತನಾಡುತ್ತಾರೆ ಎಂದು ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದರು.

MLC C T Ravi
ವಿಧಾನ ಪರಿಷತ್​ ಸದಸ್ಯ ಸಿ.ಟಿ.ರವಿ (ETV Bharat)
author img

By ETV Bharat Karnataka Team

Published : Jul 2, 2024, 7:06 AM IST

Updated : Jul 2, 2024, 11:36 AM IST

ಚಿಕ್ಕಮಗಳೂರು: ಲೋಕಸಭಾ ಕಲಾಪದಲ್ಲಿ ಹಿಂದುತ್ವದ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಗೆ ಚಿಕ್ಕಮಗಳೂರಿನಲ್ಲಿ ಸೋಮವಾರ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್​ ಸದಸ್ಯ ಸಿ.ಟಿ.ರವಿ (ETV Bharat)

"ರಾಹುಲ್ ಗಾಂಧಿ ತನ್ನ ಅಯೋಗ್ಯತನವನ್ನು ಪ್ರದರ್ಶನ ಮಾಡಿದ್ದಾರೆ. ಪ್ರತಿಪಕ್ಷ ನಾಯಕನೆನ್ನುವ ಜವಾಬ್ದಾರಿ ಮರೆತಿದ್ದಾರೆ" ಎಂದು ಅವರು ಟೀಕಿಸಿದರು.

"ಹಿಂದೂ ಅಂತ ಹೇಳುವವರು ದ್ವೇಷ ಭಾವನೆ ಬಿತ್ತುವವರು ಎಂಬ ಆರೋಪ ಮಾಡಿದ್ದಾರೆ. ಹಿಂದೂ ಎನ್ನುವುದು ಸರ್ವೇ ಜನಾಃ ಸುಖಿನೋ ಭವಂತು ಎಂಬುದನ್ನು ಪ್ರತಿಪಾದಿಸಿದೆ. ಹಿಂದೂ ಎನ್ನುವುದು ವಿಶ್ವ ಒಂದು ಕುಟುಂಬ ಅಂತ ಭಾವಿಸುವುದು, ಹಿಂದೂ ಎನ್ನುವುದು ಅಣುರೇಣು ತೃಣ ಕಾಷ್ಟಗಳಲ್ಲೂ ಭಗವಂತನನ್ನು ಕಾಣುವುದು, ಹಿಂದೂ ಎಂದರೆ ಮನುಷ್ಯ ಮಾತ್ರವಲ್ಲ ಮರಗಿಡ-ಪ್ರಾಣಿ, ಪಕ್ಷಿಗಳೂ ಚೆನ್ನಾಗಿರಬೇಕೆಂದು ಪ್ರಾರ್ಥಿಸುವುದು" ಎಂದು ಹೇಳಿದರು.

ಮುಂದುವರೆದು, "ರಾಹುಲ್ ಅವರು ಚೊಚ್ಚಲ ಭಾಷಣದಲ್ಲಿಯೇ ನಾನು ಆ ಸ್ಥಾನಕ್ಕೆ ಯೋಗ್ಯನಲ್ಲ. ನನಗೆ ಭಾರತ, ಭಾರತೀಯತೆ, ಹಿಂದೂ, ಹಿಂದುತ್ವದ ಬಗ್ಗೆ ಏನೂ ಗೊತ್ತಿಲ್ಲ ಎನ್ನುವುದನ್ನು ಪ್ರದರ್ಶಿಸಿದ್ದಾರೆ. ಸಹಸ್ರಾರು ವರ್ಷದ ಸನಾತನ ಪರಂಪರಗೆ ಅಪಮಾನದ ಕೆಲಸ ಮಾಡಿರುವ ಅವರು ರಾಷ್ಟ್ರದ ಕ್ಷಮೆ ಯಾಚಿಸಬೇಕು" ಎಂದು ಒತ್ತಾಯಿಸಿದರು.

ಇದನ್ನೂ ಓದಿ: 'ಆಪ್ ಹಿಂದೂ ಹೋ ಹಿ ನಹೀ' ಹೇಳಿಕೆ ವಿಚಾರ: ಕ್ಷಮೆಯಾಚನೆಗೆ ಬಿಜೆಪಿ ಪಟ್ಟು: ನೀಟ್ ಪರೀಕ್ಷೆ ಶ್ರೀಮಂತ ವಿದ್ಯಾರ್ಥಿಗಳಿಗೆ, ಪ್ರತಿಭಾವಂತರಿಗೆ ಅಲ್ಲ: ರಾಗಾ - Rahul Gandhi

Last Updated : Jul 2, 2024, 11:36 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.