ETV Bharat / state

ಔಷಧ ನಿಯಂತ್ರಣ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವಿಲೀನಕ್ಕೆ ಸಂಪುಟ ಅಸ್ತು - CABINET MEETING

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಔಷಧ ನಿಯಂತ್ರಣ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವಿಲೀನಕ್ಕೆ ಒಪ್ಪಿಗೆ ನೀಡಿದೆ.

Minister H. K. Patil
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ (ETV Bharat)
author img

By ETV Bharat Karnataka Team

Published : Dec 6, 2024, 8:00 PM IST

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಪದನಾಮೀಕರಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಂತರ ಈ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಆಯುಕ್ತರನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್​ಡಿಎ) ಇಲಾಖೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಎರಡು ಇಲಾಖೆಗಳ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಕಾರ್ಯವೈಖರಿಗಳು ಬಹುತೇಕ ಒಂದೇ ರೀತಿಯಲ್ಲಿರುವುದರಿಂದ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಿ, ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಎಂದು ಮರು ಪದನಾಮೀಕರಿಸುವುದರಿಂದ ಇಲಾಖೆಯ ಕಾರ್ಯಗಳನ್ನು ಸುಗಮವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.

ರಾಜಸ್ಥಾನ, ಮಹಾರಾಷ್ಟ್ರ, ತಮಿಳುನಾಡು, ಉತ್ತರ ಪ್ರದೇಶ, ಗುಜರಾತ್, ಅಸ್ಸಾಂ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಈಗಾಗಲೇ ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗಳು ವಿಲೀನಗೊಳಿಸಿ, ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ರಾಜ್ಯದಲ್ಲಿಯೂ ಸಹ ಔಷಧ ನಿಯಂತ್ರಣ ಇಲಾಖೆ ಮತ್ತು ಆಹಾರ ಸುರಕ್ಷತೆ ಇಲಾಖೆಗಳನ್ನು ವಿಲೀನಗೊಳಿಸುವ ಅಗತ್ಯವಿದೆ ಎಂದು ಪ್ರಸ್ತಾಪಿಸಲಾಗಿತ್ತು. ಹಾಗಾಗಿ, ಇಂದು ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಆರೋಗ್ಯ ಪ್ರಯೋಗಶಾಲೆಗಳ ಪರಿಕರ ಖರೀದಿಗೆ ಅನುಮೋದನೆ: ರಾಷ್ಟ್ರೀಯ ಉಚಿತ ರೋಗ ಪತ್ತೆ ಹಾಗೂ ಉಚಿತ ಔಷಧಿ ಸೇವೆಗಳ ಕಾರ್ಯಕ್ರಮದಡಿ ಉಪ ಕೇಂದ್ರಗಳ ಮಟ್ಟದಲ್ಲಿ 14 ಪ್ರಯೋಗಶಾಲಾ ಪರೀಕ್ಷೆಗಳು, ಗ್ರಾಮಾಂತರ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ 63 ಪ್ರಯೋಗಶಾಲಾ ಪರೀಕ್ಷೆಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ 97 ಪ್ರಯೋಗಶಾಲಾ ಪರೀಕ್ಷೆಗಳು, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಮಟ್ಟದಲ್ಲಿ 111 ಪ್ರಯೋಗಶಾಲಾ ಪರೀಕ್ಷೆಗಳು, ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ 134 ಪ್ರಯೋಗಶಾಲಾ ಪರೀಕ್ಷೆಗಳನ್ನು ಒದಗಿಸಬೇಕಾಗಿದೆ. ಪ್ರಯೋಗಾಲಯದ ಉಪಕರಣಗಳಿಗೆ 19.70 ಕೋಟಿ ರೂ. ಅನುದಾನ ನೀಡಲು ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ : ರಾಜ್ಯದಲ್ಲಿರುವ ಒಟ್ಟು ಅಲ್ಪಸಂಖ್ಯಾತರ ಜನಸಂಖ್ಯೆಯಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ, ಬೌದ್ದ ಮತ್ತು ಪಾರ್ಸಿ ಸಮುದಾಯಗಳ ಜನಸಂಖ್ಯೆ ಪ್ರಮಾಣವು ತುಂಬಾ ಕಡಿಮೆ ಇರುವುದರಿಂದ ಅಲ್ಪಸಂಖ್ಯಾತರ ಸಮುದಾಯದವರು ನಡೆಸುವ ಶೈಕ್ಷಣಿಕ ಸಂಸ್ಥೆಗಳನ್ನು ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸಲು ಪ್ರಸ್ತುತ ಜಾರಿಯಲ್ಲಿರುವ ನಿಯಮ ಮತ್ತು ಆದೇಶಗಳಲ್ಲಿ ನಿಗದಿಪಡಿಸಿರುವ ಶೇಕಡಾವಾರು ವಿದ್ಯಾರ್ಥಿಗಳು ಲಭ್ಯವಾಗುವುದು ಕಷ್ಟವಾಗಿದೆ. ಹಾಗಾಗಿ, ಈ ನಿಯಮಗಳಿಗೆ ತಿದ್ದುಪಡಿ ತರಲು ಪ್ರಸ್ತಾಪಿಸಲಾಗಿತ್ತು. ಇದೀಗ "ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು) (ಕಾಲೇಜು ಶಿಕ್ಷಣ) (ತಿದ್ದುಪಡಿ) ನಿಯಮಗಳು, 2024" ಕ್ಕೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಅಲ್ಪಸಂಖ್ಯಾತರ ಶೇ. 25ರಷ್ಟು ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಿದ ಶಿಕ್ಷಣ ಸಂಸ್ಥೆಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವುದಾಗಿ ಕರಡು ಅಧಿಸೂಚನೆಯನ್ನು 2018ರಲ್ಲಿ ಹಿಂದಿನ ಸರ್ಕಾರ ಹೊರಡಿಸಿತ್ತು. ಅದಕ್ಕೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿತ್ತು. ಈಗ ಎರಡನೇ ಬಾರಿಗೆ ಕಾಂಗ್ರೆಸ್ ಸರ್ಕಾರ ಷರತ್ತನ್ನು ತೆಗೆದುಹಾಕಲು ತೀರ್ಮಾನಿಸಿದೆ. ಹಿಂದೆ‌ ಕೇವಲ ಪ್ರಾಥಮಿಕ, ಪ್ರೌಢ ಶಿಕ್ಷಣಕ್ಕೆ ಸೀಮಿತವಾಗಿದ್ದ ಈ ಆದೇಶವನ್ನು ತಾಂತ್ರಿಕ, ಉನ್ನತ ಶಿಕ್ಷಣ ಇಲಾಖೆಗೂ ವಿಸ್ತರಿಸುವ ಸಂಬಂಧ ಸಂಪುಟ‌ ಸಭೆ ಚರ್ಚೆ ನಡೆಸಿ ಅನುಮೋದನೆ ನೀಡಲಿದೆ ಎಂದು ತಿಳಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಬಾಣಂತಿಯರು ಸಾವು ಪ್ರಕರಣ ಚರ್ಚೆ : ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ ಆಸ್ಪತ್ರೆಯಲ್ಲಿ ನಡೆದ ಬಾಣಂತಿಯರ ಸಾವು ಪ್ರಕರಣ ಚರ್ಚೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಈ ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನಂತರ ಬಹಳ ಜಾಗೃತೆ ವಹಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡಿದರು ಎಂದು ಸಚಿವ ಹೆಚ್. ಕೆ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಅಕ್ರಮ ಕಲ್ಲು ಗಣಿಗಾರಿಕೆಯಿಂದ ರಾಜಧನ, ಒನ್ ಟೈಂ ಸೆಟ್ಲ್‌ಮೆಂಟ್ ಆಧಾರದಲ್ಲಿ ದಂಡ ವಸೂಲಿಗೆ ಸರ್ಕಾರ ಒಪ್ಪಿಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.