ETV Bharat / state

ರಾಯಚೂರು ವಿವಿ ಇನ್ಮುಂದೆ 'ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ': ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು ಹೀಗಿವೆ

ರಾಯಚೂರು ವಿಶ್ವವಿದ್ಯಾಲಯಕ್ಕೆ 'ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ' ಎಂದು ಮರುನಾಮಕರಣ ಮಾಡಲು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

Law Minister H K Patil
ಕಾನೂನು ಸಚಿವ ಹೆಚ್.ಕೆ.ಪಾಟೀಲ್ (ETV Bharat)
author img

By ETV Bharat Karnataka Team

Published : 4 hours ago

Updated : 3 hours ago

ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯಕ್ಕೆ 'ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ' ಎಂದು ಮರುನಾಮಕಾರಣ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಕುರಿತು ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಸಂಪುಟ ಸಭೆಯಲ್ಲಿ ಚಳಿಗಾಲದ ಅಧಿವೇಶನ ನಡೆಸುವ ದಿನಾಂಕ ನಿಗದಿ ಮಾಡುವ ಅಧಿಕಾರವನ್ನು ಸಿಎಂಗೆ ನೀಡಲಾಗಿದೆ. ಡಿಸೆಂಬರ್ ಎರಡನೇ ಅಥವಾ ಮೂರನೇ ವಾರದಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚೆಯಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಂತಿಮ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು.

ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ (ETV Bharat)

ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು:

  • ಬೀಜೋತ್ಪಾದನಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು, ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು ಮತ್ತು ಜೈವಿಕ ನಿಯಂತ್ರಣ/ಪರತಂತ್ರ ಜೀವಿ ಪ್ರಯೋಗಾಲಯಗಳು ಈ ನಾಲ್ಕು ಘಟಕಗಳನ್ನು ಒಂದೇ ಸೂರಿನಡಿ ತಂದು ಅಭಿವೃದ್ಧಿಪಡಿಸಲು 'ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ' ಸ್ಥಾಪಿಸಲು ಒಪ್ಪಿಗೆ.
  • ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗಳಿಗೆ ಅಭಿಯೋಜನಾ ಇಲಾಖೆಯ 12 ನಿವೃತ್ತ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇರೆಗೆ ನೇಮಕಕ್ಕೆ ಒಪ್ಪಿಗೆ.
  • ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ, 2024ಕ್ಕೆ ಅನುಮೋದನೆ.
  • ಕರ್ನಾಟಕ ಗೃಹ ಮಂಡಳಿಯ ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲೂಕು, ಸೂರ್ಯನಗರ 1ನೇ ಹಂತದ ನಿವೇಶನ ಸಂಖ್ಯೆ 953 ಮತ್ತು 454, 455ರಲ್ಲಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಎರಡು ಬಹುಮಹಡಿ ವಸತಿ ಸಮುಚ್ಚಯಗಳನ್ನು (50 ಮತ್ತು 40 ಫ್ಲಾಟ್‌ಗಳು) ನಿರ್ಮಿಸುವ ಒಟ್ಟು 101 ಕೋಟಿ ರೂ.ಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
  • ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿರುವ ಶಿವಮೊಗ್ಗ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿಗೆ ರೂ. 127.44 ಕೋಟಿಗಳ ಹೆಚ್ಚುವರಿ ಮೊತ್ತಕ್ಕೆ ಅನುಮೋದನೆ.
  • ದೇವನಹಳ್ಳಿ - ವಿಜಯಪುರ - ಹೆಚ್. ಕ್ರಾಸ್ - ಮಾಲೂರು ತಮಿಳುನಾಡು ಗಡಿವರೆಗೆ (ಮಾಲೂರು-ಹೊಸಕೋಟೆ ರಸ್ತೆ ಸೇರಿದಂತೆ) 110.40 ಕಿ. ಮೀ ಉದ್ದದ ರಸ್ತೆಯನ್ನು ಹೈಬ್ರಿಡ್ ವರ್ಷಾಸನ ಮಾದರಿಯಲ್ಲಿ (HAM) ಒಟ್ಟಾರೆ ರೂ. 3,190 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಆಡಳಿತಾತ್ಮಕ ಅನುಮೋದನೆ.
  • ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿನ 16 ಸ್ವಾಧೀನದಾರರನ್ನು ಸ್ಥಳಾಂತರಿಸಿ, ಪುನರ್ ವಸತಿಗಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾದಿಓಣಿ ಗ್ರಾಮದ ಸರ್ವೆ ನಂ. 20, 21ರಲ್ಲಿ 33-24 ಎಕರೆ/ ಗುಂಟೆ ಜಮೀನನ್ನು (ಪ್ರತಿ ಕುಟುಂಬಕ್ಕೆ 2 ಎಕರೆ ಸಾಗುವಳಿಗಾಗಿ ಹಾಗೂ 4 ಗುಂಟೆ ವಸತಿಗಾಗಿ) ಉಚಿತವಾಗಿ ಮಂಜೂರು.
  • ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಸಾಮಗ್ರಿಗಳನ್ನು ವಿನ್ಯಾಸಗೊಳಿಸಿ, ಮುದ್ರಿಸಿ, ವಿತರಿಸಲು ಹಾಗೂ ಶಿಕ್ಷಕರಿಗೆ ಅಗತ್ಯ ತರಬೇತಿ ನೀಡುವ ಒಟ್ಟು ರೂ. 14.24 ಕೋಟಿಗಳ ಅಂದಾಜು ಮೊತ್ತದ 'ಓದು ಕರ್ನಾಟಕ' ಚಟುವಟಿಕೆಗೆ ಅನುಮೋದನೆ.
  • ಶಾಲಾ ಶಿಕ್ಷಣ ಇಲಾಖೆಯ 33 ಮಂದಿ "ಗ್ರೇಡ್-1 ವೃತ್ತಿ ಶಿಕ್ಷಕರಿಗೆ ಗ್ರೂಪ್ ಬಿ ವೃಂದದ 'ವಿಷಯ ಪರಿವೀಕ್ಷಕರು (ವೃತ್ತಿ ಶಿಕ್ಷಣ)' ಹುದ್ದೆಗೆ 28.04.2000 ಆದೇಶದಲ್ಲಿ ನಿಗದಿಪಡಿಸಿರುವ ನೇಮಕಾತಿ ವಿಧಾನವನ್ನು ಅನುಸರಿಸಿ ಪದೋನ್ನತಿ ನೀಡಲು ಒಪ್ಪಿಗೆ.
  • ಸಮಾಜ ಕಲ್ಯಾಣ ಇಲಾಖೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ 33 ಘಟಕಗಳನ್ನು ವಿಶೇಷ ಪೊಲೀಸ್ ಠಾಣೆಗಳೆಂದು ಘೋಷಿಸಲು ಹಾಗೂ ಸದರಿ ಠಾಣೆಗಳ ನಿರ್ವಹಣೆಗಾಗಿ ಅಗತ್ಯವಿರುವ 450 ವಿವಿಧ ಹುದ್ದೆಗಳ ಮಂಜೂರಾತಿಗೆ 50:50 ಕೇಂದ್ರ-ರಾಜ್ಯ ಪಾಲು ಇರಲಿದೆ. ಎಫ್​ಐಆರ್ ಹಾಕುವ ಅಧಿಕಾರ ಇರಲಿದೆ.
  • ವೀರಪ್ಪನ್ ಕಾರ್ಯಾಚರಣೆಯ ಎಸ್.ಟಿ.ಎಫ್ ಕಾರ್ಯಪಡೆಯಲ್ಲಿ ಭಾಗವಹಿಸಿದ ಪೊಲೀಸ್ ಸಿಬ್ಬಂದಿಗೆ ನೀಡಿದ ನಿವೇಶನ ಮಂಜೂರಾತಿ ಸೌಲಭ್ಯವನ್ನ ಅದೇ ಎಸ್.ಟಿ.ಎಫ್ ಕಾರ್ಯಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಬ್ಬರು ನಿವೃತ್ತ ವೈದ್ಯಕೀಯ ಅಧಿಕಾರಿ ಮತ್ತು ಇಬ್ಬರು ನಿವೃತ್ತ ಶುಶ್ರೂಷಕರಿಗೂ ವಿಸ್ತರಿಸಿ ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಬಡಾವಣೆಯಲ್ಲಿ ನಿವೇಶನ ಮಂಜೂರಿಗೆ ಅಸ್ತು.
  • ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ ಗುಲಬಾಳ ಹಳ್ಳಿ ಹತ್ತಿರದ ಕೃಷ್ಣಾ ನದಿ ಮೂಲದಿಂದ ಸುಧಾರಿತ ನೀರು ಸರಬರಾಜು ವ್ಯವಸ್ಥೆ ಒದಗಿಸುವ ರೂ. 177.10 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.
  • ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ (BSWML)ನಲ್ಲಿ ರಾಜ್ಯ ಸರ್ಕಾರದ ಈಕ್ವಿಟಿ ಷೇರುಗಳ ಪ್ರಮಾಣವನ್ನು 49% ರಿಂದ 90%ಕ್ಕೆ ಹೆಚ್ಚಿಸಲು ಅನುಮೋದನೆ.
  • ಸುಬ್ಬರಾಯನ್ ಬಿ.ಆರ್. ನಿವೃತ್ತ ಕೆ.ಎ.ಟಿ. ಸದಸ್ಯರು ಇವರಿಗೆ ಹಂಚಿಕೆಯಾಗಿರುವ ಸ‌ರ್. ಎಂ. ವಿಶ್ವೇಶ್ವರಯ್ಯ 6ನೇ ಬ್ಲಾಕ್ ಬಡಾವಣೆಯ 15/24 ಮೀ ಅಳತೆಯ ನಿವೇಶನ ಸಂಖ್ಯೆ 3962ಕ್ಕೆ ಬಡ್ಡಿ ಮೊತ್ತವನ್ನು ಪಾವತಿಸಿಕೊಂಡು, ವಿಶೇಷ ಪ್ರಕರಣವೆಂದು ಪರಿಗಣಿಸಿ, ವಿಳಂಬ ಮನ್ನಾ ಮಾಡಿ, ಸದರಿ ನಿವೇಶನವನ್ನು ನೋಂದಾಯಿಸಿಕೊಡುವ ಬಗ್ಗೆ ಅಸ್ತು.
  • ಮೈಸೂರು ಜಿಲ್ಲೆಯ ವರುಣಾ ಬಳಿ ಚೋರನಹಳ್ಳಿ ಗ್ರಾಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಟಿಟಿಸಿ ಬಹುಕೌಶಲ್ಯಾಭಿವೃದ್ಧಿ ಕೇಂದ್ರವನ್ನು 35 ಕೋಟಿಗಳ ರೂ. ಮೊತ್ತದಲ್ಲಿ ಸ್ಥಾಪನೆಗೆ ಅಸ್ತು.
  • ಬೀದರ್ ವಿಮಾನ ನಿಲ್ದಾಣದ ಬೆಂಗಳೂರು- ಬೀದರ್-ಬೆಂಗಳೂರು ಮಾರ್ಗವಾಗಿ ವಿಮಾನಯಾನ ಕಾರ್ಯಾಚರಣೆಗೆ ಅನುಮೋದನೆ.
  • ಪಾಂಡವಪುರ ತಾಲೂಕು ಮತ್ತು ಟೌನ್‌ನಲ್ಲಿ ಬರುವ ವಿ. ಸಿ ಕಾಲೋನಿಯಲ್ಲಿರುವ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ ಅಸೆಸ್ ಮೆಂಟ್ ಸಂಖ್ಯೆ 471 ರಲ್ಲಿನ 120X200 ಚದರ ಅಡಿ ಅಳತೆಯ ಜಮೀನನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ನಾಗಮಂಗಲ, ಮಂಡ್ಯ ಜಿಲ್ಲೆ ಇವರಿಗೆ ಮಂಜೂರು ಮಾಡಲು ಅನುಮೋದನೆ.
  • ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ.
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಹೊಸದಾಗಿ ಮಂಜೂರು ಮಾಡಿದ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯಗಳನ್ನು ರೂ. 39.07 ಕೋಟಿಗಳ ಮೊತ್ತದಲ್ಲಿ ಒದಗಿಸಲು ಆಡಳಿತಾತ್ಮಕ ಅನುಮೋದನೆ.
  • ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಚರ್ಚೆ.
  • ಬೆಂಗಳೂರಲ್ಲಿ ಪೊಲೀಸ್ ಭವನ ನಿರ್ಮಾಣ ಕಾಮಗಾರಿಗಾಗಿ 102.80 ಕೋಟಿ ಪರಿಷ್ಕೃತ ಮೊತ್ತಕ್ಕೆ ಅನುಮೋದನೆ. 3.16 ಎಕರೆ ಭೂಮಿಯಲ್ಲಿ ಭವನ ನಿರ್ಮಾಣ ಇದಾಗಿದೆ.
  • ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ಗೆ ಅನುಮೋದನೆ. ಸಾಹಸ ಪ್ರವಾಸೋದ್ಯಮ, ಕೃಷಿ, ಕರಾವಳಿ, ಕಾರವಾರ, ಬೀಚ್ ಪ್ರವಾಸೋದ್ಯಮ, ಸಾಂಸ್ಕೃತಿಕ, ಪರಿಸರ, ಶೈಕ್ಷಣಿಕ, ಚಲನಚಿತ್ರ, ಗಾಲ್ಫ್, ಸಾಹಿತ್ಯ, ಕಡಲು, ವೈದ್ಯಕೀಯ, ಗಣಿಗಾರಿಕೆ, ಗ್ರಾಮೀಣ, ಧಾರ್ಮಿಕ, ಚಾರಣ, ಕ್ರೀಡಾ, ವಾರಾಂತ್ಯದ ಪ್ರವಾಸೋದ್ಯಮವನ್ನು ಗುರುತಿಸಿದ್ದು, ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತೇಜಿಸುವ ನೀತಿ ಇದಾಗಿದೆ.

ಇದನ್ನೂ ಓದಿ: LIVE: ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಮುಕ್ತಾಯ - ಹೆಚ್.ಕೆ.ಪಾಟೀಲ್ ಜಂಟಿ ಮಾಧ್ಯಮಗೋಷ್ಟಿ

Last Updated : 3 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.