ETV Bharat / state

ಕಲಬುರಗಿಯಲ್ಲಿ ಇಂದು ಸಚಿವ ಸಂಪುಟ ಸಭೆ, ಈ ಭಾಗದ ಅಭಿವೃದ್ಧಿಗಾಗಿ ಚರ್ಚೆ: ಸಿಎಂ ಸಿದ್ದರಾಮಯ್ಯ - cabinet meeting in kalaburagi

author img

By ETV Bharat Karnataka Team

Published : Sep 16, 2024, 6:26 PM IST

Updated : Sep 17, 2024, 6:11 AM IST

ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ಮಂಗಳವಾರ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಅಲ್ಲಿ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)
ಸಿಎಂ ಸಿದ್ದರಾಮಯ್ಯ (ETV Bharat)

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗವಾದ ಕಲಬುರಗಿಯಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.

371ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ: ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು, ಇದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತು ಬಿಜೆಪಿಯವರಲ್ಲ. ವಾಜಪೇಯಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿದ್ದರು ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ಅನುದಾನ: ಕಾಂಗ್ರೆಸ್ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಿರುವ ಬಗ್ಗೆ ಪ್ರತಿಕ್ರಿಯಿಸಿ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆ ಪ್ರಕರಣದ ಸಂಬಂಧ ಮಾತನಾಡಿ, ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯವೇ ಕಾರಣವೆಂದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಸಂಬಂಧಪಟ್ಟ ಡಿವೈಎಸ್​ಪಿ ಹಾಗೂ ಇನ್ಸ್​​ಪೆಕ್ಟರ್ ​ರನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟು, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಒಕ್ಕಲಿಗ ಸಚಿವರು, ಶಾಸಕರ ನಿಯೋಗದಿಂದ ಸಿಎಂ ಭೇಟಿ; ಮುನಿರತ್ನ ವಿರುದ್ಧ ಕ್ರಮಕ್ಕೆ ಪತ್ರ - BJP MLA Munirathna Remarks Row

Last Updated : Sep 17, 2024, 6:11 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.