ETV Bharat / state

ಕಸ್ತೂರಿ ರಂಗನ್‌ ವರದಿ ತಿರಸ್ಕಾರ ಸೇರಿ ಇತರ ಪ್ರಸ್ತಾವನೆಗಳ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ಚರ್ಚೆ - Cabinet Sub Committee Meeting - CABINET SUB COMMITTEE MEETING

ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಲಾಗಿದ್ದು, ಕಸ್ತೂರಿ ರಂಗನ್‌ ವರದಿ ತಿರಸ್ಕರಿಸುವುದು ಸೇರಿ ಇತರ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಯಿತು.

CABINET SUB COMMITTEE MEETING
ಸಚಿವ ಸಂಪುಟ ಉಪ ಸಮಿತಿ ಸಭೆ (ETV Bharat)
author img

By ETV Bharat Karnataka Team

Published : Sep 20, 2024, 10:57 PM IST

ಬೆಂಗಳೂರು: ಕಸ್ತೂರಿ ರಂಗನ್‌ ನೀಡಿರುವ ವರದಿಯಿಂದ ಪಶ್ಚಿಮಘಟ್ಟ ವ್ಯಾಪ್ತಿಯ ಗ್ರಾಮಗಳ ಜನರಿಗೆ ಹಾನಿಯಾಗದಂತೆ ವರದಿಯನ್ನು ರಾಜ್ಯದ ಪರವಾಗಿ ತಿರಸ್ಕರಿಸುವುದು ಸೇರಿದಂತೆ ಮೂರು ರೀತಿಯ ಪ್ರಸ್ತಾವನೆಗಳನ್ನು ಮುಂದಿನ ಸಚಿವ ಸಂಪುಟ ಸಭೆ ಮುಂದೆ ಮಂಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಜನಪ್ರತಿನಿಧಿಗಳ ಅಭಿಪ್ರಾಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಸಲಾಗಿದೆ. ಈ ಸಂದರ್ಭದಲ್ಲಿ ಕಸ್ತೂರಿ ರಂಗನ್‌ ವರದಿಯಿಂದ ಸ್ಥಳೀಯ ನಿವಾಸಿಗಳಿಗೆ ಅನ್ಯಾಯ ಆಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಹಾಗಾಗಿ, ಕಸ್ತೂರಿ ರಂಗನ್‌ ವರದಿಯನ್ನು ರಾಜ್ಯದಿಂದ ಸಂಪೂರ್ಣ ತಿರಸ್ಕರಿಸಬೇಕು. ಇಲ್ಲದಿದ್ದರೆ ಕಸ್ತೂರಿ ರಂಗನ್‌ ವರದಿ ಆಧರಿಸಿ ರಾಜ್ಯ ವ್ಯಾಪ್ತಿಯಲ್ಲಿನ ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವನ್ನು ಘೋಷಿಸುವಂತೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಅಧಿಸೂಚನೆ ಬದಲಿಗೆ, ಈಗಾಗಲೇ ನಿಗದಿಪಡಿಸಿರುವ 16,114 ಚ.ಕಿ.ಮೀ. ಭೂಮಿಯನ್ನು ಮಾತ್ರ ಪರಿಸರ ಸೂಕ್ಷ್ಮ ವಲಯ ಎಂದು ಪರಿಗಣಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದರ ಜೊತೆಗೆ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಸಂಬಂಧ ಈಗಾಗಲೇ ನಿಗದಿ ಮಾಡಲಾಗಿರುವ 16,114 ಚದರ ಕಿ.ಮೀ ಭೂಪ್ರದೇಶವನ್ನು ಮರು ಸರ್ವೇ ನಡೆಸಬೇಕು. ಆ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್‌ ವರದಿಯನ್ನು ಸಮ್ಮತಿಸಬಹುದು ಎಂದು ಉಪ ಸಮಿತಿಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ‌.

16,114 ಚದರ ಕಿಮೀ ಪರಿಸರ ಸೂಕ್ಷ್ಮ ವಲಯ ನಿಗದಿಗೆ ಅಂಗಿಕಾರ ನೀಡಿದರೆ, ಆ ಪ್ರದೇಶದಲ್ಲಿನ 1,576 ಗ್ರಾಮಗಳ ಜನರ ಜೀವನೋಪಾಲಯಕ್ಕೆ ಸಮಸ್ಯೆಯಾಗಲಿದೆ. ಹೀಗಾಗಿ, ಆ ಗ್ರಾಮಗಳ ಜನರಿಗಾಗಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸುವುದು ಸೇರಿ ಮೂರು ನಿರ್ಧಾರಗಳನ್ನು ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್‌, ಕೆ.ಜೆ.ಜಾರ್ಜ್ ಹಾಗೂ ಮಧು ಬಂಗಾರಪ್ಪ, ಇತರರು ಭಾಗವಹಿಸಿದ್ದರು.

ಇದನ್ನೂ ಓದಿ: ದೇಶದ ಜಿಡಿಪಿ ಬೆಳವಣಿಗೆಯಲ್ಲಿ ರೇಷ್ಮೆ ಬೆಳೆ ಪ್ರಮುಖ ಪಾತ್ರ ವಹಿಸಿದೆ: ಹೆಚ್‌.ಡಿ.ಕುಮಾರಸ್ವಾಮಿ - H D Kumaraswamy

ETV Bharat Logo

Copyright © 2025 Ushodaya Enterprises Pvt. Ltd., All Rights Reserved.