ETV Bharat / state

ಶಿವಮೊಗ್ಗ: ಗುತ್ತಿಗೆ ಆಧಾರದಲ್ಲಿ ವಿವಿಧ ವೈದ್ಯಕೀಯ ಹುದ್ದೆಗಳ ನೇರ ಸಂದರ್ಶನಕ್ಕೆ ಕರೆ - Call for direct Interview

author img

By ETV Bharat Karnataka Team

Published : Jul 4, 2024, 6:59 AM IST

ಜುಲೈ 11ರಂದು ಬೆಳಗ್ಗೆ 10.30 ರಿಂದ ಮಾಧ್ಯಾಹ್ನ 1.30ರ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದ ಎನ್‍ಹೆಚ್‍ಎಂ ವಿಭಾಗದಲ್ಲಿ ಅರ್ಜಿ ನಮೂನೆಗಳನ್ನು ವಿತರಿಸಿ, ಅದೇ ದಿನ ಸಂಜೆ 5.30ರ ವರೆಗೆ ನೇರ ಸಂದರ್ಶನ ನಡೆಯಲಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ ಮತ್ತು ಎನ್‍ಯುಹೆಚ್‍ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿ, ನೇರ ಸಂದರ್ಶನಕ್ಕೆ ಕರೆ ನೀಡಿದೆ.

ಖಾಲಿ ಇರುವ ಹುದ್ದೆಗಳ ವಿವರ: ಇಎನ್‍ಟಿ ಸರ್ಜನ್ -1, ಅರವಳಿಕೆ ತಜ್ಞರು -2, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು-1, ವೈದ್ಯರು-24, ನೇತ್ರ ಸಹಾಯಕರು-2, ಆಡಿಯೋಮೆಟ್ರಿಕ್ ಅಸಿಸ್ಟೆಂಟ್-1, ಶ್ರವಣದೋಷವುಳ್ಳ ಮಕ್ಕಳ ಬೋಧಕರು-1, ತಾಲೂಕು ಆಶಾ ಮೇಲ್ವಿಚಾರಕರು-1, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು (ಕಿ.ಮ.ಆ.ಸ) ಎನ್‍ಹೆಚ್‍ಎಂ-2 ಮತ್ತು ಎನ್‍ಯುಹೆಚ್‍ಎಂ-1, ಶುಶ್ರೂಷಕಿಯರು (ಶುಶ್ರೂಷಣಾಧಿಕಾರಿಗಳು ಮಹಿಳೆಯರು)-24, ಕಿರಿಯ ಪುರುಷ ಆರೋಗ್ಯ ಸಹಾಯಕರು (ಆರೋಗ್ಯ ನಿರೀಕ್ಷಣಾಧಿಕಾರಿಗಳು)-1, ಡಿಇಐಸಿ ಮ್ಯಾನೇಜರ್ -1 ಹುದ್ದೆಗಳು.

ತಜ್ಞವೈದ್ಯರು ಮತ್ತು ವೈದ್ಯರು ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿಭಾಯಿಸಲು ಅರ್ಹರಿರಬೇಕು. ಅದಕ್ಕಾಗಿ ದೈಹಿಕ ಪ್ರಮಾಣ ಪತ್ರ ನೀಡಬೇಕು. ಹಾಗೂ ಕೆಎಂಸಿಯ ನೋಂದಣಿಯನ್ನು ಹೊಂದಿರಬೇಕು. ಸರ್ಕಾರದ ನಿಯಮಾವಳಿಯಂತೆ ಎನ್.ಹೆಚ್.ಎಂ ಅಥವಾ ಎನ್‍ಯುಹೆಚ್‍ಎಂ ಮಾರ್ಗಸೂಚಿಯಂತೆ ಹುದ್ದೆವಾರು ವಯೋಮಿತಿಯನ್ನು ಪರಿಗಣಿಸಲಾಗುವುದು. ಹುದ್ದೆಗಳನ್ನು ಕಡಿತಗೊಳಿಸುವುದು, ಹೆಚ್ಚಿಸುವುದು ಹಾಗೂ ಅರ್ಜಿಯನ್ನು ತಿರಸ್ಕರಿಸುವಲ್ಲಿ ಜಿಲ್ಲಾ ಆರೋಗ್ಯ ಸಂಘದ ನಿರ್ಧಾರವೇ ಅಂತಿಮವಾಗಿರುತ್ತದೆ.

ಎನ್.ಹೆಚ್.ಎಂ ಅಥವಾ ಎನ್‍ಯುಹೆಚ್‍ಎಂ ಮಾರ್ಗಸೂಚಿಯಂತೆ ನೇಮಕಾತಿಯ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲಿನ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಗಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಹಾಗೂ ಕ್ರ.ಸಂ 11ಕ್ಕೆ ಸಂಬಂಧಿಸಿದಂತೆ ವಾಸಸ್ಥಳದ ಬಗ್ಗೆ ಪಾಲಿಕೆ ಅಥವಾ ಸಂಬಂಧಿಸಿದ ಪಂಚಾಯತ್‍ನಿಂದ ದೃಢೀಕರಣ ಪತ್ರ ಮತ್ತು ಸ್ವ-ವಿವರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ದಿನಾಂಕ: ಜುಲೈ 11ರಂದು ಬೆಳಗ್ಗೆ 10.30 ರಿಂದ ಮಾಧ್ಯಾಹ್ನ 1.30ರ ವರೆಗೆ ಶಿವಮೊಗ್ಗದ ಬಿ.ಹೆಚ್​ ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದ ಎನ್‍ಹೆಚ್‍ಎಂ ವಿಭಾಗದಲ್ಲಿ ಅರ್ಜಿ ನಮೂನೆಗಳನ್ನು ವಿತರಿಸಲಾಗುವುದು. ಹಾಗೂ ಅದೇ ದಿನ ಎಲ್ಲಾ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ನಡೆಸಿ, ಸಂಜೆ 5.30ರ ವರೆಗೆ ನೇರ ಸಂದರ್ಶನ ನಡೆಸಲಾಗುವುದು. ಹೆಚ್ಚಿನ ಮಾಹಿತಿಗೆ ದೂ.ಸಂ: 08182-200337 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಸಂಘ ಹಾಗೂ ಜಿಲ್ಲಾ ಆರ್​ಸಿಹೆಚ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಐಸಿಟಿ ಜೊತೆ ಕೈಜೋಡಿಸಿದ ಇನ್ಫೋಸಿಸ್;​​ 48 ಸಾವಿರ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ, ಉದ್ಯೋಗಾವಕಾಶ - Infosys skill development project

ETV Bharat Logo

Copyright © 2024 Ushodaya Enterprises Pvt. Ltd., All Rights Reserved.