ETV Bharat / state

ಉಡುಪಿ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆಗೆ ಕರೆ - KASTURI RANGAN REPORT

ಕಸ್ತೂರಿ ರಂಗನ್‌ ವರದಿ ಜಾರಿ ಮಾಡದಂತೆ ಆಗ್ರಹಿಸಿ ಪ್ರತಿಭಟನೆಯ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ಸಂಬಂಧಿಸಿದ ಇಲಾಖೆಗೆ ಎಚ್ಚರಿಕೆ ನೀಡಲು ನಿರ್ಧರಿಸಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಉದಯಕುಮಾರ್ ಶೆಟ್ಟಿ
ಉದಯಕುಮಾರ್ ಶೆಟ್ಟಿ (ETV Bharat)
author img

By ETV Bharat Karnataka Team

Published : Oct 14, 2024, 3:57 PM IST

ಉಡುಪಿ: ರಾಜ್ಯದ ಪಶ್ಚಿಮ ಘಟ್ಟದ ತಪ್ಪಲ ಜನರಿಂದ ಕಸ್ತೂರಿ ರಂಗನ್ ವರದಿ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಕಾರ್ಕಳ, ಬೈಂದೂರು, ಜಡ್ಕಲ್ ಮತ್ತು ಮೂದುರು ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿಯನ್ನು ಸಹ ನೀಡಿದ್ದಾರೆ. ಈಗ ಮತ್ತೆ ಕಸ್ತೂರಿ ರಂಗನ್ ವರದಿ ಜಾರಿ ವಿಚಾರ ಮುನ್ನೆಲೆಗೆ ಬಂದಿದೆ. ಇದನ್ನು ಜನರು ಮಾತ್ರವಲ್ಲದೇ ಸರ್ವ ಪಕ್ಷಗಳ ನಾಯಕರೂ ಖಂಡಿಸುತ್ತಿದ್ದಾರೆ.

ಪಶ್ಚಿಮ ಘಟ್ಟದ ಜೀವ ವೈವಿಧ್ಯತೆ ಉಳಿವಿಗೆ, ಭೂ ಕಬಳಿಕೆ, ಅಭಿವೃದ್ಧಿ ಹೆಸರಲ್ಲಿ ಅರಣ್ಯ ನಾಶ, ಭೂಗರ್ಭ ಬಗೆದು ಅವಾಂತರ ಸೃಷ್ಟಿಸುತ್ತಿರುವುದನ್ನು ತಡೆದು ಪ್ರಾಕೃತಿಕ ಸಮತೋಲನ ಕಾಪಾಡಲು ಕಸ್ತೂರಿ ರಂಗನ್ ಸಿದ್ಧಪಡಿಸಿದ ಪಶ್ಚಿಮ ಘಟ್ಟ ಉಳಿಸುವ ವರದಿ ಜಾರಿಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಪ್ರಸ್ತಾಪವನ್ನು ಆರನೇ ಬಾರಿಗೆ ಕಳುಹಿಸಿದೆ.

ಉದಯಕುಮಾರ್ ಶೆಟ್ಟಿ (ETV Bharat)

ಕಾರ್ಕಳ, ಕುಂದಾಪುರ ಸಮೀಪದ ಕೊಲ್ಲೂರು ಭಾಗದಲ್ಲಿನ ಜಡ್ಕಲ್, ಮುದೂರು ವ್ಯಾಪ್ತಿಯ ಸುಮಾರು 18 ಜನವಸತಿ ಪ್ರದೇಶಗಳು ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಗೆ ಒಳಪಟ್ಟಿವೆ. ಈ ಜನವಸತಿ ಪ್ರದೇಶಗಳಲ್ಲಿ 20 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದೆ. ಅದರಲ್ಲೂ ಮುಖ್ಯವಾಗಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಕೊರಗ ಜನಾಂಗ, ಮರಾಠಿ, ಹಸಲ ಸಮುದಾಯದವರು ಇಲ್ಲಿ ವಾಸ ಮಾಡುತ್ತಾರೆ. ಆದಿ ದ್ರಾವಿಡ ಜನಾಂಗದ ಪರಿಶಿಷ್ಟ ಜಾತಿ, ಪಂಗಡದ ಜನರು ಹೆಚ್ಚಾಗಿ ಇಲ್ಲಿ ನೆಲೆಸಿದ್ದಾರೆ. ಅನಾದಿ ಕಾಲದಿಂದ ಪ್ರಕೃತಿಯೊಂದಿಗೆ ಬದುಕು ಸಾಗಿಸುತ್ತಿದ್ದಾರೆ. ಯೋಜಿತ ರೀತಿಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಯಾದರೆ ಈ ಜನರನ್ನು ಸ್ಥಳಾಂತರಿಸುವ ಸಾಧ್ಯತೆಯಿದೆ.

ಈ ಕುರಿತು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಮಾತನಾಡಿ, "ಸರ್ವ ಪಕ್ಷಗಳ ನಾಯಕರು, ಕಾರ್ಯಕರ್ತರು, ಮುಖಂಡರು ಸೇರಿ ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ತಡೆಯಲು ಪ್ರತಿಭಟನೆಯ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ಸಂಬಂಧಿಸಿದ ಇಲಾಖೆಗೆ ಎಚ್ಚರಿಕೆ ನೀಡಲು ನಿರ್ಧರಿಸಿದ್ದೇವೆ. ಮೊದಲ ಹಂತದಲ್ಲಿ ಮೆರವಣಿಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುವುದು. ಸರ್ಕಾರ ಇದ್ಯಾವುದನ್ನೂ ಲೆಕ್ಕಿಸದಿದ್ದರೆ ದೊಡ್ಡಮಟ್ಟದಲ್ಲಿ ಪ್ರತಿಭಟನೆ ಮಾಡಲಿದ್ದೇವೆ" ಎಂದು ಎಚ್ಚರಿಕೆ ಸಂದೇಶ ರವಾನಿಸಿದರು.

ಇದನ್ನೂ ಓದಿ: ಸಿಎಂ ತೆರಳುತ್ತಿದ್ದ ಮಾರ್ಗದಲ್ಲಿ ಪ್ರತಿಭಟನೆ: ಬಳ್ಳಾರಿಯಲ್ಲಿ ಭೂ ಸಂತ್ರಸ್ತ ಹೋರಾಟಗಾರರು ಪೊಲೀಸ್​​ ವಶಕ್ಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.